T20 ವಿಶ್ವಕಪ್ | ರೋಹಿತ್ ಶರ್ಮಾ ನಾಯಕತ್ವ ‘ವಂಡರ್ ಫುಲ್’ ಎಂದ ಕಪಿಲ್ ದೇವ್

Date:

10 ವರ್ಷದ ಬಳಿಕ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಅರ್ಹತೆ ಪಡೆದಿದ್ದು, ದಕ್ಷಿಣ ಆಫ್ರಿಕಾದ ಸವಾಲನ್ನು ಎದುರಿಸಲಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಲೆಜೆಂಡರಿ ಕಪಿಲ್ ದೇವ್ ಅವರು ಟೀಂ ಇಂಡಿಯಾ ಮತ್ತು ನಾಯಕ ರೋಹಿತ್ ಶರ್ಮಾ ಅವರನ್ನು ಹೊಗಳಿದ್ದಾರೆ.

2007ರಲ್ಲಿ ಭಾರತ ತಂಡ ವಿಶ್ವಕಪ್ ವಿಜೇತವಾಗಿತ್ತು. ಇದೀಗ, ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ಗುರಿ ಹೊಂದಿದೆ. ಒಟ್ಟಾರೆಯಾಗಿ ಮೂರನೇ ಸಲ ಫೈನಲ್ಗೇರಿದ ಸಾಧನೆ ಮಾಡಿದೆ. 2014ರಲ್ಲಿ ಭಾರತ ರನ್ನರ್ ಅಪ್ ಆಗಿತ್ತು.

ವೆಸ್ಟ್ಇಂಡೀಸ್ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಜೂನ್ 27ರಂದು ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ಅನ್ನು 68 ರನ್‌ಗಳಿಂದ ಭಾರತ ಸೋಲಿಸಿದೆ. ಟಾಸ್ ಸೋತರೂ ಭಾರತವು ಇಂಗ್ಲೆಂಡ್ ಅನ್ನು ಸಂಪೂರ್ಣವಾಗಿ ಆಲೌಟ್ ಮಾಡಿತು. 10 ವರ್ಷಗಳ ಬಳಿಕ ಇಂಡಿಯಾ ತಂಡ ಟಿ-20 ಫೈನಲ್ತಲುಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ 1983ರಲ್ಲಿ ಭಾರತದ ಚೊಚ್ಚಲ ಏಕದಿನ ವಿಶ್ವಕಪ್ ವಿಜೇತ, ಮಾಜಿ ನಾಯಕ ಕಪಿಲ್ ದೇವ್ ಅದ್ಭುತಎಂದು ಕರೆದಿದ್ದಾರೆ. ಇದುವರೆಗಿನ ಪ್ರಯಾಣಕ್ಕಾಗಿ ಎಲ್ಲ ಆಟಗಾರರಿಗೆ ಶುಭಾಶಯಗಳು, ರೋಹಿತ್ ನಾಯಕತ್ವದಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? T20 ವಿಶ್ವಕಪ್ | ಸ್ಪಿನ್ನರ್ಸ್‌ಗಳ ಮೋಡಿಗೆ ಇಂಗ್ಲೆಂಡ್ ‘ಬಲಿ’; 10 ವರ್ಷಗಳ ಬಳಿಕ ಫೈನಲ್‌ಗೆ ಟೀಮ್ ಇಂಡಿಯಾ

“ಸ್ಪರ್ಧೆಯಲ್ಲಿ ಭಾರತವು ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. ಇದು ಅದ್ಭುತವಾಗಿದೆ. ಯಾರಾದರೂ ಫೈನಲ್ಗೆ ಬಂದರೆ ಅವರು ಎಷ್ಟು ಅದ್ಭುತವಾಗಿ ಆಡಿದ್ದಾರೆ ಎಂದು ನೀವು ಹೇಳುತ್ತೀರಿ. ಆಗ ಒಬ್ಬರ ಹೆಸರಲ್ಲ ಇಡೀ ತಂಡ ತೆಗೆದುಕೊಳ್ಳುತ್ತೇವೆ. ನಾನು ಯಾವಾಗಲೂ ತಂಡವನ್ನು ನಂಬುತ್ತೇನೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಅದ್ಭುತವಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ” ಎಂದು ಕಪಿಲ್ ದೇವ್ ತಿಳಿಸಿದ್ದಾರೆ.

“ರೋಹಿತ್ಶರ್ಮಾ ಅವರು ಮೈದಾನದಲ್ಲಿ ಎಂತಹ ಸನ್ನಿವೇಶದಲ್ಲೂ ವಿರಾಟ್ಕೊಹ್ಲಿ ರೀತಿ ಹುಚ್ಚೆದ್ದು ಕುಣಿಯುವುದಿಲ್ಲ. ಅವರು ತಮ್ಮ ಸ್ಥಿಮಿತವನ್ನು ತುಂಬಾ ಚೆನ್ನಾಗಿ ಅರಿತುಕೊಂಡಿದ್ದಾರೆ. ಅದಕ್ಕೆ ತಕ್ಕಂತೆಯೇ ಮೈದಾನದಲ್ಲಿ ವರ್ತಿಸುತ್ತಾರೆ. ಆತನಿಗಿಂತ ಉತ್ತಮ ಆಟಗಾರ ತಂಡದಲ್ಲಿ ಮತ್ತೊಬ್ಬರಿಲ್ಲ” ಎಂದಿದ್ದಾರೆ.

“ಅನೇಕ ದೊಡ್ಡ ಆಟಗಾರರು ಟೀಮ್ ಇಂಡಿಯಾಕ್ಕೆ ಬಂದಿದ್ದಾರೆ, ಅವರು ತಮ್ಮ ವೃತ್ತಿಜೀವನದ ಬಗ್ಗೆ ಕಾಳಜಿ ವಹಿಸಿದ್ದಾರೆ. ಅವರು ಅದೇ ದೃಷ್ಟಿಕೋನದಿಂದ ನಾಯಕತ್ವವನ್ನೂ ಮಾಡಿದ್ದಾರೆ. ಆದರೆ ರೋಹಿತ್ ವಿಷಯದಲ್ಲಿ ಎಲ್ಲರಿಗಿಂತಲೂ ಭಿನ್ನರಾಗಿದ್ದಾರೆ. ಏಕೆಂದರೆ ಅವರು ಇಡೀ ತಂಡವನ್ನು ಸಂತೋಷವಾಗಿರಿಸುತ್ತಾರೆ ಎಂದಿದ್ದಾರೆ.

ಜೂನ್ 29ರಂದು ಬಾರ್ಬಡೋಸ್ ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆಯಲಿರುವ ಫೈನಲ್ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಭಾರತ ಮೂರನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್ಗೆ ಅರ್ಹತೆ ಪಡೆದಿದ್ದರೆ, ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಅರ್ಹತೆ ಪಡೆದಿದೆ. ಈ ಬಾರಿ ಭಾರತ ತಂಡಕ್ಕೆ ಫೈನಲ್ನಲ್ಲಿ ದಾಖಲೆ ಸೃಷ್ಟಿಸುವ ಅವಕಾಶವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...