T20 ವಿಶ್ವಕಪ್ | ಸ್ಪಿನ್ನರ್ಸ್‌ಗಳ ಮೋಡಿಗೆ ಇಂಗ್ಲೆಂಡ್ ‘ಬಲಿ’; 10 ವರ್ಷಗಳ ಬಳಿಕ ಫೈನಲ್‌ಗೆ ಟೀಮ್ ಇಂಡಿಯಾ

Date:

ವೆಸ್ಟ್‌ಇಂಡೀಸ್‌ನ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಇಂದು ನಡೆದ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ಭರ್ಜರಿ 68 ರನ್‌ಗಳ ಭರ್ಜರಿ ಜಯ ಗಳಿಸುವ ಮೂಲಕ 10 ವರ್ಷಗಳ ಬಳಿಕ ಫೈನಲ್‌ ತಲುಪಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಟೀಮ್ ಇಂಡಿಯಾ, ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 171 ರನ್ ದಾಖಲಿಸಿತ್ತು. 172 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಜೋಸ್ ಬಟ್ಲರ್ ನೇತೃತ್ವದ ಆಂಗ್ಲರ ತಂಡವು, ಸ್ಪಿನ್ನರ್‌ಗಳ ಮೋಡಿಗೆ ಬಲಿಯಾಗಿ 16.4 ಓವರ್‌ಗಳಲ್ಲಿ 103 ರನ್ ಗಳಿಸುಷ್ಟರಲ್ಲಿ ಆಲೌಟ್ ಆಗಿದೆ. ಆ ಮೂಲಕ 68 ರನ್‌ಗಳಿಂದ ಸೋಲೊಪ್ಪಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗೆಲುವಿನೊಂದಿಗೆ ಟೀಮ್ ಇಂಡಿಯಾವು 2022ರ ಸೆಮಿಫೈನಲ್‌ನಲ್ಲಿ ಸೋತಿದ್ದಕ್ಕೆ ಸೇಡು ತೀರಿಸಿಕೊಂಡಂತಾಗಿದೆ.

2007ರಲ್ಲಿ ಆರಂಭವಾದ ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಭಾರತ ಮೊದಲ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಆನಂತರದಲ್ಲಿ ಕಳೆದ 17 ವರ್ಷಗಳಲ್ಲಿ ಟೀಂ ಇಂಡಿಯಾ 2014ರಲ್ಲಿ ಫೈನಲ್‌ ಪ್ರವೇಶಿಸಿದರೂ ಶ್ರೀಲಂಕಾ ವಿರುದ್ಧ ಸೋಲು ಅನುಭವಿಸಿತ್ತು. ಈಗ ಇಂಗ್ಲೆಂಡ್ ಅನ್ನು ಸೋಲಿಸುವ ಮೂಲಕ ಭಾರತ 10 ವರ್ಷಗಳ ಬಳಿಕ ಫೈನಲ್‌ ತಲುಪಿದ್ದು, ಪ್ರಶಸ್ತಿ ಗೆಲ್ಲಲು ಒಂದು ಮೆಟ್ಟಿಲು ಮಾತ್ರ ಬಾಕಿಯಿದೆ.

ಸ್ಪಿನ್ನರ್ಸ್‌ಗಳ ಮೋಡಿಗೆ ಇಂಗ್ಲೆಂಡ್ ‘ಬಲಿ’

172 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್‌ಗೆ ನಾಯಕ ಜೋಸ್ ಬಟ್ಲರ್ ಉತ್ತಮ ಆರಂಭವನ್ನೇ ಒದಗಿಸಿದ್ದರು. 3 ಓವರ್‌ಗಳಲ್ಲಿ ಫಿಲ್ ಸಾಲ್ಟ್‌ ಜೊತೆಗೆ 26 ರನ್ ಕಲೆ ಹಾಕಿದ್ದರು. ಈ ವೇಳೆ ದಾಳಿಗಿಳಿದ ಸ್ಪಿನ್ನರ್ ಅಕ್ಷರ್ ಪಟೇಲ್, ತಾನೆಸೆದ ಮೊದಲ ಓವರ್‌ನ ಮೊದಲ ಎಸೆತದಲ್ಲೇ ಜೋಸ್ ಬಟ್ಲರ್ ಅವರ ವಿಕೆಟ್ ಪಡೆಯುವಲ್ಲಿ ಸಫಲರಾದರು.

ಆ ಬಳಿಕ ದಾಳಿಗಿಳಿದ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಫಿಲ್ ಸಾಲ್ಟ್‌ ಅವರನ್ನು ಕ್ಲೀನ್ ಬೌಲ್ಡ್ ಆದರು. ತನ್ನ ಮೊದಲನೇ ಓವರ್‌ನ ಮೊದಲ ಬಾಲ್‌ನಲ್ಲಿ ವಿಕೆಟ್‌(ಜೋಸ್ ಬಟ್ಲರ್) ಗಳಿಸಿದಂತೆ ಅಕ್ಷರ್ ಪಟೇಲ್ ಎರಡನೇ ಓವರ್‌ನ ಮೊದಲನೇ ಎಸೆತ(ಜಾನಿ ಬೈರ್‌ಸ್ಟೋವ್) ಹಾಗೂ ಮೂರನೇ ಓವರ್‌ನ ಮೊದಲ ಎಸೆತದಲ್ಲಿ ವಿಕೆಟ್(ಮೊಯೀನ್ ಅಲಿ) ಪಡೆಯುವ ಮೂಲಕ ವಿಶಿಷ್ಟ ಸಾಧನೆಗೈದರು.

ಟೀಮ್ ಇಂಡಿಯಾ ಪರ ಉತ್ತಮ ಬೌಲಿಂಗ್ ದಾಳಿಗೈದ ಅಕ್ಷರ್ ಪಟೇಲ್ 23ಕ್ಕೆ 3 ವಿಕೆಟ್ ಗಳಿಸಿದರೆ, ಕುಲ್‌ದೀಪ್ ಯಾದವ್ 19ಕ್ಕೆ 3 ವಿಕೆಟ್ ಗಳಿಸಿ ಮಿಂಚಿದರು. ಉಳಿದಂತೆ ಬುಮ್ರಾ 2 ವಿಕೆಟ್ ಪಡೆಯುವಲ್ಲಿ ಸಫಲರಾದರು.

ಇಂಗ್ಲೆಂಡ್ ಪರ ಬ್ಯಾಟಿಂಗ್‌ನಲ್ಲಿ ಹ್ಯಾರಿ ಬ್ರೂಕ್ 25 ರನ್, ಜೋಸ್ ಬಟ್ಲರ್ 23 ಹಾಗೂ ಬೌಲರ್ ಜೋಫ್ರಾ ಆರ್ಚರ್ 21  ರನ್ ಗಳಿಸಲಷ್ಟೇ ಶಕ್ತರಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...