ಟಿ20 ವಿಶ್ವಕಪ್ | ಆತಿಥೇಯ ಅಮೆರಿಕ ಸೋಲಿಸಿ ಸೂಪರ್ 8ರ ಘಟ್ಟಕ್ಕೆ ಪ್ರವೇಶಿಸಿದ ಟೀಮ್ ಇಂಡಿಯಾ

Date:

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಸಿಸಿ ಟಿ20 ವಿಶ್ವಕಪ್‌ನ ಎ ಗ್ರೂಪ್‌ನ ಪಂದ್ಯದಲ್ಲಿ ಟೀಮ್ ಇಂಡಿಯಾವು ಆತಿಥೇಯ ಅಮೆರಿಕ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಸೂಪರ್ 8ರ ಘಟ್ಟಕ್ಕೆ ಪ್ರವೇಶಿಸಿದೆ.

ಅಮೆರಿಕ ನೀಡಿದ್ದ 111 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನತ್ತಿದ ರೋಹಿತ್ ಶರ್ಮಾ ಬಳಗ, 18.2 ಓವರ್‌ಗಳಲ್ಲಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ತಲುಪಿತು.

ಸೂರ್ಯಕುಮಾರ್ ಯಾದವ್ ಹಾಗೂ ಶಿವಂ ದುಬೆ ಜೋಡಿಯು ಮುರಿಯದ ನಾಲ್ಕನೇ ವಿಕೆಟ್‌ಗೆ 67 ರನ್‌ಗಳ ಜೊತೆಯಾಟ ನಡೆಸಿದರು. ಸೂರ್ಯಕುಮಾರ್ ಯಾದವ್ ಅವರು 49 ಎಸತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್‌ನ ನೆರವಿನಿಂದ 50 ರನ್ ಗಳಿಸುವ ಮೂಲಕ ಅರ್ಧಶತಕ ಬಾರಿಸಿ ಮಿಂಚಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕ ಪರ ಮೊದಲ ಓವರ್ ಎಸೆದ ಕಳೆದ ಪಂದ್ಯದ ಹೀರೋ ಸೌರಭ್ ನೇತ್ರವಾಕರ್, ಮೊದಲ ಓವರ್‌ನ ಎರಡನೇ ಎಸೆತದಲ್ಲಿ ಟೀಮ್ ಇಂಡಿಯಾ ಪರ ಇನ್ನಿಂಗ್ಸ್‌ ಆರಂಭಿಸಿದ್ದ ವಿರಾಟ್ ಕೊಹ್ಲಿಯವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು. ಕಳೆದ ಮೂರೂ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿಯವರ ಬ್ಯಾಟ್‌ನಿಂದ ಸರಿಯಾದ ರನ್‌ಗಳೇ ಬಂದಿಲ್ಲ.

ಆ ಬಳಿಕ ಮೂರನೇ ಓವರ್‌ನ ಎರಡನೇ ಎಸೆತದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ವಿಕೆಟ್ ಪಡೆಯುವ ಮೂಲಕ ಕೂಡ ಸೌರಭ್ ನೇತ್ರವಾಕರ್ ಮತ್ತೊಮ್ಮೆ ಆಘಾತ ನೀಡಿದರು. ಔಟಾಗುವುದಕ್ಕೂ ಮುನ್ನ ರೋಹಿತ್ ಶರ್ಮಾ 6 ಎಸೆತಗಳಲ್ಲಿ 3 ರನ್ ಗಳಿಸಲಷ್ಟೇ ಶಕ್ತರಾದರು.

ನಂತರ ಕ್ರೀಸ್‌ನಲ್ಲಿದ್ದ ರಿಷಭ್‌ ಪಂತ್‌ಗೆ ಸೂರ್ಯಕುಮಾರ್ ಯಾದವ್ ಜೊತೆಯಾದರು. ರಿಷಭ್‌ ಪಂತ್‌ 18 ರನ್ ಗಳಿಸಿದ್ದಾಗ ಅಲಿ ಖಾನ್ ಅವರ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಆ ಬಳಿಕ ಇನ್ನಿಂಗ್ಸ್ ಕಟ್ಟಿದ ಸೂರ್ಯಕುಮಾರ್ ಯಾದವ್ ಹಾಗೂ ಶಿವಂ ದುಬೆ ಜೋಡಿಯು ಮುರಿಯದ ನಾಲ್ಕನೇ ವಿಕೆಟ್‌ಗೆ 67 ರನ್‌ಗಳ ಜೊತೆಯಾಟ ನಡೆಸಿ, ಗುರಿ ಮುಟ್ಟಿಸುವಲ್ಲಿ ಸಫಲರಾದರು. ಶಿವಂ ದುಬೆ 35 ಎಸೆತಗಳಲ್ಲಿ 31 ರನ್(1 ಬೌಂಡರಿ, 1 ಸಿಕ್ಸ್) ಗಳಿಸಿ, ಅಜೇಯರಾಗುಳಿದರು.

ಒಂದು ಹಂತದಲ್ಲಿ ಟೀಮ್ ಇಂಡಿಯಾವನ್ನು ಕಾಡಿದ ಅಮೆರಿಕ ಬೌಲರ್‌ಗಳು, ಪಂದ್ಯವನ್ನು ತಮ್ಮತ್ತ ಸೆಳೆಯಲು ಸಂಘಟಿತ ಪ್ರಯತ್ನ ನಡೆಸಿದರಾದರೂ, ಸೂರ್ಯಕುಮಾರ್ ಯಾದವ್ 23 ರನ್ ಗಳಿಸಿದ್ದಾಗ ಸೌರಭ್ ನೇತ್ರವಾಕರ್ ಬಿಟ್ಟ ಕ್ಯಾಚ್ ಟೀಮ್ ಇಂಡಿಯಾ ಪಾಲಿಗೆ ವರದಾನವಾಗಿ ಪರಿಣಮಿಸಿತು. ಕ್ಯಾಚ್ ಬಿಟ್ಟಿದ್ದ ಅವಕಾಶ ಬಳಸಿಕೊಂಡ ಸೂರ್ಯಕುಮಾರ್ ಯಾದವ್, ಅರ್ಧಶತಕ ಗಳಿಸಿದ್ದಲ್ಲದೇ, ತಂಡವನ್ನು ಗುರಿ ಮುಟ್ಟಿಸುವಲ್ಲಿ ಸಫಲರಾದರು.

ಯುಎಸ್‌ಎ ಪರ ಉತ್ತಮ ಬೌಲಿಂಗ್ ನಡೆಸಿದ ಭಾರತೀಯ ಮೂಲದ ಸೌರಭ್ ನೇತ್ರವಾಕರ್ 18ಕ್ಕೆ 2 ವಿಕೆಟ್ ಗಳಿಸಿದರೆ, ಅಲಿ ಖಾನ್ 1 ವಿಕೆಟ್ ಪಡೆಯುವಲ್ಲಿ ಸಫಲರಾದರು.

ಟೀಮ್ ಇಂಡಿಯಾ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಎಡಗೈ ಬೌಲರ್ ಅರ್ಷ್‌ದೀಪ್ ಸಿಂಗ್ 4 ಓವರ್‌ಗಳನ್ನು ಎಸೆದು ಕೇವಲ 9 ರನ್ ನೀಡಿ 4 ವಿಕೆಟ್ ಕಿತ್ತು ಮಿಂಚಿದ್ದರಿಂದ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...