ಟಿ20 ವಿಶ್ವಕಪ್‌ನಲ್ಲಿ ವಿರಾಟ್, ರೋಹಿತ್ ಕ್ರಮಾಂಕ ಬದಲಾವಣೆ ಸಾಧ್ಯತೆ?

Date:

ಜೂನ್‌ 2 ರಿಂದ 9ನೇ ಆವೃತ್ತಿಯ ಟಿ20 ವಿಶ್ವಕಪ್‌ ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ಆರಂಭಗೊಳ್ಳಲಿದ್ದು, ಭಾರತ ತಂಡ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್‌ ವಿರುದ್ಧ ಆಡಲಿದೆ. ಬಿಸಿಸಿಐ ರೋಹಿತ್‌ ಶರ್ಮಾ ಸಾರಥ್ಯದಲ್ಲಿ ನಾಲ್ವರು ಮೀಸಲು ಆಟಗಾರರನ್ನು ಒಳಗೊಂಡು 19 ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.

ಇಲ್ಲಿಯವರೆಗೂ ನಡೆದ ಎಂಟು ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ಭಾರತ ಒಮ್ಮೆ 2007ರಲ್ಲಿ ಕಪ್‌ಅನ್ನು ಮುಡಿಗೇರಿಸಿಕೊಂಡಿದೆ. 2014ರಲ್ಲಿ ಫೈನಲ್‌ ಪ್ರವೇಶಿಸಿದರೂ ಶ್ರೀಲಂಕಾ ವಿರುದ್ಧ ಪರಾಭವಗೊಂಡಿತ್ತು. ಇನ್ನುಳಿದಂತೆ ವೆಸ್ಟ್‌ ಇಂಡೀಸ್, ಇಂಗ್ಲೆಂಡ್ ತಲಾ ಎರಡು ಬಾರಿ ಪಾಕಿಸ್ತಾನ, ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ಒಂದೊಂದು ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿವೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ತಂಡದ ಆರಂಭಿಕ ಕ್ರಮಾಂಕ ಬದಲಾಗುವ ಸಾಧ್ಯತೆಯಿದೆ. ಟೀಂ ಇಂಡಿಯಾ ಮಾಜಿ ಆಲ್‌ರೌಂಡರ್‌ ಅಜಯ್‌ ಜಡೇಜಾ ಸೇರಿದಂತೆ ಹಲವರು ಕ್ರಮಾಂಕ ಬದಲಾವಣೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬ್ರಿಜ್ ಭೂಷಣ್‌ಗೆ ತಪ್ಪಿದ ಲೋಕಸಭಾ ಟಿಕೆಟ್: ಪುತ್ರನಿಗೆ ಮಣೆ ಹಾಕಿದ ಬಿಜೆಪಿ

“ವಿರಾಟ್‌ ಕೊಹ್ಲಿ ಆರಂಭಿಕ ಆಟಗಾರನಾಗಿ ಇನಿಂಗ್ಸ್‌ ಆರಂಭಿಸಿ ನಾಯಕ ರೋಹಿತ್‌ ಶರ್ಮಾ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕಿದೆ. ರೋಹಿತ್‌ ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದರೆ ಆಟದ ಸ್ಥಿತಿಯನ್ನು ಅರ್ಥ ಮಾಡಿಕೊಂಡು ತಂಡವನ್ನು ಅಪಾಯದಿಂದ ಪಾರು ಮಾಡಬಹುದು. ಇದು ತಂಡಕ್ಕೂ ಪ್ರಯೋಜನಕಾರಿ” ಎಂದು ಅಜಯ್‌ ಜಡೇಜಾ ತಿಳಿಸಿದ್ದಾರೆ.

“ ವಿರಾಟ್‌ ನಿಮ್ಮ ಕಡೆ ಇದ್ದರೆ ನೀವು ಸ್ಥಿರತೆಯನ್ನು ಕಾಪಾಡಿಕೊಂಡು ಅವರ ಪ್ರಯೋಜನವನ್ನು ಬಳಸಿಕೊಳ್ಳಬಹುದು. ವಿರಾಟ್‌ ಆರಂಭಿಕ ಆಟಗಾರನಾಗಿ ಉತ್ತಮ ಆಟಗಾರ ಹಾಗೂ ಪವರ್‌ಪ್ಲೇನಲ್ಲಿ ತಂಡಕ್ಕೆ ಉತ್ತಮ ಆರಂಭ ಒದಗಿಸಿ ಹೆಚ್ಚು ಸಮಯ ಆಡಬಹುದು” ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಅಜಯ್‌ ಜಡೇಜಾ ಹಾರ್ದಿಕ್‌ ಪಾಂಡ್ಯರನ್ನು ತಂಡಕ್ಕೆ ಸೇರ್ಪಡೆಗೊಳಿಸಿರುವುದನ್ನು ಸ್ವಾಗತಿಸಿದ್ದಾರೆ.

ಹಾರ್ದಿಕ್‌ ಪಾಂಡ್ಯ ಬಗ್ಗೆ ಗಮನಹರಿಸಲು ಸ್ಪಷ್ಟವಾದ ಕಾರಣಗಳಿವೆ. ಅವರೊಬ್ಬರು ವಿಶೇಷ ಆಟಗಾರರಾಗಿದ್ದು,ಎದುರಾಳಿ ತಂಡದ ಪ್ರತಿತಂತ್ರಕ್ಕೆ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿಯೂ ಟೀಂ ಇಂಡಿಯಾಗೆ ಪ್ರಯೋಜನಕಾರಿಯಾಗಲಿದ್ದಾರೆ. ತಂಡದ ಆಯ್ಕೆಯಲ್ಲಿಯೂ ಕೂಡ ಒಂದಿಷ್ಟು ಗೊಂದಲಗಳಿದ್ದರೂ ಉತ್ತಮ ತಂಡವನ್ನೇ ಪ್ರಕಟಿಸಲಾಗಿದೆ. ಎಲ್ಲ ಆಟಗಾರರ ಸಾಮರ್ಥ್ಯವನ್ನು ಸದ್ಬಳಕೆಗೊಳಿಸಿಕೊಳ್ಳಲು ರೋಹಿತ್‌ ಅವರ ಅವಲಂಬನೆಯಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...