ಭಾರತಕ್ಕೆ ಮರಳಲು ಸಜ್ಜಾದ ಟೀಂ ಇಂಡಿಯಾ; ಮತ್ತೆ ಭೀಕರ ಚಂಡಮಾರುತದ ಎಚ್ಚರಿಕೆ!

Date:

ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ಮಂಗಳವಾರ ಸಂಜೆ ಚಾರ್ಟರ್ ವಿಮಾನದಲ್ಲಿ ಭಾರತಕ್ಕೆ ಮರಳಲು ಸಜ್ಜಾಗುತ್ತಿರುವಂತೆ ಮತ್ತೊಂದು ಭೀಕರ ಚಂಡಮಾರುತದ ಎಚ್ಚರಿಕೆಯನ್ನು ಬಾರ್ಬಡೋಸ್ ಪ್ರಧಾನಿ ಮಿಯಾ ಮೊಟ್ಲಿ ನೀಡಿದ್ದಾರೆ. ಆದರೆ ಮುಂದಿನ ಆರರಿಂದ 12 ಗಂಟೆಗಳಲ್ಲಿ ವಿಮಾನ ನಿಲ್ದಾಣ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಶನಿವಾರ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿದ ಟೀ ಇಂಡಿಯಾ ವಿಶ್ವಕಪ್ ಗೆದ್ದಿದೆ. ಅದಾದ ಬಳಿಕ ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡ, ಅದರ ಸಹಾಯಕ ಸಿಬ್ಬಂದಿ, ಕೆಲವು ಬಿಸಿಸಿಐ ಅಧಿಕಾರಿಗಳು ಮತ್ತು ಆಟಗಾರರ ಕುಟುಂಬಸ್ಥರು ಕಳೆದ ಎರಡು ದಿನಗಳಿಂದ ಬೆರಿಲ್ ಚಂಡಮಾರುತದಿಂದಾಗಿ ಬಾರ್ಬಡೋಸ್‌ನಲ್ಲಿ ಸಿಲುಕಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಚಾರ್ಟರ್ ವಿಮಾನ ಸಂಜೆ 6 ಗಂಟೆಗೆ (ಸ್ಥಳೀಯ ಕಾಲಮಾನ) ಬ್ರಿಡ್ಜ್‌ಟೌನ್‌ನಿಂದ ಹೊರಟು ಬುಧವಾರ ಸಂಜೆ 7:45ಕ್ಕೆ ದೆಹಲಿಗೆ ಬಂದಿಳಿಯುವ ಸಾಧ್ಯತೆಯಿದೆ. ಅದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಆಟಗಾರರನ್ನು ಸನ್ಮಾನಿಸುವ ನಿರೀಕ್ಷೆಯಿದೆ. ಆದರೆ ಚಂಡಮಾರುತದ ಕಾರಣ ಈ ವೇಳಾಪಟ್ಟಿ ಅಂತಿಮವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಾರ್ಬಡೋಸ್‌ನಲ್ಲಿ ಚಂಡ ಮಾರುತ: ವೆಸ್ಟ್ ಇಂಡೀಸ್‌ನಲ್ಲಿ ಉಳಿದ ಟೀಂ ಇಂಡಿಯಾ

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಬಾರ್ಬಡೋಸ್ ಪ್ರಧಾನಿ ಮಿಯಾ ಮೊಟ್ಲಿ, ” ನಾನು ವಿಮಾನ ನಿಲ್ದಾಣದ ಸಿಬ್ಬಂದಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಅವರು ಈಗ ತಮ್ಮ ಕೊನೆಯ ತಪಾಸಣೆಗಳನ್ನು ಮಾಡುತ್ತಿದ್ದಾರೆ. ನಾವು ತುರ್ತು ವಿಷಯವಾಗಿ ಸಾಮಾನ್ಯ ಕಾರ್ಯಾಚರಣೆಯನ್ನು ಪುನರಾರಂಭಿಸಲು ಬಯಸುತ್ತೇವೆ” ಎಂದು ಹೇಳಿದರು.

“ಕಳೆದ ರಾತ್ರಿ ತಡವಾಗಿ ಅಥವಾ ಇಂದು ಅಥವಾ ನಾಳೆ ಬೆಳಿಗ್ಗೆ ಇನ್ನೂ ಹಲವಾರು ಜನರು ಹೊರಡಬೇಕಾಗಿತ್ತು. ತಮ್ಮ ತಮ್ಮ ದೇಶಕ್ಕೆ ಪ್ರಯಾಣಿಸಲಿರುವವರಿಗೆ ಅನುಕೂಲ ಮಾಡಿಕೊಡಲು ನಾವು ಬಯಸುತ್ತೇವೆ. ಮುಂದಿನ ಆರರಿಂದ 12 ಗಂಟೆಗಳ ಒಳಗೆ ವಿಮಾನ ನಿಲ್ದಾಣವು ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ” ಎಂದು ತಿಳಿಸಿದರು.

ಭೀಕರ ಚಂಡಮಾರುತವು ಸೋಮವಾರ ಬಾರ್ಬಡೋಸ್ ಮತ್ತು ಹತ್ತಿರದ ದ್ವೀಪಗಳನ್ನು ಅಪ್ಪಳಿಸಿದೆ. ಸುಮಾರು ಮೂರು ಲಕ್ಷ ಜನಸಂಖ್ಯೆಯನ್ನು ಹೊಂದಿರುವ ದೇಶವು ಭಾನುವಾರ ಸಂಜೆಯಿಂದ ಲಾಕ್‌ಡೌನ್ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...