ಮೂರನೇ ಏಕದಿನ | 78 ರನ್‌ಗಳ ಜಯದೊಂದಿಗೆ ಹರಿಣಗಳ ನಾಡಿನಲ್ಲಿ ಏಕದಿನ ಸರಣಿ ಗೆದ್ದ ಟೀಮ್ ಇಂಡಿಯಾ

Date:

ದಕ್ಷಿಣ ಆಫ್ರಿಕಾದ ವಿರುದ್ಧ ಪಾರ್ಲ್‌ನಲ್ಲಿ ನಡೆದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಶತಕ ಮತ್ತು ಅರ್ಷದೀಪ್ ಸಿಂಗ್ ಅವರ ಅಮೋಘ ಬೌಲಿಂಗ್‌ನ ನೆರವಿನಿಂದ ಟೀಮ್ ಇಂಡಿಯಾವು 78 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು. ಆ ಮೂಲಕ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.

ಟಾಸ್ ಗೆದ್ದ ಆತಿಥೇಯ ದಕ್ಷಿಣ ಆಫ್ರಿಕಾ ತಂಡವು, ಕೆ ಎಲ್ ರಾಹುಲ್ ನೇತೃತ್ವದ ಟೀಮ್ ಇಂಡಿಯಾವನ್ನು ಬ್ಯಾಟಿಂಗ್‌ಗೆ ಇಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರ ಚೊಚ್ಚಲ ಏಕದಿನ ಶತಕ (108) ಹಾಗೂ ತಿಲಕ್ ವರ್ಮಾ ಅವರ ಅರ್ಧ ಶತಕದ ನೆರವಿನಿಂದ ತಂಡವು ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 296 ರನ್‌ ಗಳಿಸುವ ಮೂಲಕ ಸವಾಲಿನ ಗುರಿಯನ್ನು ನೀಡಿತ್ತು.

ಗುರಿ ಬೆನ್ನಟ್ಟಿದ ಆತಿಥೇಯ ತಂಡವು 45.5 ಓವರ್‌ಗಳಲ್ಲಿ 218 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಆ ಮೂಲಕ 78 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಟೀಮ್ ಇಂಡಿಯಾದ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರು ಕೇವಲ 30ಕ್ಕೆ4 ವಿಕೆಟ್ ಕಬಳಿಸಿ ಮಿಂಚಿದರು. ಇವರಿಗೆ ಆವೇಶ್ ಖಾನ್ (45ಕ್ಕೆ2) ಮತ್ತು ವಾಷಿಂಗ್ಟನ್ ಸುಂದರ್ (38ಕ್ಕೆ2) ಉತ್ತಮ ಸಾಥ್ ನೀಡಿದರು.

ದಕ್ಷಿಣ ಆಫ್ರಿಕಾ ಪರವಾಗಿ ಟೋನಿ ಡಿ ಝಾರ್ಜಿ 81 ರನ್ ಹಾಗೂ ಮಾರ್ಕರಮ್ 36 ರನ್ ಗಳಿಸಿದರು.

ಸಂಕ್ಷಿಪ್ತ ಸ್ಕೋರ್ ವಿವರ:
ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 296
ರಜತ್ ಪಾಟೀದಾರ್ 22
ಸಂಜು ಸ್ಯಾಮ್ಸನ್ 108
ಕೆ.ಎಲ್. ರಾಹುಲ್ 21
ತಿಲಕ್ ವರ್ಮಾ 52
ರಿಂಕು ಸಿಂಗ್ 38

ಆಫ್ರಿಕಾ ಬೌಲಿಂಗ್:
ನಾಂದ್ರೆ ಬರ್ಗರ್ 64ಕ್ಕೆ 2
ಬೆರನ್ ಹೆನ್ರಿಕ್ಸ್ 63ಕ್ಕೆ 3

ದಕ್ಷಿಣ ಆಫ್ರಿಕಾ:
45.5 ಓವರ್‌ಗಳಲ್ಲಿ 218
ಟೋನಿ ಡಿ ಝಾರ್ಜಿ 81
ಏಡನ್ ಮಾರ್ಕರಂ 36
ಹೆನ್ರಿಚ್ ಕ್ಲಾಸೆನ್ 21

ಟೀಮ್ ಇಂಡಿಯಾ ಬೌಲಿಂಗ್:
ಅರ್ಷದೀಪ್ ಸಿಂಗ್ 30ಕ್ಕೆ 4, ಆವೇಶ್ ಖಾನ್ 45ಕ್ಕೆ 2, ವಾಷಿಂಗ್ಟನ್ ಸುಂದರ್ 38ಕ್ಕೆ 2

ಫಲಿತಾಂಶ:
ಭಾರತಕ್ಕೆ 78 ರನ್‌ಗಳ ಜಯ 2-1ರಿಂದ ಸರಣಿ ಗೆಲುವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...