ಸ್ಫೋಟಕ ಆಟಗಾರ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

Date:

ಭಾರತ ತಂಡದ ಸ್ಫೋಟಕ ಆಟಗಾರ ಅಭಿಷೇಕ್ ಶರ್ಮಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವ ಆಟಗಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೀಗಾಗಿ ನಾಳೆ (ಫೆ.12) ನಡೆಯಲಿರುವ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎನ್ನಬಹುದು.

ಟಿ20 ವಿಶ್ವಕಪ್‌ನ ಅಮೆರಿಕ ವಿರುದ್ಧದ ಪಂದ್ಯದ ಬಳಿಕ ಟೀಮ್ ಇಂಡಿಯಾ ಆಟಗಾರರು ದ್ವಿತೀಯ ಪಂದ್ಯಕ್ಕಾಗಿ ಭಾನುವಾರ ದೆಹಲಿಗೆ ಆಗಮಿಸಿದ್ದಾರೆ. ದೆಹಲಿಯ ತಮ್ಮ ನಿವಾಸದಲ್ಲಿ ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಭೋಜನಾ ಕೂಟ ಏರ್ಪಡಿಸಿದ್ದರು. ಈ ಡಿನ್ನರ್ ಪಾರ್ಟಿಯ ವೇಳೆ ಅಭಿಷೇಕ್ ಶರ್ಮಾ ಅವರ ಆರೋಗ್ಯ ಹದಗೆಟ್ಟಿದ್ದು, ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಅಭಿಷೇಕ್ ಶರ್ಮಾ ಅವರು ಹೊಟ್ಟೆಯ ಸೋಂಕಿನಿಂದ ಬಳಲುತ್ತಿದ್ದು, ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ. ಮಂಗಳವಾರದವರೆಗೆ ಅವರು ಆಸ್ಪತ್ರೆಯಲ್ಲೇ ಉಳಿದುಕೊಂಡಿರುವ ಕಾರಣ ಗುರುವಾರ ನಡೆಯಲಿರುವ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯುವುದು ಅನುಮಾನ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮುಂಬೈ ಕೋಟೆ ಕೆಡವಿದ ಕರ್ನಾಟಕ: ರಾಹುಲ್ ಶತಕ, ಸ್ಮರಣ್–ವಿದ್ಯಾಧರ್ ಸಾಹಸ; ಸೆಮಿಸ್‌ಗೆ ಲಗ್ಗೆ

ಅಭಿಷೇಕ್ ಶರ್ಮಾ ನಮೀಬಿಯ ವಿರುದ್ಧದ ಪಂದ್ಯದಿಂದ ಹೊರಗುಳಿದರೆ ಅವರ ಬದಲಿಗೆ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಓಪನರ್​ಗಳಾಗಿ ಇನಿಂಗ್ಸ್ ಆರಂಭಿಸುತ್ತಿದ್ದರು. ಆದರೆ ನ್ಯೂಜಿಲೆಂಡ್ ವಿರುದ್ಧ ತೋರಿದ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಸ್ಯಾಮ್ಸನ್ ಅವರನ್ನು ಕೈ ಬಿಟ್ಟು ಇಶಾನ್ ಕಿಶನ್ ಅವರಿಗೆ ಆರಂಭಿಕನ ಸ್ಥಾನ ನೀಡಲಾಗಿದೆ.

ಇದೀಗ ಅಭಿಷೇಕ್ ಶರ್ಮಾ ಅಲಭ್ಯರಾದರೆ ಟೀಮ್ ಇಂಡಿಯಾ ಮುಂದಿರುವುದು ಏಕೈಕ ಆಯ್ಕೆ. ಅದರಂತೆ ನಮೀಬಿಯ ವಿರುದ್ಧ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಇನ್ನು ನಮೀಬಿಯ ವಿರುದ್ಧದ ಪಂದ್ಯದ ಬಳಿಕ ಟೀಮ್ ಇಂಡಿಯಾ ಪಾಕಿಸ್ತಾನ್ ಹಾಗೂ ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಅದಕ್ಕೂ ಮುನ್ನ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...