ಟೆಸ್ಟ್ ಕ್ರಿಕೆಟ್ | ಬ್ಯಾಟಿಂಗ್ ಶ್ರೇಯಾಂಕದಲ್ಲಿ ಕೊಹ್ಲಿಯನ್ನು ಹಿಂದಿಕ್ಕಿದ ರಿಷಬ್ ಪಂತ್!

Date:

ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ನಲ್ಲಿ ಭಾರತ ಕ್ರಿಕೆಟ್‌ ತಂಡದ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಅವರನ್ನು ರಿಷಬ್‌ ಪಂತ್‌ ಹಿಂದಿಕ್ಕಿದ್ದಾರೆ. ಐಸಿಸಿ ರ್‍ಯಾಂಕಿಂಗ್ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯ ಮೊದಲ ಪಂದ್ಯ ಮುಗಿದಿದೆ. ಬೆಂಗಳೂರಿನಲ್ಲಿ ನಡೆದ ಆ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಪಂತ್ 99 ರನ್‌ ಗಳಿಸಿದ್ದಾರೆ. ಆ ರನ್‌ಗಳೊಂದಿಗೆ 6ನೇ ಸ್ಥಾನಕ್ಕೆ ಏರಿದ್ದಾರೆ. ಅದೇ ಟೆಸ್ಟ್‌ನಲ್ಲಿ 70 ರನ್ ಕಲೆಹಾಕಿದ ಕೋಹ್ಲಿ ಅವರು 8ನೇ ಸ್ಥಾನಕ್ಕೆ ಕುಸಿದಿದ್ದಾರೆ. ಅಲ್ಲದೆ, ಟೀಮ್‌ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ನಾಲ್ಕನೇ ಸ್ಥಾನದಲ್ಲಿಯೇ ಉಳಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು 15ನೇ ಸ್ಥಾನದಲ್ಲಿದ್ದಾರೆ.

ಇನ್ನು, ಬೌಲರ್‌ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ವೇಗಿ ಬೌಲರ್ ಆರ್ ಅಶ್ವಿನ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಏಳನೇ ಸ್ಥಾನವನ್ನು ಉಳಿಸಿಕೊಂಡಿರುವ ರವೀಂದ್ರ ಜಡೇಜಾ ಅಗ್ರ-10ರೊಳಗೆ ಮತ್ತೊಬ್ಬ ಭಾರತೀಯ ಬೌಲರ್ ಆಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...