ಭಾರತ – ಆಸ್ಟ್ರೇಲಿಯಾ ಟೆಸ್ಟ್‌ ಪಂದ್ಯದಲ್ಲಿ ಬೌಲರ್‌ಗಳ ಪಾರಮ್ಯ; ಒಂದೇ ದಿನ 17 ವಿಕೆಟ್ ಪತನ

Date:

ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯುತ್ತಿರುವ ಭಾರತ – ಆಸೀಸ್‌ ಮೊದಲ ಟೆಸ್ಟ್‌ ಪಂದ್ಯದಲ್ಲಿ ಬೌಲರ್‌ಗಳು ಪಾರಮ್ಯ ತೋರಿದ್ದಾರೆ. ಒಂದೇ ದಿನ ಎರಡೂ ತಂಡಗಳಿಂದ 17 ವಿಕೆಟ್ ಪತನವಾಗಿದೆ.

ಪರ್ತ್‌ನ ಆಪ್ಟಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದು ಟೀಂ ಇಂಡಿಯಾದ ನಾಯಕ ಜಸ್‌ಪ್ರೀತ್‌ ಬುಮ್ರಾ ಬ್ಯಾಟಿಂಗ್‌ ಆಯ್ದುಕೊಂಡರು.

ಆದರೆ ನಾಯಕನ ನಿರೀಕ್ಷೆಗೆ ತಕ್ಕಂತೆ ಭಾರತದ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ನಿಂತು ಉತ್ತಮ ಪ್ರದರ್ಶನ ನೀಡಲಿಲ್ಲ. ಆಸೀಸ್ ಬೌಲರ್‌ಗಳ ದಾಳಿಗೆ ನಡುಕಿದ ಭಾರತ ಮೊದಲ ಇನಿಂಗ್ಸ್‌ನಲ್ಲಿ 49.4 ಓವರ್‌ಗಳಲ್ಲಿ 150 ರನ್ ಗಳಿಸವಷ್ಟರಲ್ಲಿ ಆಲೌಟ್‌ ಆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾದರ್ಪಣೆ ಪಂದ್ಯದಲ್ಲಿ ಭರವಸೆ ಹುಟ್ಟು ಹಾಕಿದ ನಿತೀಶ್‌ಕುಮಾರ್ ರೆಡ್ಡಿ 41 ರನ್ ಕಲೆ ಹಾಕುವ ಮೂಲಕ ಟೀಮ್ ಇಂಡಿಯಾ ಪರ ಗರಿಷ್ಠ ಸ್ಕೋರ್‌ ದಾಖಲಿಸಿದರು. ಉಳಿದಂತೆ ಕೆ ಎಲ್‌ ರಾಹುಲ್‌ (26) ಹಾಗೂ ರಿಷಬ್‌ ಪಂತ್‌(37) ಬಿಟ್ಟರೆ ಉಳಿದ ಆಟಗಾರರು ತಕ್ಕ ಪ್ರದರ್ಶನ ತೋರಲಿಲ್ಲ.

ಈ ಸುದ್ದಿ ಓದಿದ್ದೀರಾ? ಶ್ರೇಯಸ್‌ ಅಯ್ಯರ್‌ ಮುಂಬೈ ತಂಡದ ನಾಯಕನಾಗಿ ನೇಮಕ

ಆಸೀಸ್‌ ಪರ ಜೋಶ್ ಹೇಜಲ್ವುಡ್ 4 ವಿಕೆಟ್ ಕಬಳಿಸಿದರೆ, ಉಳಿದಂತೆ ಮಿಷಲ್ ಸ್ಟಾರ್ಕ್, ನಾಯಕ ಪ್ಯಾಟ್ ಕಮ್ಮಿನ್ಸ್ ಮತ್ತು ಮಿಚೆಲ್ ಮಾರ್ಷ್ ತಲಾ 2 ವಿಕೆಟ್ ಪಡೆದರು.

ನಂತರ ಮೊದಲ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡ ದಿನಾದಾಂತ್ಯಕ್ಕೆ 27 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 67 ರನ್‌ ಗಳಿಸಿ 83 ರನ್‌ ಹಿನ್ನಡೆಯಲ್ಲಿದೆ. ಆಸ್ಟ್ರೇಲಿಯಾದ ಯಾವ ಬ್ಯಾಟರ್​ಗಳು 20 ರನ್​ಗಳ ಗಡಿ ಮುಟ್ಟಲು ಸಾಧ್ಯವಾಗಲಿಲ್ಲ. ತಂಡದ ಪರ ಅಲೆಕ್ಸ್ ಕ್ಯಾರಿ ಅತ್ಯಧಿಕ ಅಜೇಯ 19 ರನ್​ಗಳು ಮಾತ್ರ ಗಳಿಸಿದರು.

ಅಮೋಘ ಪ್ರದರ್ಶನ ತೋರಿದ ನಾಯಕ ಜಸ್‌ಪ್ರೀತ್‌ ಬುಮ್ರಾ 17 ರನ್‌ಗೆ 4 ವಿಕೆಟ್‌ ಕಬಳಿಸಿದರೆ, ಮೊಹಮ್ಮದ್‌ ಸಿರಾಜ್‌ 17/ 2 ಹಾಗೂ ಹರ್ಷಿತ್‌ ರಾಣಾ 33/1 ವಿಕೆಟ್ ಕಿತ್ತು ಆಸೀಸ್‌ ಬ್ಯಾಟರ್‌ಗಳನ್ನು ಸರದಿ ಸಾಲಿನಲ್ಲಿ ಪೆವಿಲಿಯನ್‌ಗೆ ಅಟ್ಟಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...