ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಆರೋಪ ಪಟ್ಟಿಯಲ್ಲಿ ಕೆಎಸ್‌ಸಿಎ, ಡಿಎನ್‌ಎ, ಆರ್‌ಸಿಬಿ ಹೊಣೆ

Date:

ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್‌ 4ರಂದು ಸಂಭವಿಸಿದ್ದ ಕಾಲ್ತುಳಿತ ದುರಂತ ಪ್ರಕರಣದ ತನಿಖೆ ನಡೆಸಿರುವ ಸಿಐಡಿ, ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. 2,200 ಪುಟಗಳ ದೋಷಾರೋಪ ಪಟ್ಟಿ ಸಿದ್ಧವಾಗಿದೆ.

ಕಾಲ್ತುಳಿತದಿಂದಾಗಿ 11 ಮಂದಿ ಮೃತಪಟ್ಟಿದ್ದರು. ಈ ಬಗ್ಗೆ ಶೀಘ್ರದಲ್ಲೇ ಕೋರ್ಟ್‌ಗೆ ವರದಿ ಸಲ್ಲಿಸಲಾಗುವುದು ಎಂದು ಪೊಲೀಸರು ಹೇಳಿದರು.

‘ದುರಂತಕ್ಕೆ ಕೆಎಸ್‌ಸಿಎ, ಡಿಎನ್‌ಎ (ಇವೆಂಟ್‌ ಮ್ಯಾನೇಜ್‌ಮೆಂಟ್‌) ಹಾಗೂ ಆರ್‌ಸಿಬಿ ಫ್ರಾಂಚೈಸಿ ಕಾರಣ. ಮೂರೂ ಸಂಸ್ಥೆಗಳು ಲೋಪ ಎಸಗಿರುವುದು ತನಿಖೆ ವೇಳೆ ಪತ್ತೆಯಾಗಿವೆ. ಹಲವು ಸಾಕ್ಷ್ಯಗಳು ಸಿಕ್ಕಿವೆ. ಎಲ್ಲವನ್ನೂ ಕ್ರೋಡೀಕರಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗುವುದು’ ಎಂದು ಪೊಲೀಸರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತ್ಯಕ್ಷ ಸಾಕ್ಷಿಗಳು ಹಾಗೂ ಗಾಯಾಳುಗಳ ಹೇಳಿಕೆ ದಾಖಲಿಸಿಕೊಳ್ಳಲಾಗಿತ್ತು. ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗಿತ್ತು. ತನಿಖೆ ವೇಳೆ ಮೂರು ಸಂಸ್ಥೆಗಳ ಲೋಪಗಳು ಪತ್ತೆಯಾಗಿವೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ವಿಜಯೋತ್ಸವಕ್ಕೂ ಮುನ್ನ ಸರಿಯಾದ ವ್ಯವಸ್ಥೆ ಮಾಡಿಕೊಂಡಿರಲಿಲ್ಲ. ಪೊಲೀಸ್‌ ಅಧಿಕಾರಿಗಳಿಗೆ ಮೊದಲೇ ಮಾಹಿತಿ ನೀಡಿರಲಿಲ್ಲ. ತರಾತುರಿಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಭದ್ರತಾ ವ್ಯವಸ್ಥೆ ಮಾಡಿಕೊಳ್ಳುವುದು ಕಷ್ಟವಾಗಿತ್ತು ಎಂದು ಮೂಲಗಳು ಹೇಳಿವೆ.

ಇದನ್ನು ಓದಿದ್ದೀರಾ? ಕ್ರಿಕೆಟ್ | ದಕ್ಷಿಣ ಆಫ್ರಿಕಾದ ಭಾರತ ಪ್ರವಾಸ; ರೋಚಕತೆ, ದಾಖಲೆಗಳು ಮತ್ತು ಸವಾಲುಗಳು

ಟಿಕೆಟ್ ಬಗ್ಗೆ ಆರ್​​ಸಿಬಿ ಗೊಂದಲ ಹುಟ್ಟಿಸಿದ್ದು ಘಟನೆಗೆ ಮೊದಲ ಕಾರಣವಾಗಿದೆ. ಭದ್ರತಾ ವಿಚಾರವಾಗಿ ಡಿಎನ್ಎಯಿಂದ ವ್ಯವಸ್ಥೆ ಆಗಿರಲಿಲ್ಲ. ಖಾಸಗಿ ಸೆಕ್ಯುರಿಟಿ ಏಜೆನ್ಸಿ ಬಳಕೆಯೂ ವಿಫಲವಾಗಿದೆ. ಪೊಲೀಸರ ಜೊತೆ ಕೂಡ ಸರಿಯಾದ ಮಾತುಕತೆ ನಡೆಸದೆ ಕಾರ್ಯಕ್ರಮ ಆಯೋಜನೆ ಮಾಡಿರೋದು ತನಿಖೆ ವೇಳೆ ಗೊತ್ತಾಗಿದೆ ಎಂದು ಮೂಲಗಳು ಹೇಳಿವೆ.

ಘಟನೆಯ ಬಳಿಕ ಕಬ್ಬನ್‌ಪಾರ್ಕ್‌ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿತ್ತು. ಮೃತ ಕುಟುಂಬಸ್ಥರ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ಕೆಎಸ್‌ಸಿಎ, ಡಿಎನ್‌ಎ (ಇವೆಂಟ್‌ ಮ್ಯಾನೇಜ್‌ಮೆಂಟ್‌) ಹಾಗೂ ಆರ್‌ಸಿಬಿ ಫ್ರಾಂಚೈಸಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು. ನಾಲ್ವರನ್ನು ಬಂಧಿಸಿದ್ದರು.

ಅದಾದ ಮೇಲೆ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ದಾಖಲಾಗಿದ್ದ ಎರಡೂ ಪ್ರಕರಣಗಳ ತನಿಖೆಯನ್ನೂ ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿತ್ತು. ಕಾಲ್ತುಳಿತ ಘಟನೆಗೆ ಕಾರಣವಾದ ಅಂಶಗಳನ್ನು ಪತ್ತೆ ಮಾಡಿರುವ ಸಿಐಡಿ ತನಿಖಾಧಿಕಾರಿಗಳು ಕಾಲ್ತುಳಿತಕ್ಕೆ ಕಾರಣವಾದ ಅಂಶಗಳನ್ನು ಪತ್ತೆ ಮಾಡಿದ್ದಾರೆ.

‘ಕ್ರೀಡಾಂಗಣದ ಗೇಟ್‌ಗಳ ಬಳಿಯ ಅವ್ಯವಸ್ಥೆ, ಪೊಲೀಸರ ನಿಯೋಜನೆ ಹಾಗೂ ನೂಕುನುಗ್ಗಲು ಉಂಟಾಗಲು ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗಿದೆ. ಈ ಎಲ್ಲ ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...