ಐಪಿಎಲ್ 2025 | ಬಾಕಿಯುಳಿದ ಪಂದ್ಯಗಳು ಇಂಗ್ಲೆಂಡ್‌ನಲ್ಲಿ?

Date:

ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಮಿಲಿಟರಿ ಸಂಘರ್ಷ ನಡೆಯುತ್ತಿರುವ ಕಾರಣ ಭಾರತೀಯ ಕ್ರಿಕೆಟ್ ಮಂಡಳಿಯು ಐಪಿಎಲ್‌ನ ಉಳಿದ ಪಂದ್ಯಗಳನ್ನು ಒಂದು ವಾರಗಳ ಕಾಲ ಸ್ಥಗಿತಗೊಳಿಸಿದೆ. ಈ ನಡುವೆ ಐಪಿಎಲ್ ಟೂರ್ನಿಯ ಉಳಿದ ಪಂದ್ಯಗಳನ್ನು ಇಂಗ್ಲೆಂಡ್‌ ತನ್ನ ದೇಶದಲ್ಲಿ ಆಯೋಜಿಸಲು ಮುಂದೆ ಬಂದಿದೆ.

ಇಸಿಬಿ ಮುಖ್ಯ ಕಾರ್ಯನಿರ್ವಾಹಕ ರಿಚರ್ಡ್ ಗೌಲ್ಡ್ ಅವರು ಐಪಿಎಲ್ 2025 ರ ಉಳಿದ ಪಂದ್ಯಗಳನ್ನು ಆಯೋಜಿಸಲು ಬಯಸಿದ್ದಾರೆ. “ನಾವು ಬಿಸಿಸಿಐಗೆ ಸಹಾಯ ಮಾಡಲು ಸಿದ್ಧರಿದ್ದೇವೆ” ಎಂದು ತಿಳಿಸಿದ್ದಾರೆ.

ಪಾಕಿಸ್ತಾನ ವಾಯುದಾಳಿ ಅಲರ್ಟ್ ಇದ್ದ ಹಿನ್ನೆಲೆಯಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಧರ್ಮಶಾಲಾದಲ್ಲಿ ಮೇ 8ರಂದು ನಡೆಯುತ್ತಿದ್ದ ಪಂದ್ಯವನ್ನು ಏಕಾಏಕಿ ರದ್ದು ಮಾಡಲಾಗಿದೆ. ಮರುದಿನ ಅಂದರೆ ಮೇ 9ರಂದು ಪರಿಸ್ಥಿತಿಯನ್ನು ಮರುಪರಿಶೀಲಿಸಿದ ನಂತರ ಮತ್ತು ಫ್ರಾಂಚೈಸಿಗಳು, ಪಾಲುದಾರರೊಂದಿಗೆ ಮಾತನಾಡಿದ ನಂತರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಬಿಸಿಸಿಐ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಐಪಿಎಲ್ 2025 | 2 ಪಂದ್ಯ ಸೋತ ಡೆಲ್ಲಿಗೆ ಬೇಕಿದೆ ಗೆಲುವು; ಮಹತ್ವದ ದಾಖಲೆಯ ಹೊಸ್ತಿಲಲ್ಲಿ ರಾಹುಲ್

ಧರ್ಮಶಾಲಾದಲ್ಲಿ ರದ್ದುಗೊಂಡ ಪಂದ್ಯವೂ ಸೇರಿದಂತೆ ಒಟ್ಟು 17 ಪಂದ್ಯಗಳು ನಡೆಯಲು ಬಾಕಿ ಇದ್ದು ಬಾಕಿ ಉಳಿದ ಪಂದ್ಯಗಳವನ್ನು ಭಾರತದಲ್ಲೇ ನಡೆಸುವುದೋ ಅಥವಾ ವಿದೇಶದಲ್ಲಿ ನಡೆಸುವುದೋ ಎಂಬ ಬಗ್ಗೆ ಬಿಸಿಸಿಐ ಇನ್ನೂ ತೀರ್ಮಾನಿಸಿಲ್ಲ.

ಐಪಿಎಲ್ ಅನ್ನು ಇಂಗ್ಲೆಂಡ್‌ಗೆ ಸ್ಥಳಾಂತರಿಸುವುದರಿಂದ ನಾಲ್ಕು ದೇಶಗಳ ಟೆಸ್ಟ್ ಆಟಗಾರರಿಗೆ ಅನುಕೂಲವಾಗುತ್ತದೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಆಟಗಾರರು ಸಹ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯಕ್ಕೆ ತಯಾರಿ ನಡೆಸಲು ಸಹಾಯವಾಗುತ್ತದೆ. ಇಂಗ್ಲೆಂಡ್ ಆಟಗಾರರು ಈಗಾಗಲೇ ವಾಪಸ್ ಹೊರಟಿದ್ದಾರೆ. ಬಿಸಿಸಿಐ ವಿದೇಶಿ ಆಟಗಾರರಿಗೆ ಮರಳಲು ಸಿದ್ಧರಾಗಿರಲು ಸೂಚಿಸಿದೆ.

ವರದಿಯ ಪ್ರಕಾರ, ಇಂಗ್ಲೆಂಡ್‌ನಲ್ಲಿ ಐಪಿಎಲ್ 2025 ರ ಉಳಿದ ಪಂದ್ಯಗಳನ್ನು ಆಡಿದರೆ, ಟೆಸ್ಟ್ ಆಟಗಾರರಿಗೆ ಅನುಕೂಲವಾಗುತ್ತದೆ. ಏಕೆಂದರೆ ಅವರು ಬೆನ್ ಸ್ಟೋಕ್ಸ್ ನಾಯಕತ್ವದ ತಂಡದ ವಿರುದ್ಧದ ಐದು ಟೆಸ್ಟ್ ಸರಣಿಗಾಗಿ ಅಲ್ಲೇ ಉಳಿಯಬಹುದು. ಇದರ ಜೊತೆಗೆ, ಕೆಲವು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಆಟಗಾರರು ಸಹ ಇಂಗ್ಲೆಂಡ್‌ನಲ್ಲಿ ಉಳಿಯಬಹುದು. ಏಕೆಂದರೆ ಅವರು ಜೂನ್ 11 ರಿಂದ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025 ರ ಫೈನಲ್‌ಗೆ ಸಿದ್ಧರಾಗುತ್ತಾರೆ.

ಈ ಹಿಂದೆ ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗಳ ಕಾರಣ 2009 ರಲ್ಲಿ ಐಪಿಎಲ್ ಅನ್ನು ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರಿಸಲಾಗಿತ್ತು. ನಂತರ 2020 ರಲ್ಲಿ, ಐಪಿಎಲ್ ಅನ್ನು ಯುಎಇ ಆಯೋಜಿಸಿತ್ತು. 2021 ರಲ್ಲಿ, ಕೋವಿಡ್ ಸಂಭವಿಸಿದ ಕಾರಣ ಐಪಿಎಲ್ ಅನ್ನು ಯುಎಇಗೆ ಸ್ಥಳಾಂತರಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...