ಭಾರತ – ನ್ಯೂಜಿಲೆಂಡ್ ಟೆಸ್ಟ್‌ | ಮೊದಲ ದಿನದಾಟ ರದ್ದು: 5 ದಿನವೂ ಬೆಂಗಳೂರಿನಲ್ಲಿ ಮಳೆ ಭೀತಿ

Date:

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದಾಗಿ ರದ್ದಾಗಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಟಾಸ್ ಕೂಡ ನಡೆಯದೆ ರದ್ದುಗೊಂಡಿದೆ.

ಬೆಂಗಳೂರಿನಲ್ಲಿ ನಿನ್ನೆಯಿಂದ ಸುರಿಯುತ್ತಿರುವ ನಿರಂತರ ಮಳೆ ಮೊದಲ ಟೆಸ್ಟ್ ಪಂದ್ಯಕ್ಕೆ ಅಡ್ಡಿಯಾಗಿದ್ದು, ಇಂದೂ ಕೂಡ ಮಳೆ ಮುಂದುವರೆದಿತ್ತು. ಇಂದು ಬೆಳಗ್ಗೆ ಮಳೆ ನಿಂತು ಆಟ ಆರಂಭವಾಗುವ ವಿಶ್ವಾಸವಿತ್ತು. ಆದರೆ ಮಳೆ ನಿರಂತರವಾಗಿ ಬೀಳುತ್ತಿರುವುದರಿಂದ ಸತತ ಮೂರನೇ ಬಾರಿಯ ಪರಿಶೀಲನೆ ಬಳಿಕ ಅಂಪೈರ್‌ಗಳು ಮೊದಲ ದಿನದಾಟವನ್ನು ರದ್ದು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಇಲ್ಲಿ ಅತ್ಯುತ್ತಮ ವಾಟರ್ ಡ್ರೈನ್ ವ್ಯವಸ್ಥೆ ಇದೆ. ಹೀಗಾಗಿ ಎಂತಹ ದೊಡ್ಡ ಮಳೆಯೇ ಬಂದರೂ ಮಳೆ ನಿಂತ ಕೇವಲ 7 ನಿಮಿಷದಲ್ಲಿ ಇಡೀ ಮೈದಾನವನ್ನು ಒಣಗಿಸುವ ಅತ್ಯಾಧುನಿಕ ವ್ಯವಸ್ಥೆ ಇದೆ.

ಪಂದ್ಯದ ಐದು ದಿನವೂ ಮಳೆ

ಹವಾಮಾನ ವರದಿಯ ಪ್ರಕಾರ, ಭಾರತ- ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದೆ ಎಂಬುದು ಖಚಿತವಾಗಿತ್ತು. ಅದರಂತೆ ಮಳೆಯಿಂದಾಗಿ ಮೊದಲ ದಿನದಾಟ ಟಾಸ್ ಕೂಡ ನಡೆಯದೆ ರದ್ದಾಗಿದೆ. ಹೀಗಾಗಿ ನಾಳೆಯಾದರೂ ಪಂದ್ಯ ಆರಂಭವಾಗುತ್ತಾ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ. ಆದರೆ ಹವಾಮಾನ ವರದಿಯ ಪ್ರಕಾರ, ಅಕ್ಟೋಬರ್ 20ರವರೆಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಪಂದ್ಯದ ಎರಡನೇ ದಿನದಂದು ಶೇ. 41 ರಷ್ಟು ಮಳೆಯಾಗುವ ಸಾಧ್ಯತೆ ಇದ್ದರೆ, ಮೂರನೇ ದಿನದಂದು ಮಳೆ ಇನ್ನಷ್ಟು ಹೆಚ್ಚಲಿದೆ. ಅದರಂತೆ ಶೇ. 67 ರಷ್ಟು ಮಳೆಯಾಗಲಿದೆ.

ನಾಲ್ಕು ಮತ್ತು ಐದನೇ ದಿನವೂ ಇದೆ ಕತೆ ಮುಂದುವರೆಯಲಿದೆ. ಆದರೆ ಮೊದಲ ಮೂರು ದಿನಗಳಿಗೆ ಹೋಲಿಸಿದರೆ, ನಾಲ್ಕನೇ ದಿನದಂದು ಮಳೆ ಕೊಂಚ ತಗ್ಗಲಿದ್ದು,  ಈ ದಿನದಂದು ಶೇ.25 ರಷ್ಟು ಮಳೆಯಾಗಲಿದೆ. ಐದನೇ ದಿನ ಇದರ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದ್ದು, ಶೇ.40 ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ. ಈ ಪ್ರಕಾರ, ಉಭಯ ತಂಡಗಳ ನಡುವಿನ ಬೆಂಗಳೂರು ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಳ್ಳುವ ಸಾಧ್ಯತೆಯೇ ಹೆಚ್ಚಿದೆ. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...