ಟಿ20 ವಿಶ್ವಕಪ್‌ಗೆ ಭಯೋತ್ಪಾದಕರ ಬೆದರಿಕೆ: ಟ್ರಿನಿಡಾಡ್ ಪ್ರಧಾನಿ

Date:

ಜೂನ್‌ 2ರಿಂದ ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ಆರಂಭವಾಗುವ 9ನೇ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್‌  ಕ್ರೀಡಾಕೂಟಕ್ಕೆ ಭಯೋತ್ಪಾದಕರು ಬೆದರಿಕೆಯೊಡ್ಡಿದ್ದಾರೆ ಎಂದು ಟ್ರಿನಿಡಾಡ್‌ನ ಪ್ರಧಾನಿ ಡಾ. ಕೈತ್‌ ರೌಲೇ ತಿಳಿಸಿದ್ದಾರೆ.

ಭಯೋತ್ಪಾದಕರ ಬೆದರಿಕೆ ದಾಳಿ ಹಿನ್ನೆಲೆಯಲ್ಲಿ ಅಪಾಯವನ್ನು ಮಟ್ಟಹಾಕಲು ರಾಷ್ಟ್ರೀಯ ಭದ್ರತೆ ಹಾಗೂ ಪ್ರತಿಕ್ರಿಯೆಯ ಸಿದ್ಧತೆಯ ತಯಾರಿಯನ್ನು ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.

“ದುರಾದೃಷ್ಟವಶಾತ್, 21 ಶತಮಾನದ ವಿಶ್ವದಲ್ಲೂ ಭಯೋತ್ಪಾದಕರ ಬೆದರಿಕೆ ಅನೇಕ ವಿವಿಧ ದೇಶಗಳಲ್ಲಿ ಇಂದಿಗೂ ಇರುವ ಅಪಾಯಗಳಲ್ಲಿ ಒಂದಾಗಿದೆ. ವೆಸ್ಟ್‌ ಇಂಡೀಸಿನ 6 ಸ್ಥಳಗಳಲ್ಲಿ ವಿಶ್ವಕಪ್‌ ನಡೆಯಲಿದ್ದು,ಕ್ರಿಕೆಟ್‌ ನಡೆಯುವ ಸಂದರ್ಭದಲ್ಲಿ ಎಲ್ಲ ಸ್ಥಳಗಳಲ್ಲೂ ಯಾವುದೇ ಭದ್ರತೆ ಲೋಪವಾಗದಂತೆ ಎಚ್ಚರಿಕೆ ವಹಿಸಲಾಗುವುದು” ಎಂದು ಪ್ರದಾನಿ ಡಾ. ಕೈತ್‌ ರೌಲೇ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ ದುಷ್ಟ ವ್ಯಕ್ತಿಗಳು ಯಾವುದೇ ರೀತಿಯಲ್ಲಿ ತಪ್ಪಾಗಿ ವರ್ತಿಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ, ಇದನ್ನು ಎಲ್ಲ ಹಂತಗಳಲ್ಲಿಯೂ ಸಂಪೂರ್ಣವಾಗಿ ಅಸಾಧ್ಯವಾಗಿಸುತ್ತೇವೆ. ಹಲವು ಬೆದರಿಕೆಯಿರುವ ಕಾರಣದಿಂದ ಈ ಅಪಾಯವನ್ನು ಸುಧಾರಿಸುವ ಸಲುವಾಗಿ ನಾವು ಸ್ಥಳೀಯ ಹಾಗೂ ಪ್ರಾದೇಶಿಕ ಹಂತಗಳಲ್ಲಿ ಎಚ್ಚರಿಕೆವಹಿಸುತ್ತೇವೆ. ಏಕಾಂಗಿಯಾಗಿ ಅಥವಾ ಒಟ್ಟಾಗಿ ನಮ್ಮ ಗುಪ್ತಚರ ಇಲಾಖೆ ಹಾಗೂ ಭದ್ರತಾ ಪಡೆ ದೇಶದ ಜನರಿಗೆ ಹಾಗೂ ಟೂರ್ನಿ ನಡೆಯುವ ಎಲ್ಲ ಸ್ಥಳಗಳಲ್ಲೂ ಹೆಚ್ಚಿನ ಭದ್ರತೆ ನೀಡುತ್ತೇವೆ” ಎಂದು ಪ್ರಧಾನಿ ಹೇಳಿರುವ ಹೇಳಿಕೆಯನ್ನು ಟ್ರಿನಿಡಾಡ್‌ ಮಾಧ್ಯಮವೊಂದು ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್: ಅಮೆರಿಕ ತಂಡದಲ್ಲಿ ಕನ್ನಡಿಗ ಕ್ರಿಕೆಟರ್‌ಗೆ ಸ್ಥಾನ

ಆದಾಗ್ಯೂ ರೌಲೇ ಅವರು ಬೆದರಿಕೆಯೊಡ್ಡಿರುವ ಸಂಸ್ಥೆಯ ಯಾವುದೇ ಹೆಸರನ್ನು ಹೇಳಲಿಲ್ಲ. ಆದರೆ ವರದಿಗಳ ಪ್ರಕಾರ ಸಂಘಟನೆಯೊಂದು ತನ್ನ ಪ್ರಚಾರ ಸಂಸ್ಥೆಯ ಮೂಲಕ ಬೆದರಿಕೆಯೊಡ್ಡಿದೆ ಎನ್ನಲಾಗಿದೆ.

ವೆಸ್ಟ್‌ ಇಂಡೀಸಿನ ಆಂಟಿಗುವಾ, ಬರ್ಬುಡಾ, ಬರ್ಬೋಡಾಸ್, ಗಯಾನ, ಸೈಂಟ್‌ ಲೂಸಿಯಾ, ಸೇ. ವಿನ್ಸೆಂಟ್ ಹಾಗೂ ಗ್ರೆನಾಡಾ, ಟ್ರಿನಿಡಾಡ್ ಸ್ಥಳಗಳಲ್ಲಿ ಟೂರ್ನಿ ನಡೆಯಲಿದೆ. ಇದನ್ನು ಹೊರತುಪಡಿಸಿದರೆ ಅಮೆರಿಕದ ಫ್ಲೋರಿಡಾ, ನ್ಯೂಯಾರ್ಕ್ ಹಾಗೂ ಟೆಕ್ಸ್‌ಸ್ ನಲ್ಲೂ ಟಿ20 ವಿಶ್ವಕಪ್‌ ಆಯೋಜನೆಗೊಳ್ಳಲಿದೆ.

ವೆಸ್ಟ್‌ ಇಂಡೀಸ್‌ ಕ್ರಿಕೆಟ್ ಸಿಇಒ ಜಾನಿ ಗ್ರೇವ್ಸ್‌, “ಟೂರ್ನಿ ನಡೆಯುವ ಎಲ್ಲ ಸ್ಥಳಗಳಲ್ಲೂ ಬೆದರಿಕೆಯನ್ನು ತಗ್ಗಿಸುವ ನಿಟ್ಟಿನಲ್ಲಿ ನಿರಂತರ ಮೇಲ್ವಿಚಾರಣೆ ಹಾಗೂ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೆಚ್ಚಿನ ಭದ್ರತೆ ನೀಡುವ ಕುರಿತು ಎಲ್ಲ ರಾಷ್ಟ್ರಗಳಿಗೂ ನಾವು ಭರವಸೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...