ಮುಂಬೈ ಟೆಸ್ಟ್ | ಟಾಸ್ ಗೆದ್ದ ನ್ಯೂಜಿಲೆಂಡ್; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ

Date:

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆರಂಭಗೊಂಡಿದೆ. ಈಗಾಗಲೇ ಈ ಸರಣಿಯನ್ನು ಕಳೆದುಕೊಂಡಿರುವ ಟೀಮ್ ಇಂಡಿಯಾಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.

ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಟಾಮ್ ಲೇಥಮ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದ್ದಾರೆ. ಭಾರತ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ವೇಗಿ ಜಸ್ಪ್ರೀತ್ ಬೂಮ್ರಾ ಕೊನೆಯ ಟೆಸ್ಟ್​ನಿಂದ ಹೊರಗುಳಿದಿದ್ದಾರೆ.

ಕಿವೀಸ್ ತಂಡ ಈಗಾಗಲೇ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಹೀಗಾಗಿ ಟೀಂ ಇಂಡಿಯಾ ಕ್ಲೀನ್ ಸ್ವೀಪ್‌ನಿಂದ ಪಾರಾಗಲು ಪ್ರಯತ್ನಿಸಲಿದೆ. ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ಎಂಟು ವಿಕೆಟ್‌ಗಳಿಂದ ಮತ್ತು ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ 113 ರನ್‌ಗಳಿಂದ ಗೆದ್ದಿತ್ತು. ಇದೀಗ ಮೂರನೇ ಟೆಸ್ಟ್ ಗೆಲ್ಲುವುದರೊಂದಿಗೆ ಟೂರ್ನಿಗೆ ವಿದಾಯ ಹೇಳುವುದಕ್ಕೆ ಉಭಯ ತಂಡಗಳು ಸಜ್ಜಾಗಿವೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ವಿಶೇ‍‍ಷ | ಮಹಿಳಾ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಬಗ್ಗೆ ನಿಮಗೆಷ್ಟು ಗೊತ್ತು?

ಕಿವೀಸ್ ನಾಯಕ ಲೇಥಮ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆಗಳನ್ನು ಮಾಡಿದ್ದಾರೆ. ಕಳೆದ ಪಂದ್ಯದಲ್ಲಿ ಭಾರತಕ್ಕೆ ತೊಂದರೆ ನೀಡಿದ್ದ ಮಿಚೆಲ್ ಸ್ಯಾಂಟ್ನರ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಸ್ಥಾನದಲ್ಲಿ ಇಶ್ ಸೋಧಿ ಅವರನ್ನು ಸೇರಿಸಲಾಗಿದೆ. ಅದೇ ಸಮಯದಲ್ಲಿ, ಟಿಮ್ ಸೌಥಿ ಬದಲಿಗೆ ಮ್ಯಾಟ್ ಹೆನ್ರಿಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಟೀಂ ಇಂಡಿಯಾ ಕೂಡ ತನ್ನ 11ರ ಬಳಗದಲ್ಲಿ ಬದಲಾವಣೆ ಮಾಡಿದ್ದು, ಜಸ್ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್​ಗೆ ಅವಕಾಶ ನೀಡಲಾಗಿದೆ.

ಪಂದ್ಯವಾಡುವ 11ರ ಬಳಗ

ಭಾರತ : ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.

ನ್ಯೂಜಿಲೆಂಡ್ : ಟಾಮ್ ಲೇಥಮ್ (ನಾಯಕ), ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಇಶ್ ಸೋಧಿ, ಮ್ಯಾಟ್ ಹೆನ್ರಿ, ಅಜಾಜ್ ಪಟೇಲ್, ವಿಲಿಯಂ ಓ’ರೂರ್ಕ್.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...