ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಕೊಹ್ಲಿ, ರೋಹಿತ್‌ಗೆ ವಿಶ್ರಾಂತಿ

Date:

ಇದೇ ತಿಂಗಳಿಂದ ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಕ್ರಿಕೆಟ್ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದ್ದು, ಪ್ರಮುಖ ಆಟಗಾರರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ.

ವೆಸ್ಟ್‌ ಇಂಡೀಸ್‌ ಸರಣಿಗೆ ಆಯ್ಕೆ ಮಾಡಿರುವ ತಂಡದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಬ್ಯಾಟರ್ 20 ವರ್ಷ ವಯಸ್ಸಿನ ಯುವ ಆಟಗಾರ ತಿಲಕ್‌ ವರ್ಮಾ ಅವರಿಗೆ ಅವಕಾಶ ನೀಡಲಾಗಿದೆ.     

ತಿಲಕ್‌ ವರ್ಮಾ ಕಳೆದ ಎರಡು ಋತುಗಳಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. 5ನೇ ಕ್ರಮಾಂಕದಲ್ಲಿ 47 ಪಂದ್ಯಗಳಿಂದ 142 ಸ್ಟ್ರೈಕ್ ರೇಟ್‌ನೊಂದಿಗೆ ಆಟವಾಡಿರುವುದು ಅಜಿತ್ ಅಗರ್ಕರ್ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿಯ ಗಮನ ಸೆಳೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಕೂಡ ನಾಯಕ ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡಕ್ಕೆ ಪುನರಾಗಮನ ಮಾಡಿದ್ದಾರೆ ಹಾಗೂ ಆರಂಭಿಕ ಆಟಗಾರ ಸೂರ್ಯಕುಮಾರ್ ಯಾದವ್ ಅವರು ಉಪನಾಯಕರಾಗಿದ್ದಾರೆ.

ಕೆಕೆಆರ್‌ನ ಎಡಗೈ ಬ್ಯಾಟ್ಸ್‌ಮನ್ ರಿಂಕು ಸಿಂಗ್ ಅವಕಾಶ ನೀಡಲಾಗಿಲ್ಲ. ಕೇರಳದ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್‌ ಅವರಿಗೆ ಸ್ಥಾನ ನೀಡಲಾಗಿದೆ. ವೇಗಿ ಅವೇಶ್ ಖಾನ್, ಸ್ಪಿನ್ನರ್‌ಗಳಾದ ಕುಲದೀಪ್ ಯಾದವ್ ಮತ್ತು ಯಜುವೇಂದ್ರ ಚಾಹಲ್ ಅವರು ಸಹ 15 ಸದಸ್ಯರ ತಂಡದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್‌ ಅಗರ್ಕರ್‌ ನೇಮಕ; ಅನುಭವಗಳ ನಡುವೆ ಹಲವು ಸವಾಲುಗಳು?

ಭಾರತ ತಂಡ:

ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪ ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಸರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ಟಿ20 ಸರಣಿ ವೇಳಾಪಟ್ಟಿ

ಮೊದಲ ಪಂದ್ಯ ಆಗಸ್ಟ್ 3, ಬ್ರಿಯಾನ್ ಲಾರಾ ಸ್ಟೇಡಿಯಂ, ಟ್ರಿನಿಡಾಡ್

ಎರಡನೇ ಪಂದ್ಯ: ಆಗಸ್ಟ್ 6, ಪ್ರಾವಿಡೆನ್ಸ್ ಸ್ಟೇಡಿಯಂ, ಗಯಾನಾ

ಮೂರನೇ ಪಂದ್ಯ: ಆಗಸ್ಟ್ 8, ಪ್ರಾವಿಡೆನ್ಸ್ ಸ್ಟೇಡಿಯಂ, ಗಯಾನಾ

ನಾಲ್ಕನೇ ಪಂದ್ಯ: ಆಗಸ್ಟ್ 12, ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂ, ಲಾಡರ್ಹಿಲ್, ಫ್ಲೋರಿಡಾ

ಐದನೇ ಪಂದ್ಯ: ಆಗಸ್ಟ್ 13, ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂ, ಲಾಡರ್ಹಿಲ್, ಫ್ಲೋರಿಡಾ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...