ವಿಶ್ವಕಪ್ | ಮ್ಯಾಕ್ಸ್‌ವೆಲ್ ‘ಕ್ಯಾಚ್’ ಕೈ ಚೆಲ್ಲಿ ಮಹತ್ವದ ‘ಮ್ಯಾಚ್’ ಕಳೆದುಕೊಂಡ ಅಫ್ಘಾನಿಸ್ತಾನ

Date:

ಕ್ರಿಕೆಟ್‌ಗೆ ಸಂಬಂಧಿಸಿ ಇಂಗ್ಲಿಷ್‌ನಲ್ಲಿ ‘catches win matches’ ಎಂಬ ಮಾತೊಂದಿದೆ. ಒಂದು ವೇಳೆ ಅದು ಈ ಬಾರಿಯ ವಿಶ್ವಕಪ್‌ಗೆ ಸಂಬಂಧಿಸಿ ಹೇಳುವುದಾದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ V/s ಅಫ್ಘಾನಿಸ್ತಾನ ತಂಡದ ಮಧ್ಯೆ ಇಂದು(ನ.7 ಮಂಗಳವಾರ) ನಡೆದ ಪಂದ್ಯಕ್ಕೆ ಅನ್ವಯಿಸಬೇಕು.

ಐಸಿಸಿ ಏಕದಿನ ವಿಶ್ವಕಪ್‌ನ ಮಹತ್ವದ 39ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ತಂಡಕ್ಕೆ ಶಾಕ್ ನೀಡಲು ಹೊರಟಿದ್ದ ಅಫ್ಘಾನಿಸ್ತಾನಕ್ಕೆ ನಿರಾಸೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಫ್ಘಾನಿಸ್ತಾನ ನೀಡಿದ್ದ 292 ರನ್‌ಗಳ ಸವಾಲಿನ ಮೊತ್ತವನ್ನು ಬೆನ್ನಟ್ಟಿದ್ದ ಆಸ್ಟ್ರೇಲಿಯಾ, 91 ರನ್‌ ಗಳಿಗೆ 7 ವಿಕೆಟ್ ಕಳೆದುಕೊಂಡಿತ್ತು.

ಈ ವೇಳೆ ಈ ವೇಳೆ ಕ್ರೀಸ್‌ನಲ್ಲಿದ್ದ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಜೊತೆಯಾದ ನಾಯಕ ಪ್ಯಾಟ್ ಕಮ್ಮಿನ್ಸ್ 202 ರನ್‌ಗಳ ಜೊತೆಯಾಟ ನಡೆಸುವ ಮೂಲಕ ತಂಡವನ್ನು ಸೋಲಿನ ದವಡೆಯಿಂದ ಪಾರು ಮಾಡಿದ್ದಲ್ಲದೇ, ಸೆಮಿಫೈನಲ್ ತಲುಪಿದರು. 128 ಎಸೆತಗಳಲ್ಲಿ ದ್ವಿಶತಕ ಪೂರೈಸಿದ ಗ್ಲೆನ್ ಮ್ಯಾಕ್ಸ್‌ವೆಲ್‌, ಆಸ್ಟ್ರೇಲಿಯಾಗೆ 3 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು. ಆಸೀಸ್, 46.5 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 293 ರನ್ ಗಳಿಸಿತು.

ಕುಸಿದ ಆಸ್ಟ್ರೇಲಿಯಾಗೆ ಆಸರೆಯಾಗಿ ಬ್ಯಾಟಿಂಗ್ ನಡೆಸುತ್ತಿದ್ದ ಗ್ಲೆನ್ ಮ್ಯಾಕ್ಸ್‌ವೆಲ್, ಸ್ಪಿನ್ನರ್ ನೂರ್ ಓವರ್‌ನಲ್ಲಿ ನೀಡಿದ್ದ ಸುಲಭ ಕ್ಯಾಚ್ ಅನ್ನು ಹಿಡಿಯುವಲ್ಲಿ ಫೀಲ್ದರ್ ಮುಜೀಬ್ ವಿಫಲರಾದರು. ಇದನ್ನೇ ಅವಕಾಶವನ್ನಾಗಿ ಬಳಸಿಕೊಂಡ ಬಲಗೈ ಬ್ಯಾಟರ್ ಮ್ಯಾಕ್ಸ್‌ವೆಲ್ ನಾಯಕ ಕಮ್ಮಿನ್ಸ್ ಜೊತೆಗೆ ಬೃಹತ್ ಜೊತೆಯಾಟ ನಡೆಸಿದ್ದಲ್ಲದೇ, ರೋಚಕ ಗೆಲುವನ್ನು ತಂದುಕೊಟ್ಟರು.

ಕೊನೆಯಲ್ಲಿ ಮ್ಯಾಕ್ಸ್‌ವೆಲ್ ಔಟಾಗದೆ 201(128 ಎಸೆತ, 21 ಬೌಂಡರಿ, 10 ಸಿಕ್ಸ್), ಪ್ಯಾಟ್ ಕಮ್ಮಿನ್ಸ್ 12 ರನ್ ಗಳಿಸಿ ಔಟಾಗದೆ ಉಳಿದರು. ಗಾಯಗೊಂಡಿ

ಸಂಘಟಿತ ಬೌಲಿಂಗ್ ದಾಳಿ ನಡೆಸಿದ್ದ ಅಫ್ಘಾನಿಸ್ತಾನ

ಎರಡನೇ ಇನ್ನಿಂಗ್ಸ್‌ ಆರಂಭದಲ್ಲಿ ನಲುಗಿದ್ದ ಆಸೀಸ್ ಬ್ಯಾಟರ್‌ಗಳು ಅಫ್ಘಾನಿಸ್ತಾನದ ಸಂಘಟಿತ ಬೌಲಿಂಗ್‌ಗೆ ತರಗೆಲೆಗಳಂತೆ ವಿಕೆಟ್ ಒಪ್ಪಿಸಿದ್ದರು.

ನವೀನ್ ಉಲ್ ಹಕ್ ಎಸೆದ 2ನೇ ಓವರ್​ನ 2ನೇ ಎಸೆತದಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದ ಟ್ರಾವಿಸ್ ಹೆಡ್ (0) ಪಡೆಯುವ ಮೂಲಕ ಅಫ್ಘಾನಿಸ್ತಾನ್ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಬಳಿಕ ನವೀನ್ ಉಲ್ ಹಕ್ ಎಸೆದ 6ನೇ ಓವರ್​ನ 4ನೇ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಬಲೆಗೆ ಬಿದ್ದು, 11 ಎಸೆತಗಳಲ್ಲಿ 24 ರನ್ ಬಾರಿಸಿದ್ದ ಮಿಚೆಲ್ ಮಾರ್ಷ್​ ವಿಕೆಟ್ ಒಪ್ಪಿಸಿದರು.

ಅಝ್ಮತ್ ಒಮರ್​ಝಾಹಿ ಎಸೆದ ಎಸೆದ 9ನೇ ಓವರ್​ನ ಮೊದಲ ಎಸೆತದಲ್ಲೇ ಡೇವಿಡ್ ವಾರ್ನರ್(18) ಕ್ಲೀನ್ ಬೌಲ್ಡ್​ ಆಗಿ ಪೆವಿಲಿಯನ್ ಸೇರಿದರೆ, ಬಳಿಕ ಕ್ರೀಸ್‌ಗೆ ಬಂದ ಜೋಶ್ ಇಂಗ್ಲಿಸ್ (0) ಮುಂದಿನ ಎಸೆತದಲ್ಲಿ ಸ್ಲಿಪ್​ನಲ್ಲಿ ಕ್ಯಾಚ್ ನೀಡಿ, ನಿರ್ಗಮಿಸಿದರು.

15ನೇ ಓವರ್​ನಲ್ಲಿ ರನ್ ಕದಿಯುವ ಯತ್ನದಲ್ಲಿ ವಿಫಲರಾದ ಮಾರ್ನಸ್ ಲಾಬೂಶೈನ್, ರಹಮತ್ ಶಾ ಅತ್ಯುತ್ತಮ ಫೀಲ್ಡಿಂಗ್‌ಗೆ ರನೌಟ್‌ಗೆ ಬಲಿಯಾದರು. ಲಾಬೂಶೈನ್ 14 ರನ್ ಗಳಿಸಿ ಔಟಾದರು. 15 ಓವರ್‌ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ 73 ರನ್‌ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡಿತ್ತು.

ಬಳಿಕ ದಾಳಿಗಿಳಿದ ರಶೀದ್ ಖಾನ್ ಎಸೆದ 17ನೇ ಓವರ್​ನಲ್ಲಿ ಮಾರ್ಕಸ್ ಸ್ಟೋಯಿನಿಸ್ ಅವರನ್ನು ಎಲ್​ಬಿಡಬ್ಲ್ಯೂ ಬಲೆಗೆ ಬೀಳಿಸಿದರು. 7 ಎಸೆತಗಳಲ್ಲಿ 6 ರನ್ ಬಾರಿಸಿದ್ದ ಸ್ಟೋಯಿನಿಸ್ ಪೆವಿಲಿಯನ್ ಪರೇಡ್ ನಡೆಸಿದರು.

ಬಳಿಕ ಕ್ರೀಸ್‌ಗೆ ಬಂದಿದ್ದ ಮಿಚೆಲ್ ಸ್ಟಾರ್ಕ್​, 19ನೇ ಓವರ್​ನಲ್ಲಿ ಅಫ್ಘಾನ್ ವಿಕೆಟ್ ಕೀಪರ್ ಇಕ್ರಮ್ ಅಲಿಖಿಲ್ ಹಿಡಿದ ಅದ್ಭುತ ಕ್ಯಾಚ್​ಗೆ ಬಲಿಯಾದರು. ಈ ವೇಳೆ ಆಸ್ಟ್ರೇಲಿಯಾ 91 ರನ್‌ ಗಳಿಗೆ 7 ವಿಕೆಟ್ ಕಳೆದುಕೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...