ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ಭಾರತೀಯ ಬೌಲರ್‌ಗಳ ಬೆವರಿಳಿಸಿದ ಟ್ರಾವಿಸ್‌ ಹೆಡ್-ಸ್ಮಿತ್‌

Date:

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದ ಮೊದಲ ದಿನವೇ ಆಸ್ಟ್ರೇಲಿಯಾ ಕೈ ಮೇಲಾಗಿದೆ. ಟೀಮ್‌ ಇಂಡಿಯಾದ ಐವರು ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಆಸೀಸ್‌ ಪಡೆ, ಮೊದಲ ದಿನದಂತ್ಯಕ್ಕೆ 3 ವಿಕೆಟ್ ನಷ್ಟದಲ್ಲಿ 327 ರನ್ ಗಳಿಸಿದೆ.

ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ಬುಧವಾರ ಆರಂಭವಾದ ʻಫೈನಲ್‌ ಪೈಟ್‌ʼನಲ್ಲಿ ಟ್ರಾವಿಸ್ ಹೆಡ್ ಭರ್ಜರಿ ಶತಕ ಮತ್ತು ಸ್ಮೀವ್ ಸ್ಮಿತ್ ಗಳಿಸಿದ ಅಜೇಯ 95 ರನ್ ಗಳ ನೆರವಿನಿಂದ ಆಸ್ಟ್ರೇಲಿಯಾ ದಿನದಾಟದ ಅಂತ್ಯಕ್ಕೆ 85 ಓವರ್‌ಗಳಲ್ಲಿ ಕೇವಲ 3 ವಿಕೆಟ್ ನಷ್ಟಕ್ಕೆ 327 ರನ್ ಗಳಿಸಿದೆ.

ಸತತ ಎರಡನೇ ಬಾರಿ  ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶಿಸಿರುವ ಭಾರತಕ್ಕೆ ಈ ಬಾರಿ ಚಾಂಪಿಯನ್‌ ಪಟ್ಟ ಒಲಿಯಬೇಕಾದರೆ ಭಾರಿ ಸಹಾಸವನ್ನೇ ಮಾಡಬೇಕಿದೆ. ಇನ್ನು ನಾಲ್ಕು ದಿನಗಳ ಪಂದ್ಯ ಬಾಕಿ ಉಳಿದಿದ್ದು, ಎರಡನೇ ದಿನವೂ ಆಸೀಸ್‌ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ನೆಲೆಯೂರಿ ನಿಂತರೆ ರೋಹಿತ್‌ ಪಡೆಯ ಗೆಲುವಿನ ಕನಸಿಗೆ ಅಡ್ಡಿಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಾಸ್​ ಸೋತು ಮೊದಲು ಬ್ಯಾಟಿಂಗ್​ ಆಹ್ವಾನ ಪಡೆದಿದ್ದ ಆಸ್ಟ್ರೇಲಿಯಾ ತಂಡ, ಎರಡು ರನ್‌ ಗಳಿಸುವಷ್ಟರಲ್ಲಿಯೇ ಮೊದಲ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಮುಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಎಡಗೈ ಬ್ಯಾಟರ್‌ ಉಸ್ಮಾನ್ ಖ್ವಾಜಾ ಶೂನ್ಯಕ್ಕೆ ಕ್ಯಾಚಿತ್ತು ನಿರ್ಗಮಿಸಿದ್ದರು. ಡೇವಿಡ್​ ವಾರ್ನರ್​ 43 ರನ್ ಗಳಿಸಿ ಶಾರ್ದೂಲ್​ ಠಾಕೂರ್​ ಬೌಲಿಂಗ್​ನಲ್ಲಿ ವಿಕೆಟ್​ ಒಪ್ಪಿಸಿದರು. ಭೋಜನ ವಿರಾಮದ ಬಳಿ ಕ್ರೀಸ್​ಗೆ ಬಂದ ಮಾರ್ನಸ್ ಲ್ಯಾಬುಸ್ಚಾಗ್ನೆ 26 ರನ್​ ಗಳಿಸಿದ್ದ ವೇಳೆ ಮೊಹಮ್ಮದ್ ಶಮಿ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್‌ ಆದರು.

24.1 ಓವರ್‌ಗಳಲ್ಲಿ 76 ರನ್‌ಗಳಿಗೆ ಆಸ್ಟ್ರೇಲಿಯಾದ 3 ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದ ಭಾರತ, ಪಂದ್ಯದಲ್ಲಿ ಮೇಲುಗೈ ಸಾಧಿಸುವ ಸೂಚನೆ ನೀಡಿತ್ತು. ಆದರೆ ಆ ಬಳಿಕ ಒಂದಾದ ಸ್ಟೀವ್​ ಸ್ಮಿತ್​ ಮತ್ತು ಟ್ರಾವಿಸ್​ ಹೆಡ್​ ತಂಡದ ನೆರವಿಗೆ ನಿಂತರು.

ನಾಲ್ಕನೇ ವಿಕೆಟ್‌ 251 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದ ಟ್ರಾವಿಸ್‌-ಸ್ಮಿತ್‌ ಜೋಡಿ, ಎರಡನೇ ದಿನಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದೆ. 156 ಎಸೆತದಲ್ಲಿ 1 ಸಿಕ್ಸ್ ಮತ್ತು 22 ಬೌಂಡರಿಗಳ ಮೂಲಕ ಹೆಡ್‌ 146 ರನ್‌ ಮತ್ತು ಸ್ಟೀವ್​ ಸ್ಮಿತ್​ 227 ಎಸೆತದಲ್ಲಿ 14 ಬೌಂಡರಿಗಳ ಮೂಲಕ 95 ರನ್​ ಗಳಿಸಿ ಅಜೇಯರಾಗುಳಿದಿದ್ದಾರೆ.

ಬೌಲಿಂಗ್‌ನಲ್ಲಿ ಮುಹಮ್ಮದ್ ಶಮಿ, ಮುಹಮ್ಮದ್ ಸಿರಾಜ್​, ಶಾರ್ದೂಲ್​ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...