ಟಿ20 ವಿಶ್ವಕಪ್ | ಪಾಕ್‌ಗೆ ಶಾಕ್ ನೀಡಿದ ಅಮೆರಿಕ: ಸೂಪರ್ ಓವರ್‌ನಲ್ಲಿ ಐತಿಹಾಸಿಕ ಗೆಲುವು

Date:

ಟಿ20 ವಿಶ್ವಕಪ್‌ನ ಆತಿಥ್ಯ ವಹಿಸಿಕೊಂಡಿರುವ ಅಮೆರಿಕ ತಮ್ಮ ಲೀಗ್ ಹಂತದ ಎರಡನೇ ಪಂದ್ಯದಲ್ಲಿ ಬಲಿಷ್ಠ ಪಾಕಿಸ್ತಾನ ತಂಡವನ್ನು ಸೂಪರ್ ಓವರ್‌ನಲ್ಲಿ 5 ರನ್‌ಗಳಿಂದ ರೋಚಕವಾಗಿ ಸೋಲಿಸುವ ಮೂಲಕ ಇತಿಹಾಸ ಬರೆದಿದೆ.

ಟಾಸ್ ಗೆದ್ದು‌ ಮೊದಲು ಬ್ಯಾಟಿಂಗ್ ನಡೆಸಿದ್ದ ಕ್ರಿಕೆಟ್ ಶಿಶು ಅಮೆರಿಕ, ಸಂಘಟಿತ ಬೌಲಿಂಗ್‌ನ ನೆರವಿನಿಂದ ಪಾಕಿಸ್ತಾನವನ್ನು 159 ರನ್‌ಗಳಿಗೆ ನಿಯಂತ್ರಿಸಿತ್ತು. ಈ ಗುರಿಯನ್ನು ಬೆನ್ನತ್ತಿದ ಯುಎಸ್‌ಎ, ಕೇವಲ 3 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿದ್ದರಿಂದ ಕೊನೆಯ ಓವರ್‌ನಲ್ಲಿ ಪಂದ್ಯವನ್ನು ಟೈ ಮಾಡಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಬಳಿಕ ನಡೆದ ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಅಮೆರಿಕ, 18 ರನ್ ಗಳಿಸಿತ್ತಲ್ಲದೇ, 6 ಎಸೆತಗಳಲ್ಲಿ ಪಾಕ್ ಗೆಲುವಿಗೆ 19 ರನ್‌ಗಳ ಗುರಿ ನೀಡಿತ್ತು.

ಅಮೆರಿಕ ಪರ ಸೂಪರ್ ಓವರ್ ಎಸೆದ ಭಾರತೀಯ ಮೂಲದ ಆಟಗಾರ ಸೌರಭ್ ನೇತ್ರವಾಕರ್, ಪಾಕಿಸ್ತಾನದ ಒಂದು ವಿಕೆಟ್ ಕಬಳಿಸಿದ್ದಲ್ಲದೇ ಕೇವಲ 13 ರನ್‌ಗಳಿಗೆ ನಿಯಂತ್ರಿಸುವ ಮೂಲಕ ಐತಿಹಾಸಿಕ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.


ಅಮೆರಿಕ ವಿರುದ್ಧದ ಈ ಅನಿರೀಕ್ಷಿತ ಸೋಲಿನೊಂದಿಗೆ ಬಾಬರ್ ಆಝಂ ನೇತೃತ್ವದ ಪಾಕಿಸ್ತಾನ ತಂಡವು 2024 ಟಿ20 ವಿಶ್ವಕಪ್ ಅಭಿಯಾನ ಆರಂಭಿಸಿದ್ದು, ಪಾಕ್‌ನ ಕ್ರೀಡಾಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದೆ.

ಕೆನಡಾ ವಿರುದ್ಧ ಉದ್ಘಾಟನಾ ಪಂದ್ಯದಲ್ಲಿ ಅಮೆರಿಕ ಭರ್ಜರಿ ಗೆಲುವು ಸಾಧಿಸಿತ್ತು. ಟೀಮ್ ಇಂಡಿಯಾ, ಪಾಕಿಸ್ತಾನ, ಅಮೆರಿಕ ಹಾಗೂ ಐರ್ಲ್ಯಾಂಡ್ ತಂಡಗಳು ಎ ಗುಂಪಿನಲ್ಲಿ ಆಡುತ್ತಿವೆ.

ಈಗಾಗಲೇ ಆಡಿರುವ ಎರಡೂ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಆತಿಥೇಯ ಅಮೆರಿಕ ತಂಡ, ಗುಂಪಿನಲ್ಲಿ ಮೊದಲ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...