ಐಪಿಎಲ್ : ಇತಿಹಾಸ ಸೃಷ್ಟಿಸಿದ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ; ಸ್ಫೋಟಕ ಶತಕ

Date:

ಐಪಿಎಲ್ ಇತಿಹಾಸದಲ್ಲಿ ಕೇವಲ 14 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಇಂದು ಗುಜರಾತ್ ಟೈಟಾನ್ಸ್ ಎದುರು ಶತಕ ಸಿಡಿಸುವ ಮೂಲಕ ಹೊಸ ಮೈಲಿಗಲ್ಲಿಗೆ ಸೃಷ್ಟಿಸಿದ್ದಾರೆ.

ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ಇದೀಗ 2025ರ ಐಪಿಎಲ್ ಟೂರ್ನಿಯಲ್ಲಿ ಅತಿವೇಗದ ಅರ್ಧಶತಕ ಸಿಡಿಸಿದ ಅಪರೂಪದ ಸಾಧನೆಯನ್ನು ಮಾಡುವ ಮೂಲಕ ಎಲ್ಲ ಹಿರಿಯ ಆಟಗಾರರು ಹುಬ್ಬೇರುವಂತೆ ಮಾಡಿದ್ದಾರೆ.

ಏಪ್ರಿಲ್ 20ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ವೈಭವ್, ದೈತ್ಯ ಆಟಗಾರ ಕ್ರಿಸ್ ಗೇಲ್ ಬಳಿಕ ಈ ಸಾಧನೆ ಮಾಡಿದ್ದಾರೆ. ಅಲ್ಲದೇ, ಅತಿಕಿರಿಯ ಕ್ರಿಕೆಟಿಗ ಎನ್ನುವ ಹಿರಿಮೆಗೂ ಪಾತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಕ್ನೋ ವಿರುದ್ಧ ತಾನು ಎದುರಿಸಿದ್ದ ಶಾರ್ದುಲ್ ಠಾಕೂರ್ ಅವರ ಮೊದಲ ಎಸೆತದಲ್ಲೇ ವೈಭವ್ ಸೂರ್ಯವಂಶಿ ಸಿಕ್ಸರ್ ಬಾರಿಸುವ ಮೂಲಕ ಮಿಂಚಿದ್ದರು. ಇದೀಗ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸ್ಫೋಟಕ ಶತಕ ಬಾರಿಸುವ ಮೂಲಕ ಆಡಿದ ಮೂರನೇ ಪಂದ್ಯದಲ್ಲಿ ಮೊದಲನೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವರ್ಷದ ಕೊನೆಯಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನ ಎರಡನೇ ದಿನ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಬರೋಬ್ಬರಿ 1.1 ಕೋಟಿ ರೂಪಾಯಿ ನೀಡಿ ವೈಭವ್ ಸೂರ್ಯವಂಶಿ ಅವರನ್ನು ಖರೀದಿಸಿತ್ತು. ಆಗ 13 ವರ್ಷದವರಾಗಿದ್ದ ವೈಭವ್ ಈಗ 14 ವರ್ಷದವರಾಗಿದ್ದಾರೆ.

ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಾಯಕ ಶುಭ್‌ಮನ್ ಗಿಲ್(84) ಹಾಗೂ ಜೋಸ್ ಬಟ್ಲರ್(50) ಅಜೇಯ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿತ್ತು.

ಆದರೆ ಕಠಿಣ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಅತ್ಯದ್ಭುತ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಈ ಜೋಡಿ ಕೇವಲ 11.5 ಓವರ್‌ನಲ್ಲಿ 166 ರನ್‌ಗಳ ಜೊತೆಯಾಟವಾಡುವ ಮೂಲಕ ರಾಜಸ್ಥಾನ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಸೂರ್ಯವಂಶಿ 38 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 11 ಸಿಕ್ಸರ್ ಸಹಿತ 101 ರನ್ ಸಿಡಿಸಿ ಪ್ರಸಿದ್ಧ್ ಕೃಷ್ಣಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಯಶಸ್ವಿ ಜೈಸ್ವಾಲ್ ಅಜೇಯ 70 ರನ್ ಸಿಡಿಸಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...