ಐಪಿಎಲ್ | ಮಿಂಚಿದ ಫಿಲ್ ಸಾಲ್ಟ್, ವರುಣ್: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದು ಬೀಗಿದ ಕೋಲ್ಕತ್ತಾ ನೈಟ್ ರೈಡರ್ಸ್‌

Date:

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಪಿಎಲ್‌ನ 47ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಾವುದೇ ಅರ್ಧಶತಕಗಳಿಲ್ಲದೆ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನತ್ತಿದ ಕೆಕೆಆರ್, ಇನ್ನೂ 21 ಎಸೆತ ಬಾಕಿ ಇರುವಂತೆಯೇ 157 ರನ್‌ ಹೊಡೆದು ಜಯಗಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಲ್ಕತ್ತಾ ಆರಂಭಿಕ ಆಟಗಾರ ಫಿಲ್‌ ಸಾಲ್ಟ್‌ ಆರಂಭದಲ್ಲೇ ಅಬ್ಬರಿಸಲು ಆರಂಭಿಸಿದ್ದರು. 68 ರನ್‌(33 ಎಸೆತ, 7 ಬೌಂಡರಿ, 5 ಸಿಕ್ಸರ್‌) ಸಿಡಿಸಿ ಔಟಾದರು. ಇದಕ್ಕೂ ಮೊದಲು ಆರಂಭಿಕನಾಗಿ ಬಂದಿದ್ದ ಸುನಿಲ್ ನರೈನ್ 10 ಎಸೆತಗಳಲ್ಲಿ 3 ಬೌಂಡರಿ ಸಮೇತ 15 ರನ್ ಗಳಿಸಿ, ಔಟಾಗಿದ್ದರು.

ಕೊನೆಯಲ್ಲಿ ಕೆಕೆಆರ್ ಪರ ಮುರಿಯದ 4ನೇ ವಿಕೆಟಿಗೆ ನಾಯಕ ಶ್ರೇಯಸ್‌ ಅಯ್ಯರ್‌ ಮತ್ತು ವೆಂಕಟೇಶ್‌ ಅಯ್ಯರ್‌ 43 ಎಸೆತಗಳಲ್ಲಿ 57 ರನ್‌ ಜೊತೆಯಾಟವಾಡಿ ತಂಡಕ್ಕೆ ಗೆಲುವು ತಂದುಕೊಟ್ಟರು. ಶ್ರೇಯಸ್‌ ಅಯ್ಯರ್‌ ಔಟಾಗದೆ 33 ರನ್‌(23 ಎಸೆತ, 3 ಬೌಂಡರಿ, 1 ಸಿಕ್ಸ್‌) ವೆಂಕಟೇಶ್‌ ಅಯ್ಯರ್ ಔಟಾಗದೆ 26 ರನ್‌(23‌ ಎಸೆತ, 2 ಬೌಂಡರಿ,1 ಸಿಕ್ಸ್‌) ಹೊಡೆದರು.

ಡೆಲ್ಲಿ ಪರ ನಾಯಕ ರಿಷಭ್‌ ಪಂತ್‌ 27 ರನ್ ಹೊಡೆದರೆ ಕೊನೆಯಲ್ಲಿ ಸ್ಪಿನ್ನರ್‌ ಕುಲದೀಪ್‌ ಯಾದವ್‌ ಔಟಾಗದೆ 35 ರನ್‌ (26 ಎಸೆತ, 5 ಬೌಂಡರಿ, 1 ಸಿಕ್ಸರ್‌) ಸಿಡಿಸಿದ ಪರಿಣಾಮ ತಂಡ 150 ರನ್‌ಗಳ ಗಡಿಯನ್ನು ದಾಟಿತ್ತು.

ಕೋಲ್ಕತ್ತಾ ಪರ ಬೌಲಿಂಗ್‌ನಲ್ಲಿ ವರುಣ್‌ ಚಕ್ರವರ್ತಿ 16 ರನ್‌ ನೀಡಿ 3 ವಿಕೆಟ್‌ ಕಿತ್ತರೆ, ವೈಭವ್‌ ಅರೋರಾ ಮತ್ತು ಹರ್ಷಿತ್‌ ರಾಣಾ ತಲಾ 2 ವಿಕೆಟ್‌ ಪಡೆದರು.

ಇದನ್ನು ಓದಿದ್ದೀರಾ? ನೂರಾರು ಮಹಿಳೆಯರ ಅತ್ಯಾಚಾರವೆಸಗಿ ವಿದೇಶಕ್ಕೆ ಓಡಿ ಹೋದವನನ್ನು ಕರೆತಂದು ಮಂಗಳಸೂತ್ರದ ಬಗ್ಗೆ ಮಾತನಾಡಿ: ಪ್ರಿಯಾಂಕಾ ಗಾಂಧಿ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈವರೆಗೆ ಆಡಿದ 9 ಪಂದ್ಯಗಳಲ್ಲಿ 6 ಗೆಲುವು ಮತ್ತು 3 ಸೋಲುಗಳ ಮೂಲಕ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಮುಂದುವರೆದಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ 11 ಪಂದ್ಯಗಳಲ್ಲಿ 5 ಗೆಲುವು ಮತ್ತು 6 ಸೋಲುಗಳ ಮೂಲಕ 10 ಅಂಕಗಳನ್ನು ಕಲೆಹಾಕಿ 6ನೇ ಸ್ಥಾನದಲ್ಲಿದೆ. ಪ್ಲೇ ಆಫ್‌ ಹಂತಕ್ಕೆ ತಲುಪುವ ತಂಡಗಳು ಯಾವುವು ಎಂಬುದನ್ನು ಕಾದುನೋಡಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...