ಚಾಂಪಿಯನ್ಸ್‌ ಟ್ರೋಫಿ | 25 ವರ್ಷಗಳ ಸೋಲಿನ ಸೇಡಿನೊಂದಿಗೆ ದಾಖಲೆ ಬರೆದ ಭಾರತ

Date:

ಈ ಬಾರಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾರತ ದಾಖಲೆ ಬರೆದಿದೆ. ಲೀಗ್‌ನಲ್ಲಿ ನಡೆದ ಎಲ್ಲ ಮೂರು ಪಂದ್ಯಗಳನ್ನು ಗೆದ್ದ ಏಕೈಕ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ದುಬೈನಲ್ಲಿ ಬಾಂಗ್ಲಾ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದ್ದ ಭಾರತ ಪಾಕಿಸ್ತಾನದ ವಿರುದ್ಧವೂ 6 ವಿಕೆಟ್‌ಗಳ ಜಯ ಸಾಧಿಸಿತ್ತು. ಈಗ ನ್ಯೂಜಿಲೆಂಡ್‌ ವಿರುದ್ಧ 44 ರನ್‌ಗಳ ಜಯ ಸಾಧಿಸಿದೆ. ಈ ಮೂಲಕ ಹ್ಯಾಟ್ರಿಕ್‌ ಗೆಲುವಿನೊಂದಿಗೆ ಸೆಮಿ ಫೈನಲ್‌ ಪ್ರವೇಶಿಸಿದೆ.

ಮಂಗಳವಾರ ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ಮೊದಲ ಸೆಮಿಫೈನಲ್‌ ಪಂದ್ಯ ದುಬೈನಲ್ಲಿ ನಡೆದರೆ ಬುಧವಾರ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್‌ ಮಧ್ಯೆ ಎರಡನೇ ಸೆಮಿಫೈನಲ್‌ ನಡೆಯಲಿದೆ. ಭಾನುವಾರ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್ ತಂಡಕ್ಕೆ ಸೋಲುಣಿಸಿದೆ. 2000 ರಲ್ಲಿ ಉಭಯ ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗಿದ್ದವು. ಈ ವೇಳೆ ಭಾರತ ತಂಡಕ್ಕೆ 4 ವಿಕೆಟ್​ಗಳ ಸೋಲುಣಿಸಿ ನ್ಯೂಜಿಲೆಂಡ್ ಟ್ರೋಫಿ ಎತ್ತಿ ಹಿಡಿದಿತ್ತು.

ಈ ಸುದ್ದಿ ಓದಿದ್ದೀರಾ? ಐಸಿಸಿ ಏಕದಿನ ಬ್ಯಾಟಿಂಗ್ ರ್‍ಯಾಂಕಿಂಗ್‌: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು

ಇದಾದ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ಪಡೆಯನ್ನು ಸೋಲಿಸಲು ಟೀಮ್ ಇಂಡಿಯಾಗೆ ಸಾಧ್ಯವಾಗಿರಲಿಲ್ಲ. ಇದೀಗ ಬರೋಬ್ಬರಿ 25 ವರ್ಷಗಳ ಬಳಿಕ ಭಾರತೀಯ ಪಡೆ ನ್ಯೂಜಿಲೆಂಡ್ ತಂಡವನ್ನು ಬಗ್ಗು ಬಡಿದಿದೆ. ಈ ಮೂಲಕ 2 ದಶಕಗಳ ಹಳೆಯ ಸೋಲಿನ ಸೇಡನ್ನು ತೀರಿಸಿಕೊಂಡಿದೆ.

ಇನ್ನು ಮಾರ್ಚ್ 4 ರಂದು ನಡೆಯಲಿರುವ ಮೊದಲ ಸೆಮಿಫೈನಲ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡ ಮುಖಾಮುಖಿಯಾದರೆ, ಮಾರ್ಚ್ 5 ರಂದು ಜರುಗಲಿರುವ ಎರಡನೇ ಸೆಮಿಫೈನಲ್​ನಲ್ಲಿ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಣಸಲಿದೆ.

ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್​ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ ಬಗ್ಗು ಬಡಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಶ್ರೇಯಸ್ ಅಯ್ಯರ್ 77 ರನ್​ಗಳ ಕೊಡುಗೆ ನೀಡಿದರು. ಇನ್ನು ಅಂತಿಮ ಹಂತದಲ್ಲಿ ಹಾರ್ದಿಕ್ ಪಾಂಡ್ಯ 45 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 249 ರನ್ ಬಾರಿಸಿದರು.

250 ರನ್​ಗಳ ಸಾಧಾರಣ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ತಂಡವು ಈ ಬಾರಿ ಕೂಡ ಭಾರತಕ್ಕೆ ಸೋಲುಣಿಸಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಟೀಮ್ ಇಂಡಿಯಾದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಇಡೀ ಪಂದ್ಯದ ಚಿತ್ರಣ ಬದಲಿಸಿದರು.

10 ಓವರ್​ಗಳಲ್ಲಿ ಕೇವಲ 42 ರನ್ ನೀಡಿದ ವರುಣ್ ಚಕ್ರವರ್ತಿ 5 ಪ್ರಮುಖ ವಿಕೆಟ್ ಕಬಳಿಸಿದರು. ಪರಿಣಾಮ 45.3 ಓವರ್​ಗಳಲ್ಲಿ 205 ರನ್​ಗಳಿಸಿ ನ್ಯೂಜಿಲೆಂಡ್ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾ 44 ರನ್​ಗಳ ಭರ್ಜರಿ ಜಯ ಸಾಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...