ಕೆಎಸ್‌ಸಿಎ ಚುನಾವಣೆ ಫಲಿತಾಂಶ ಪ್ರಕಟ: ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

Date:

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (KSCA) ಅಧ್ಯಕ್ಷ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಮಾಜಿ ಕ್ರಿಕೆಟಿಗ ಬಿ ಕೆ ವೆಂಕಟೇಶ್ ಪ್ರಸಾದ್‌ ಗೆಲುವು ಸಾಧಿಸಿದ್ದಾರೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸೇರಿ ಒಟ್ಟು 16 ಸ್ಥಾನಗಳಿಗೆ ಡಿಸೆಂಬರ್ 07ರಂದು ಬೆಳಗ್ಗೆಯಿಂದ ಸಂಜೆವರೆಗೆ ಮತದಾನ ನಡೆದಿದ್ದು, ಇದೀಗ ಮತದಾನ ಎಣಿಕೆಯಲ್ಲಿ ವೆಂಕಟೇಶ್ ಪ್ರಸಾದ್‌ 191 ಮತಗಳ ಅಂತರದಿಂದ ಗೆದ್ದಿದ್ದಾರೆ. ಇದರೊಂದಿಗೆ ವೆಂಕಟೇಶ್ ಪ್ರಸಾದ್ 12 ವರ್ಷಗಳ ಬಳಿಕ ಮತ್ತೆ ಅಧ್ಯಕ್ಷರಾಗಿ ಕೆಎಸ್‌ಸಿಎಗೆ ವಾಪಸ್ಸಾಗಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಒಟ್ಟು 1,315 ಮತಗಳ ಚಲಾವಣೆ ಆಗಿದ್ದವು. ಕೆಎಸ್‌ಸಿಎ ಚುಕ್ಕಾಣಿ ಹಿಡಿಯಲು ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹಾಗೂ ಕೆ ಎನ್ ಶಾಂತಕುಮಾರ್ ಬಣಗಳ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಮಾಜಿ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್ ಹಾಗೂ ಅನಿಲ್ ಕುಂಬ್ಳೆ ಬಣದ ವೆಂಕಟೇಶ್ ಪ್ರಸಾದ್‌ಗೆ ಒಟ್ಟು 749 ಮತಗಳು ಬಂದಿದ್ದರೆ, ಬ್ರಿಜೇಶ್ ಪಾಟೀಲ್ ಬಣದ ಕೆ ಎನ್ ಶಾಂತಕುಮಾರ್‌ ಅವರಿಗೆ 558 ಮತಗಳು ಲಭವಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ವೆಂಕಟೇಶ್ ಪ್ರಸಾದ್ ಬಣದಿಂದ ಸುಜಿತ್ ಸೋಮಸುಂದರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರೆ, ಮಧುಕರ್ ಅವರು ಖಜಾಂಚಿಯಾಗಿ ಆಯ್ಕೆಯಾಗಿದರು. ಇನ್ನು ಕೆಎಸ್‌ಸಿಎ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೆನನ್ ಗೆಲುವು ಸಾಧಿಸಿದ್ದಾರೆ. ಈ ಬಾರಿ ಒಟ್ಟು 1315 ಮತಗಳ ಚಲಾವಣೆಯಾಗಿವೆ. 2013 ರಲ್ಲಿ 1351 ಮತಗಳ ಚಲಾವಣೆಗೊಂಡಿದ್ದವು. ಕೆಎಸ್ಸಿಎ ಇತಿಹಾಸದಲ್ಲಿ 2013ರಲ್ಲೇ ಅತಿ ಹೆಚ್ಚು ಮತದಾನವಾಗಿತ್ತು.

ಇದನ್ನು ಓದಿದ್ದೀರಾ? ಇಮ್ರಾನ್ ಖಾನ್ | ಮೈದಾನದ ‘ಕಪ್ತಾನ’ನಿಂದ ಜೈಲಿನ ಕೈದಿಯವರೆಗೆ 

ಪರಾಜಿತ ಅಥ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ವೆಂಕಟೇಶ್ ಪ್ರಸಾದ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಶಾಂತಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದು, ಶಾಂತಕುಮಾರ್ ಅವರ ನಾಮಪತ್ರ ಸಿಂಧುಗೊಳಿಸಿ ಚುನಾವಣೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿತ್ತು.

ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಸುಜೀತ್ ಸೋಮಸುಂದರ್ (719) ಅವರು ವಿನೋದ್ ಶಿವಪ್ಪ (588) ಎದುರು ಮೇಲುಗೈ ಸಾಧಿಸಿದರು. ಕಾರ್ಯದರ್ಶಿ ಸ್ಥಾನಕ್ಕೆ ಸಂತೋಷ್ ಮೆನನ್ (675) ಅವರು ಇ.ಎಸ್ . ಜಯರಾಮ್ (632) ವಿರುದ್ಧ ಗೆದ್ದರು. ಬಿ.ಎನ್. ಮಧುಕರ್ (736) ಅವರು ಎಂ.ಎಸ್. ವಿನಯ್ (571) ಎದುರು ಜಯಿಸಿ, ಖಜಾಂಚಿ ಸ್ಥಾನ ಪಡೆದರು.

ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಬ್ರಿಜೇಶ್ ಬಣದ ಬಿ.ಕೆ. ರವಿ (669) ಅವರು ಎ.ವಿ. ಶಶಿಧರ್ (638) ಎದುರು ಜಯಿಸಿದರು.

ಆಡಳಿತ ಸಮಿತಿಯ ಸದಸ್ಯರಾಗಿ ವಿ.ಎಂ. ಮಂಜುನಾಥ್ , ಶೈಲೇಶ್ ಪೋಳ್ (ಇಬ್ಬರೂ ಆಜೀವ ಸದಸ್ಯರ ವಿಭಾಗ), ಕಲ್ಪನಾ ವೆಂಕಟಾಚಾರ್, ಆಶಿಶ್ ಅಮರಲಾಲ್, ಅವಿನಾಶ್ ವೈದ್ಯ (ಬೆಂಗಳೂರು ವಲಯ), ಶ್ರೀನಿವಾಸ್ ಪ್ರಸಾದ್ (ಮೈಸೂರು), ಡಿ.ಎಸ್. ಅರುಣ್ (ಶಿವಮೊಗ್ಗ), ಸಿ.ಆರ್. ಹರೀಶ್ (ತುಮಕೂರು), ವೀರಣ್ಣ ಸವಡಿ (ಧಾರವಾಡ), ಕುಶಾಲ್ ಪಾಟೀಲ ಗಡಗಿ (ರಾಯಚೂರು) ಮತ್ತು ಶೇಖರ್ ಶೆಟ್ಟಿ (ಮಂಗಳೂರು–ಅವಿರೋಧ) ಅವರು ಆಯ್ಕೆಯಾದರು.

‘ಸಂಸ್ಥೆಯ ಸದಸ್ಯರು ನಮಗೆ ಅವಕಾಶ ಕೊಟ್ಟಿದ್ದಾರೆ. ಇದು ಕ್ರಿಕೆಟ್‌ಗೆ ಒಲಿದ ಗೆಲುವು. ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಮಾಡಿರುವ ವಾಗ್ದಾನಗಳನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ’ ಎಂದು ಫಲಿತಾಂಶ ಪ್ರಕಟವಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವೆಂಕಟೇಶ್ ಪ್ರಸಾದ್ ಹೇಳಿದರು.

ನಾಡಿನ ದಿಗ್ಗಜ ಕ್ರಿಕೆಟಿಗರಾದ ಜಿ.ಆರ್. ವಿಶ್ವನಾಥ್, ಬಿ.ಎಸ್. ಚಂದ್ರಶೇಖರ್, ರೋಜರ್ ಬಿನ್ನಿ, ಅನಿಲ್ ಕುಂಬ್ಳೆ, ರಾಹುಲ್‌ ದ್ರಾವಿಡ್ ಸೇರಿದಂತೆ ಹಲವರು ಮತ ಚಲಾಯಿಸಿದರು.

12 ವರ್ಷಗಳ ಬಳಿಕ ಮತ್ತೆ ಕೆಎಸ್‌ಸಿಎಗೆ
ವೆಂಕಟೇಶ್‌ ಈ ಹಿಂದೆ 2010 ರಿಂದ 2013ರವರೆಗೆ ಕೆಎಸ್‌ಸಿಎ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆಗ ಅನಿಲ್‌ ಕುಂಬ್ಳೆ ಅಧ್ಯಕ್ಷರಾಗಿದ್ದರು. ಜಾವಗಲ್‌ ಶ್ರೀನಾಥ್‌ ಕಾರ್ಯದರ್ಶಿಯಾಗಿದ್ದರು. ಇದೀಗ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ‌ 12 ವರ್ಷಗಳ ಬಳಿಕ ಮತ್ತೆ ಕೆಎಸ್‌ಸಿಎಗೆ ವಾಪಸ್ಸಾಗಿದ್ದಾರೆ.

1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ವೆಂಕಟೇಶ್ ಪ್ರಸಾದ್, 33 ಟೆಸ್ಟ್ ಪಂದ್ಯದಿಂದ 96 ವಿಕೆಟ್ ಕಬಳಿಸಿದ್ದರೆ, 161 ಏಕದಿನ ಪಂದ್ಯದಿಂದ 196 ವಿಕೆಟ್ ಉರುಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...