ಬಾರದ ಆಸ್ಟ್ರೇಲಿಯಾ ಸಿಬ್ಬಂದಿ: ತಮ್ಮ ಲಗೇಜ್‌ ತಾವೇ ಟ್ರಕ್‌ಗೆ ತುಂಬಿದ ಪಾಕ್ ಕ್ರಿಕೆಟಿಗರು! ವಿಡಿಯೋ ವೈರಲ್

Date:

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗಾಗಿ ಸಿಡ್ನಿಗೆ ಬಂದಿಳಿದ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಯಾರೊಬ್ಬರು ಬಾರದ ಹಿನ್ನೆಲೆಯಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಿಕ್​ನಲ್ಲಿ ತುಂಬಿಸಿ ಹೋಟೆಲ್​ಗೆ ತೆರಳಬೇಕಾದ ಪ್ರಸಂಗ ನಡೆದಿದೆ.

ಪಾಕಿಸ್ತಾನ -ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯು ಡಿಸೆಂಬರ್ 14 ರಿಂದ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನೂತನ ಟೆಸ್ಟ್ ತಂಡದ ನಾಯಕ ಶಾನ್ ಮಸೂದ್ ನೇತೃತ್ವದ ಪಾಕ್ ತಂಡ, ಲಾಹೋರ್‌ನಿಂದ ಸಿಡ್ನಿಗೆ ಬಂದಿಳಿದಿತ್ತು. ಈ ವೇಳೆ ಪಾಕ್ ಆಟಗಾರರನ್ನು ಸ್ವಾಗತಿಸಲು ಯಾರೂ ಬಂದಿರಲಿಲ್ಲ. ಅಲ್ಲದೇ, ಸ್ವತಃ ಪಾಕಿಸ್ತಾನ ರಾಯಭಾರ ಕಚೇರಿಯ ಅಧಿಕಾರಿಗಳು ಕೂಡ ಹಾಜರಿರಲಿಲ್ಲ ಎಂದು ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಆಟಗಾರರು ತಮ್ಮ ಲಗೇಜ್‌ಗಳನ್ನು ತಾವೇ ಟ್ರಕ್​ನಲ್ಲಿ ತುಂಬಿಸಿ ಹೋಟೆಲ್​ಗೆ ತೆರಳಬೇಕಾದ ಪರಿಸ್ಥಿತಿ ಒದಗಿಬಂತು. ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕ್ ಆಟಗಾರರನ್ನು ಸ್ವಾಗತಿಸಲು ಅಥವಾ ಇವರನ್ನು ಕರೆದೊಯ್ಯುವಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾದ ಅಧಿಕಾರಿಗಳ ನಡೆಗೆ ಕ್ರೀಡಾಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಈ ರೀತಿಯಾಗಿ ಅಂತಾರಾಷ್ಟ್ರೀಯ ಆಟಗಾರರನ್ನು ನಡೆಸಿಕೊಂಡದ್ದು ಸರಿ ಅಲ್ಲ ಎಂದು ತಿಳಿಸಿದ್ದಾರೆ. ಈ ನಡುವೆ ಕೆಲವರು ಇದು ಪಾಕಿಸ್ತಾನ ಕ್ರಿಕೆಟಿಗರ ಸರಳತೆ ಎಂದು ಮೆಚ್ಚಿಕೊಂಡು, ವ್ಯಂಗ್ಯವಾಡಿ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ.

pak

ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಪಾಕಿಸ್ತಾನ ಕ್ರಿಕೆಟ್ ತಂಡದ ಹಿರಿಯ ಆಟಗಾರ ಮೊಹಮ್ಮದ್ ರಿಝ್ವಾನ್ ತನ್ನ ಸಹ ಆಟಗಾರರ ಕಿಟ್ ಬ್ಯಾಗ್‌ಗಳನ್ನು ಲೋಡ್ ಮಾಡಲು ಟ್ರಕ್ ಒಳಗಡೆ ನಿಂತಿರುವುದು ಕಾಣಬಹುದು. ಬಾಬರ್ ಆಝಂ ಮತ್ತು ಶಾಹೀನ್ ಅಫ್ರಿದಿ ಸೇರಿದಂತೆ ಆಟಗಾರರು ಲಗೇಜ್‌ಗಳನ್ನು ಟ್ರಕ್​ನಲ್ಲಿ ತುಂಬಿಸಲು ನೆರವಾಗಿದ್ದಾರೆ. ಈ ನಡುವೆ ಸ್ಥಳದಲ್ಲಿದ್ದ ಕೆಲವು ಪಾಕ್ ಅಭಿಮಾನಿಗಳು ತಮ್ಮ ಇಷ್ಟದ ಆಟಗಾರರೊಂದಿಗೆ ಸೆಲ್ಫಿ ತೆಗೆಯುತ್ತಿರುವುದು ಕೂಡ ವಿಡಿಯೋದಲ್ಲಿ ದಾಖಲಾಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ, ಪಾಕ್ ಆಟಗಾರರ ವಾಸ್ತವ್ಯ ಮತ್ತು ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಿ ಎಂದು ಕ್ರಿಕೆಟ್ ಆಸ್ಟ್ರೇಲಿಯಾದ ಅಧಿಕಾರಿಗಳಲ್ಲಿ ಪಾಕ್ ಅಭಿಮಾನಿಗಳು ಮನವಿ ಮಾಡಿದ್ದಾರೆ.

ಈ ನಡುವೆ ಟ್ವೀಟ್ ಮಾಡಿರುವ ಭಾರತೀಯ ಕ್ರೀಡಾಭಿಮಾನಿ ಅಂಕುಶ್ ಗೋಯಲ್ ಎಂಬುವವರು, ‘ಅಂತಾರಾಷ್ಟ್ರೀಯ ಕಾರ್ಯಕ್ರಮಕ್ಕಾಗಿ ಆತಿಥೇಯ ರಾಷ್ಟ್ರದಿಂದ ಬಂದವರನ್ನು ಗೌರವಿಸುವುದು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಮೂಲಭೂತ ಸೌಲಭ್ಯವನ್ನು ಒದಗಿಸುವುದು ನಿಮ್ಮ ಕರ್ತವ್ಯ’ ಎಂದು ಕ್ರಿಕೆಟ್ ಆಸ್ಟ್ರೇಲಿಯಾದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಡಿಸೆಂಬರ್ 14ರಂದು ಪರ್ತ್‌ನಲ್ಲಿ ಆರಂಭವಾಗಲಿರುವ ಟೆಸ್ಟ್‌ ಸರಣಿಯು ನಂತರ ಡಿಸೆಂಬರ್ 26 ರಿಂದ 30 ವರೆಗೆ ಮೆಲ್ಬೋರ್ನ್, ಜನವರಿ 3 ರಿಂದ 7 ವರೆಗೆ ಸಿಡ್ನಿಯಲ್ಲಿ ತೃತೀಯ ಟೆಸ್ಟ್ ಆಯೋಜಿಸಲಾಗಿದೆ. ಪಾಕಿಸ್ತಾನವು ಆಸ್ಟ್ರೇಲಿಯಾದಲ್ಲಿ ಈವರೆಗೆ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಆದರೆ ಇದೀಗ ಹೊಸ ನಾಯಕ ಶಾನ್ ಮಸೂದ್ ನೇತೃತ್ವದಲ್ಲಿ ಇತಿಹಾಸ ನಿರ್ಮಿಸುತ್ತಾ ಎಂದು ಕಾದು ನೋಡಬೇಕಿದೆ.

ವಿಶ್ವಕಪ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ನೀರಸ ಪ್ರದರ್ಶನದ ನಂತರ, ಪಾಕ್ ಕ್ರಿಕೆಟ್ ಬೋರ್ಡ್ 34 ವರ್ಷದ ಶಾನ್ ಮಸೂದ್ ಅವರನ್ನು ಇತ್ತೀಚೆಗಷ್ಟೆ ಟೆಸ್ಟ್ ತಂಡದ ನಾಯಕರನ್ನಾಗಿ ನೇಮಿಸಿತ್ತು. ನಾಯಕನಾಗಿದ್ದ ಆರಂಭಿಕ ಆಟಗಾರ ಬಾಬರ್ ಆಝಂ ಟಿ20 ಸೇರಿದಂತೆ ಎಲ್ಲ ಸ್ವರೂಪಗಳ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023-25ರ ಪಾಯಿಂಟ್ ಟೇಬಲ್​ನಲ್ಲಿ ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧದ ಎರಡೂ ಟೆಸ್ಟ್‌ಗಳಲ್ಲಿ ಜಯಗಳಿಸಿ ಅಗ್ರಸ್ಥಾನದಲ್ಲಿದೆ. ಒಂಬತ್ತು ತಂಡಗಳ ಪಟ್ಟಿಯಲ್ಲಿ ಭಾರತ ಎರಡನೇ ಮತ್ತು ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...