ಮಗ ಟೀಂ ಇಂಡಿಯಾ ಕ್ರಿಕೆಟ್‌ನ ಸ್ಟಾರ್ ಆಟಗಾರನಾದರೂ ತನ್ನ ಕಾಯಕ ಬಿಡದ ರಿಂಕು ಸಿಂಗ್ ತಂದೆ

Date:

ತನ್ನ ಅಮೋಘ ಆಟದಿಂದ ಟೀಂ ಇಂಡಿಯಾದಲ್ಲಿ ಸ್ಟಾರ್ ಕ್ರಿಕೆಟಿಗ ರಿಂಕು ಸಿಂಗ್‌ ಕಳೆದ ವರ್ಷ ಸ್ಥಾನ ಪಡೆದಿದ್ದಾರೆ.

ರಿಂಕು ಸಿಂಗ್‌ ಕಳೆದ ವರ್ಷದ ಐಪಿಎಲ್‌ನಲ್ಲಿ ಕೆಕೆಆರ್‌ ಪರ ಅಮೋಘ ಆಟ ಪ್ರದರ್ಶಿಸಿದ್ದರು. ಅಲ್ಲದೆ ತಾವು ಆಡಿರುವ 15 ಪಂದ್ಯಗಳ 11 ಇನಿಂಗ್ಸ್‌ನ ಟಿ20 ಪಂದ್ಯದಲ್ಲೂ ರಿಂಕು ಸಿಂಗ್ 89 ಸರಾಸರಿಯಂತೆ 356 ರನ್ ಬಾರಿಸಿದ್ದರು. ಇದರಲ್ಲಿ ಎರಡು ಅರ್ಧ ಶತಕಗಳು ಒಳಗೊಂಡಿದ್ದವು.

ರಿಂಕು ಸಿಂಗ್‌ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಟಾರ್ ಕ್ರಿಕೆಟಿಗನಾಗಿ ಹೊರಹೊಮ್ಮಿದರೂ ಇವರ ತಂದೆ ಕಾನ್‌ಚೆಂದ್‌ ಸಿಂಗ್ ಯಾವುದೇ ಹಮ್ಮು ಬಿಮ್ಮು ಇಲ್ಲದೆ ತಮ್ಮ ಪಟ್ಟಣದಲ್ಲಿ ಸಿಲಿಂಡರ್‌ ಸಾಗಿಸುವ ತಮ್ಮ ಕಾಯಕದಲ್ಲಿ ನಿರತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶದ ಅಲಿಘಡದಲ್ಲಿ ತಮ್ಮ ಸಣ್ಣ ಟ್ರಕ್‌ನಲ್ಲಿ ಸಿಲಿಂಡರ್‌ ಸಾಗಿಸುತ್ತಿರುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮಗ ಟೀಂ ಇಂಡಿಯಾ ಕ್ರಿಕೆಟಿಗನಾದರೂ ಸಿಲಿಂಡರ್‌ ಸಾಗಿಸುವ ಕಾಯಕದಲ್ಲಿ ನಿರತರಾಗಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬಳಕೆದಾರರೊಬ್ಬರು ಪೋಸ್ಟ್‌ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ತಂದೆಯ ಉದ್ಯೋಗದ ಬಗ್ಗೆ ರಿಂಕು ಇತ್ತೀಚಿಗಷ್ಟೆ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದ್ದರು, “ನಾನು ನಮ್ಮ ತಂದೆಗೆ ಸಿಲಿಂಡರ್‌ ಸಾಗಿಸುವ ಕೆಲಸ ನಿಲ್ಲಿಸುವಂತೆ ಹೇಳಿದ್ದೆ. ಆದರೆ ತಮ್ಮ ಕೆಲಸ ಪ್ರೀತಿಸುವ ಕಾರಣ ಅವರು ತಮ್ಮ ಕಾಯಕ ಮುಂದುವರೆಸುತ್ತಿದ್ದಾರೆ. ಯಾರಾದರೂ ತಮ್ಮ ಜೀವನದುದ್ದಕ್ಕೂ ಕೆಲಸ ಮಾಡಿದ್ದರೆ ಅವರೆ ತಮ್ಮ ಸ್ವಇಚ್ಛೆಯಿಂದ ಕೆಲಸ ಬಿಡದ ಹೊರತು ನಮ್ಮಿಂದ ನಿಲ್ಲಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

ಉತ್ತರ ಪ್ರದೇಶದ ಅಲಿಘಡದಲ್ಲಿ ಜನಿಸಿದ್ದ ರಿಂಕು ಅವರನ್ನು ಕೆಕೆಆರ್ ತಂಡ 55 ಲಕ್ಷ ರೂ. ನೀಡಿ ಖರೀದಿಸಿತ್ತು. 2024ರಲ್ಲೂ ಮರಳಿ ಪಡೆದಿತ್ತು.

ರಿಂಕು ಬಗ್ಗೆ ಮಾತನಾಡಿದ್ದ ದಕ್ಷಿಣ ಆಫ್ರಿಕಾದ ಮಾಜಿ ಖ್ಯಾತ ಆಟಗಾರ ಎಬಿಡಿ ವಿಲಿಯರ್ಸ್, “ರಿಂಕು ಅದ್ಭುತ ಆಟಗಾರ. ಪಂದ್ಯ ಗೆಲ್ಲಿಸುವವ. ನೀವು ಯಾವಾಗಲು ನಿಮ್ಮ ತಂಡವನ್ನು ಪಂದ್ಯ ಗೆಲ್ಲಿಸಲು ಪ್ರಯತ್ನಿಸುವ ಸ್ಥಿರತೆಯನ್ನು ಕಾಯ್ದುಕೊಳ್ಳಬೇಕು” ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...