ಟೆಸ್ಟ್‌ ಕ್ರಿಕೆಟ್ ನಾಯಕನ ಸ್ಥಾನ ಬೇಡ ಎಂದ ವಿರಾಟ್; ಯುವ ಆಟಗಾರನಿಗೆ ಪಟ್ಟ ನೀಡಲು ಬಿಸಿಸಿಐ ಒಲವು

Date:

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ಬದಲು ಯುವ ಆಟಗಾರನಿಗೆ ನಾಯಕನ ಸ್ಥಾನ ನೀಡಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎನ್ನಲಾಗಿದೆ. ರೋಹಿತ್ ಶರ್ಮಾ ನಿವೃತ್ತಿಯಾದ ನಂತರ ವಿರಾಟ್ ಕೊಹ್ಲಿ ಅವರನ್ನು ಭಾರತ ಟೆಸ್ಟ್ ತಂಡಕ್ಕೆ ನಾಯಕರನ್ನಾಗಿ ಮರು ಆಯ್ಕೆ ಮಾಡುವ ಬಗ್ಗೆ ಚರ್ಚಿಸಲಾಗಿತ್ತು. ಆದರೆ ಶುಭ್​ಮನ್ ಗಿಲ್ ಅವರನ್ನು ಭಾರತದ ದೀರ್ಘಕಾಲೀನ ನಾಯಕರನ್ನಾಗಿ ಮಾಡುವ ಸಲುವಾಗಿ ಕೊಹ್ಲಿಯನ್ನು ಹೊರಗಿಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.

ಈ ಹಿಂದೆ ವಿರಾಟ್ ಕೊಹ್ಲಿ ಕೂಡ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕಾಗಿ ಪ್ರಯತ್ನ ಮಾಡಿದ್ದರು ಎಂದು ವರದಿಯಾಗಿತ್ತು. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಕೊಹ್ಲಿ ಟೀಮ್ ಇಂಡಿಯಾ ಆಡಳಿತ ಮಂಡಳಿ ಮುಂದೆ ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಇದೇ ಕಾರಣದಿಂದಾಗಿ ರೋಹಿತ್ ಶರ್ಮಾ ನಿವೃತ್ತಿ ನಂತರ ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಚರ್ಚೆ ನಡೆಸಿತ್ತು. ಆದರೆ ಇದೀಗ ವಿರಾಟ್ ಕೊಹ್ಲಿ ನಿವೃತ್ತಿ ಹೊಸ್ತಿಲಲ್ಲಿರುವ ಕಾರಣ ಯುವ ಆಟಗಾರನಿಗೆ ನಾಯಕನ ಸ್ಥಾನ ನೀಡುವುದು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿದೆ. ಹೀಗಾಗಿ ವಿರಾಟ್ ಕೊಹ್ಲಿ ಬದಲಿಗೆ ಶುಭ್​ಮನ್ ಗಿಲ್​ಗೆ ನಾಯಕತ್ವ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಟಿ20 ಬಳಿಕ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೂ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ತನ್ನನ್ನು ಆಯ್ಕೆ ಮಾಡಬೇಡಿ. ತಾನು ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತನಾಗಲು ನಿರ್ಧರಿಸಿದ್ದೇನೆ ಎಂದು ವಿರಾಟ್ ಕೊಹ್ಲಿ ಬಿಸಿಸಿಐ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ವಿರಾಟ್ ಕೊಹ್ಲಿಯ ನಿವೃತ್ತಿಯನ್ನು ಬಿಸಿಸಿಐ ಅಂಗೀಕರಿಸಿಲ್ಲ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಆಯ್ಕೆ ಸಮಿತಿ ಕೊಹ್ಲಿಯಲ್ಲಿ ಮನವಿ ಮಾಡಿದೆ. ಹೀಗಾಗಿ ಕೆಲವು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಒಂದು ವೇಳೆ ವಿರಾಟ್ ಕೊಹ್ಲಿ ತಮ್ಮ ನಿರ್ಧಾರ ಬದಲಿಸದಿದ್ದರೆ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ. ಆದಾಗ್ಯೂ ಬಿಸಿಸಿಐನ ವಿರಾಟ್ ಕೊಹ್ಲಿ ಅವರನ್ನು ಮನವೊಲಿಸುವ ಪ್ರಯತ್ನ ಮುಂದುವರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...