T20 ಕ್ರಿಕೆಟ್‌ | 12 ಸಾವಿರ ರನ್ ಪೂರೈಸಿದ ವಿರಾಟ್ ಕೊಹ್ಲಿ; ಮೊದಲ ಭಾರತೀಯ ಎಂಬ ಹೆಗ್ಗಳಿಕೆ

Date:

ಐಪಿಎಲ್‌ನಲ್ಲಿ ಸತತ 17ನೇ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಆಡಲು ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮೈದಾನಕ್ಕೆ ಇಳಿದಿದ್ದಾರೆ. ಅಂದಹಾಗೆ ಸರಣಿಯ ಮೊದಲ ಪಂದ್ಯದಲ್ಲೇ ತಮ್ಮ ವೃತ್ತಿಜೀವನದ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ.

ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ(21) ಕಡಿಮೆ ಮೊತ್ತಕ್ಕೆ ಗಳಿಸಿದರೂ ಕೂಡ ಹೊಸ ಮೈಲುಗಲ್ಲೊಂದನ್ನು ಸ್ಥಾಪಿಸಿದ್ದು, T20 ಕ್ರಿಕೆಟ್‌ನಲ್ಲಿ 12 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿರಾಟ್ ಕೊಹ್ಲಿ, ಕೇವಲ 6 ರನ್ ಗಳಿಸುತ್ತಿದ್ದಂತೆ, T20 ಕ್ರಿಕೆಟ್‌ನಲ್ಲಿ 12,000 ರನ್ ಪೂರೈಸಿದ್ದಾರೆ. ಈ ಸಾಧನೆ ಮಾಡಿದ ಮೊದಲ ಭಾರತೀಯ ಮತ್ತು ವಿಶ್ವದ ಆರನೇ ಬ್ಯಾಟ್ಸ್‌ಮನ್ ಎಂದೆನಿಸಿಕೊಂಡಿದ್ದಾರೆ. ಈ ಸ್ವರೂಪದಲ್ಲಿ ಅತಿ ಹೆಚ್ಚು ರನ್‌ ವೆಸ್ಟ್ ಇಂಡೀಸ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 14,562 ರನ್‌ ಗಳಿಸಿದ್ದಾರೆ.

ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದ 377ನೇ ಟಿ20 ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. 12000 ರನ್‌ಗಳಲ್ಲಿ 8 ಶತಕ ಮತ್ತು 91 ಅರ್ಧ ಶತಕಗಳೂ ಸೇರಿವೆ. ಜೊತೆಗೆ 1074 ಬೌಂಡರಿ ಮತ್ತು 371 ಸಿಕ್ಸರ್‌ ಕೂಡ ಇದೆ. ಕೊಹ್ಲಿ ಗಳಿಸಿರುವ 12,000 ರನ್‌ಗಳಲ್ಲಿ ಅವರು ಆರ್‌ಸಿಬಿ ಪರ ಐಪಿಎಲ್‌ನಲ್ಲಿ ಮತ್ತು ಚಾಂಪಿಯನ್ಸ್ ಲೀಗ್ ಹಾಗೂ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಪರ ಗಳಿಸಿದ ರನ್ ಸಹ ಸೇರಿದೆ.

426 ಪಂದ್ಯಗಳಲ್ಲಿ 11,156 ರನ್ ಗಳಿಸಿರುವ ರೋಹಿತ್ ಶರ್ಮಾ, 329 ಪಂದ್ಯಗಳಲ್ಲಿ 9,645 ರನ್ ಗಳಿಸಿರುವ ಶಿಖ‌ರ್ ಧವನ್ ಟೀಮ್ ಇಂಡಿಯಾದ ಪರವಾಗಿ ನಂತರದ ಸ್ಥಾನದಲ್ಲಿದ್ದಾರೆ. ಇದೇ ವೇಳೆ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 1,000 ರನ್ ಗಳಿಸಿದ ದಾಖಲೆಯನ್ನು ಕೊಹ್ಲಿ ಬರೆದಿದ್ದಾರೆ.

T20 ಕ್ರಿಕೆಟ್‌ನಲ್ಲಿ 12 ಸಾವಿರಕ್ಕಿಂತಲೂ ಹೆಚ್ಚು ರನ್ ಪೂರೈಸಿದ ಇತರೆ ಬ್ಯಾಟರ್‌ಗಳು

  1. ಕ್ರಿಸ್ ಗೇಲ್ (ವೆಸ್ಟ್‌ ಇಂಡೀಸ್) – 463 ಪಂದ್ಯಗಳು – 14,562 ರನ್
  2. ಶೋಯೆಬ್ ಮಲಿಕ್ (ಪಾಕಿಸ್ತಾನ)-542 ಪಂದ್ಯಗಳು- 13,360 ರನ್
  3. ಕೀರಾನ್ ಪೊಲಾರ್ಡ್ (ವೆಸ್ಟ್‌ ಇಂಡೀಸ್)- 660 ಪಂದ್ಯಗಳು- 12,900 ರನ್
  4. ಅಲೆಕ್ಸ್ ಹೇಲ್ಸ್ (ಇಂಗ್ಲೆಂಡ್)- 449 ಪಂದ್ಯಗಳು- 12,319 ರನ್
  5. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)- 370 ಪಂದ್ಯಗಳು- 12,319 ರನ್
  6. ವಿರಾಟ್ ಕೊಹ್ಲಿ (ಭಾರತ)- 376 ಪಂದ್ಯಗಳು- 12,015* ರನ್
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...