ಅನಾರೋಗ್ಯ | ರಣಜಿಯಲ್ಲಿ ಆಡಲು ಆಗಲ್ಲ ಎಂದ ವಿರಾಟ್ ಕೊಹ್ಲಿ

Date:

ಜನವರಿ 23ರಿಂದ ರಣಜಿ ಟ್ರೋಫಿಯ ಪಂದ್ಯಾವಳಿ ಅರಂಭವಾಗಲಿದೆ. ಭಾರತೀಯ ಕ್ರಿಕೆಟ್‌ ತಂಡದ ಎಲ್ಲ ಆಟಗಾರರು ರಣಜಿ ಟೂರ್ನಿಯಲ್ಲಿ ಆಟುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿದೆ. ಆದಾಗ್ಯೂ, ಅನಾರೋಗ್ಯದ ಕಾರಣದಿಂದಾಗಿ ರಣಜಿಯಲ್ಲಿ ಆಡಲಾಗುವುದಿಲ್ಲ ಎಂದು ವಿರಾಟ್‌ ಕೊಹ್ಲಿ ಬಿಸಿಸಿಐಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ದೆಹಲಿ ತಂಡದಲ್ಲಿ ಕೊಹ್ಲಿ ಅವರ ಹೆಸರನ್ನು ಪಟ್ಟಿ ಮಾಡಲಾಗಿತ್ತು. ಆದರೆ, ಇದೀಗ, ಅವರು ಟೂರ್ನಿಯಲ್ಲಿ ಆಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಅಂತೆಯೇ, ಕರ್ನಾಟಕ ತಂಡದಲ್ಲಿ ಆಡಲಿದ್ದ ಕೆ.ಎಲ್‌ ರಾಹುಲ್‌ ಕೂಡ ರಣಜಿಯಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆ ಪಂದ್ಯದಲ್ಲಿ ಕೊಹ್ಲಿ ಕುತ್ತಿಗೆ ಸೆಳೆತ ಸಮಸ್ಯೆಯನ್ನು ಎದುರಿಸಿದ್ದರು. ಉತ್ತಮ ಪ್ರದರ್ಶನವನ್ನೂ ನೀಡಲು ಸಾಧ್ಯವಾಗಿರಲಿಲ್ಲ. ಫಿಸಿಯೋ ಚಿಕಿತ್ಸೆಯನ್ನು ಪಡೆದಿದ್ದರು. ಆದಾಗ್ಯೂ, ಸಂಪೂರ್ಣ ಗುಣಮುಖರಾಗಿಲ್ಲವೆಂದು ಹೇಳಿಕೊಂಡಿರುವ ಕೊಹ್ಲಿ ರಣಜಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಸಿಸಿಐನ ಕೇಂದ್ರೀಯ ಗುತ್ತಿಗೆ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ಪ್ರತಿಯೊಬ್ಬ ಅಟಗಾರನೂ ದೇಶೀಯ ಕ್ರಿಕೆಟ್‌ ‘ರಣಜಿ’ಯಲ್ಲಿ ಆಡಲೇಬೇಕೆಂದು ಬಿಸಿಸಿಐ ಕಡ್ಡಾಯಗೊಳಿಸಿದೆ. ತಪ್ಪಿದಲ್ಲಿ, ಅಂತಹವರ ವಿರುದ್ಧ ನಿರ್ಬಂಧಗಳನ್ನು ಹೇರಬಹುದು. ಅಲ್ಲದೆ, ಐಪಿಎಲ್‌ನಲ್ಲಿ ಆಡುವುದನ್ನೂ ನಿಷೇಧಿಸಬಹುದು ಎಂದು ಎಚ್ಚರಿಕೆಯನ್ನೂ ನೀಡಲಾಗಿದೆ.

ಒಂದು ವೇಳೆ, ರಣಜಿಯಲ್ಲಿ ಆಡಲು ಸಾಧ್ಯವಾಗಲಿದ್ದರೆ, ಆ ಆಟಗಾರರು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌ ಮತ್ತು ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಅವರಿಗೆ ತಮ್ಮ ಸಮಸ್ಯೆಗಳನ್ನು ತಿಳಿಸಿ, ಟೂರ್ನಿಯಿಂದ ಹೊರ ಉಳಿಯಲು ಅನುಮತಿ ಪಡೆಯಬೇಕು ಎಂದು ಬಿಸಿಸಿಐ ನಿರ್ದೇಶನ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...