ವಿರಾಟ್ ಕೊಹ್ಲಿ ದಾಖಲೆಗಳ ಶತಕ: ಆಸ್ಟ್ರೇಲಿಯಾಗೆ 534 ರನ್‌ ಗುರಿ ನೀಡಿದ ಭಾರತ

Date:

ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದ ಮೂರನೇ ದಿನವಾದ ಇಂದು ಭಾರತ ತನ್ನ ಎರಡನೇ ಇನಿಂಗ್ಸ್‌ನಲ್ಲಿ 134.3 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 487 ರನ್‌ಗಳ ಬೃಹತ್‌ ಮೊತ್ತ ಪೇರಿಸಿ ಡಿಕ್ಲೇರ್‌ ಮಾಡಿಕೊಂಡಿದ್ದು, ಆಸೀಸ್‌ ಗೆಲುವಿಗೆ 534 ರನ್‌ಗಳ ಬೃಹತ್‌ ಗುರಿ ನೀಡಿದೆ.

ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 161, ವಿರಾಟ್‌ ಕೊಹ್ಲಿ ಅಜೇಯ 100, ಕೆ ಎಲ್‌ ರಾಹುಲ್‌ 77 ರನ್‌ ಬಾರಿಸಿ ತಂಡ 480ರ ಗಡಿ ದಾಟಲು ನೆರವಾದರು.

ಪರ್ತ್​ನ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ 143 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ವರ್ಷಗಳ ಬಳಿಕ ಮೂಡಿಬರುತ್ತಿರುವ ಟೆಸ್ಟ್ ಶತಕ ಎಂಬುದು ವಿಶೇಷ. ಅಂದರೆ 2023ರ ಜುಲೈ 21ರಂದು ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಟೆಸ್ಟ್ ಶತಕ ಬಾರಿಸಿದ್ದರು. ಇದಾದ ಬಳಿಕ ಅವರು ಮೂರಂಕಿ ಮೊತ್ತ ದಾಖಲಿಸಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಆಸೀಸ್​ ಪಿಚ್​ನಲ್ಲೇ ಅಬ್ಬರಿಸುವ ಮೂಲಕ ಮೂರನೇ ಟೆಸ್ಟ್ ಕೆರಿಯರ್​ನ 30ನೇ ಶತಕ ಪೂರೈಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಮೂವತ್ತು ಶತಕ ಸಿಡಿಸಿದ ವಿಶ್ವದ 16ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.ಈ ಶತಕದೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲೂ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಹಾಗೆಯೇ ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆಚ್ಚು ಶತಕಗಳನ್ನು ಗಳಿಸಿದ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸರ್ ಡೊನಾಲ್ಡ್ ಬ್ರಾಡ್ಮನ್ ಅವರನ್ನು ಹಿಂದಿಕ್ಕಿದ್ದಾರೆ. 

ಈ ಸುದ್ದಿ ಓದಿದ್ದೀರಾ? ಆಸ್ಟ್ರೇಲಿಯಾದಲ್ಲಿ ಹೊಸ ಇತಿಹಾಸ ಬರೆದ ರಾಹುಲ್ – ಜೈಸ್ವಾಲ್

ಈ ಪಟ್ಟಿಯಲ್ಲಿ 9 ಶತಕಗಳೊಂದಿಗೆ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧ 9ನೇ ಟೆಸ್ಟ್ ಶತಕ ಸಿಡಿಸಿ ವಿರಾಟ್ ಕೊಹ್ಲಿ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ವಿರಾಟ್ ಕೊಹ್ಲಿಯ ಈ ಭರ್ಜರಿ ಶತಕದೊಂದಿಗೆ ಟೀಮ್ ಇಂಡಿಯಾ 6 ವಿಕೆಟ್ ಕಳೆದುಕೊಂಡು 487 ರನ್​ಗಳಿಸಿ ದ್ವಿತೀಯ ಇನಿಂಗ್ಸ್ ಡಿಕ್ಲೇರ್ ಘೋಷಿಸಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿ 46 ರನ್​ಗಳ ಹಿನ್ನಡೆ ಹೊಂದಿದ್ದ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಗೆಲ್ಲಲು 534 ರನ್​ ಕಲೆಹಾಕಬೇಕಿದೆ. ಭಾರತದ ಗುರಿಯನ್ನು ಬೆನ್ನಟ್ಟಿರುವ ಆಸೀಸ್‌ ತಂಡ ಆರಂಭಿಕ ಆಘಾತವಾಗಿದ್ದು, ದಿನಾದಾಂತ್ಯಕ್ಕೆ 4.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 12 ರನ್‌ ಗಳಿಸಿದೆ. ನಾಯಕ ಬುಮ್ರಾ 2 ಹಾಗೂ ಸಿರಜ್‌ 1 ವಿಕೆಟ್‌ ಕಬಳಿಸಿದ್ದಾರೆ.

ಆರಂಭಿಕರಾಗಿ ಆಟವಾಡಿದ್ದ ಕೆ ಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್​ಗೆ 201 ರನ್​ಗಳ ಜೊತೆಯಾಟವಾಡಿ ಹೊಸ ಇತಿಹಾಸ ನಿರ್ಮಿಸಿದ್ದರು.ಇದಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆರಂಭಿಕ ಜೋಡಿಯ ದಾಖಲೆ ಸುನಿಲ್ ಗವಾಸ್ಕರ್ ಹಾಗೂ ಕೆ ಶ್ರೀಕಾಂತ್ ಹೆಸರಿನಲ್ಲಿತ್ತು. 1986 ರಲ್ಲಿ ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಈ ಜೋಡಿಯು ಮೊದಲ ವಿಕೆಟ್​ಗೆ 191 ರನ್ ಕಲೆಹಾಕಿ ಇತಿಹಾಸ ನಿರ್ಮಿಸಿದ್ದರು.

38 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಟೀಮ್ ಇಂಡಿಯಾದ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...