ಐಪಿಎಲ್ | 2024ರ ಸೀಸನ್‌ನ ಮೊದಲ ಶತಕ ಬಾರಿಸಿದ ವಿರಾಟ್ ಕೊಹ್ಲಿ: ರಾಜಸ್ಥಾನಕ್ಕೆ ಗೆಲ್ಲಲು 184 ರನ್‌ಗಳ ಗುರಿ

Date:

ಜೈಪುರದ ಸವಾಯ್ ಮಾನ್‌ಸಿಂಗ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 2024ರ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ. ಈ ಸೀಸನ್‌(2024)ನ ಮೊದಲ ಶತಕ ಬಾರಿಸಿದ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ವಿರಾಟ್ ಕೊಹ್ಲಿಯವರ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಕೇವಲ ಮೂರು ವಿಕೆಟ್ ಕಳೆದುಕೊಂಡು 183 ರನ್‌ಗಳನ್ನು ದಾಖಲಿಸಿತು. ಆ ಮೂಲಕ 184 ರನ್‌ಗಳ ಸವಾಲಿನ ಗುರಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಯಕ ಫಾಫ್ ಡು ಪ್ಲೆಸಿ ಜೊತೆ ಆರಂಭಿಕರಾಗಿ ಆಗಮಿಸಿದ್ದ ವಿರಾಟ್ ಕೊಹ್ಲಿ, 72 ಎಸೆತಗಳಲ್ಲಿ 12 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ನ ನೆರವಿನಿಂದ 113 ರನ್ ಗಳಿಸಿ, ಔಟಾಗದೆ ಉಳಿದರು.

ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಗೆ ಇದು 8ನೇ ಶತಕವಾಗಿದ್ದು, ಈ ಶತಕ ಸಿಡಿಸುವ ಮೂಲಕ ಕೊಹ್ಲಿ, ಐಪಿಎಲ್‌ನ ಅಧಿಕ ಶತಕ ಸಿಡಿಸಿದವರ ಪಟ್ಟಿಯಲ್ಲಿ ತಮ್ಮ ಪಾರುಪತ್ಯ ಮುಂದುವರೆಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಕ್ರಿಸ್ ಗೇಲ್ 6 ಶತಕ ಬಾರಿಸಿದ್ದಾರೆ.

ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿ ಜೋಡಿಯು ಮೊದಲ ವಿಕೆಟ್‌ಗೆ 125 ರನ್‌ಗಳ ಬೃಹತ್ ಜೊತೆಯಾಟ ನಡೆಸುವ ಮೂಲಕ ಉತ್ತಮ ಅಡಿಪಾಯ ಹಾಕಿದರು. ಫಾಫ್ ಡು ಪ್ಲೆಸಿ, ಚಾಹಲ್ ಎಸೆತದಲ್ಲಿ ಬಟ್ಲರ್‌ಗೆ ಕ್ಯಾಚ್ ನೀಡಿ ಔಟಾಗುವುದಕ್ಕೂ ಮುನ್ನ 33 ಎಸೆತಗಳಲ್ಲಿ 44 ರನ್(2 ಬೌಂಡರಿ, 2 ಸಿಕ್ಸರ್) ಬಾರಿಸಿದರು.

ಬಳಿಕ ಕ್ರೀಸ್‌ಗೆ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಈ ಪಂದ್ಯದಲ್ಲೂ ರನ್ ಗಳಿಸಲು ವಿಫಲರಾದರು. ಮೂರು ಎಸೆತದಲ್ಲಿ 1 ರನ್ ಗಳಿಸಿದ್ದಾಗ, ಬರ್ಗರ್ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ವಿಫಲರಾಗಿ, ಕ್ಲೀನ್ ಬೌಲ್ಡ್ ಆದರು.

ಮೊದಲ ಬಾರಿಗೆ ಆರ್‌ಸಿಬಿಯಲ್ಲಿ ಅವಕಾಶ ಪಡೆದಿದ್ದ ಯುವ ಬ್ಯಾಟರ್ ಸೌರವ್ ಚೌಹಾನ್ ಸಿಕ್ಕ ಅವಕಾಶ ಬಳಸುವಲ್ಲಿ ವಿಫಲರಾದರು. 6 ಎಸೆತಗಳಲ್ಲಿ 1 ಸಿಕ್ಸರ್ ಇರುವ 9 ರನ್ ಗಳಿಸಿ, ಚಾಹಲ್‌ಗೆ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ವಿರಾಟ್ ಕೊಹ್ಲಿಯೊಂದಿಗೆ ಇನ್ನಿಂಗ್ಸ್‌ ಕಟ್ಟಿದ ಕ್ಯಾಮರೂನ್ ಗ್ರೀನ್, ಕೇವಲ 5 ರನ್ ಗಳಿಸಿ ಔಟಾಗದೆ ಉಳಿದರು.

ರಾಜಸ್ಥಾನ ಪರ ಬೌಲಿಂಗ್‌ನಲ್ಲಿ ಯಜುವೇಂದ್ರ ಚಾಹಲ್ 2 ವಿಕೆಟ್ ಪಡೆದರೆ, ಬರ್ಗರ್ ಒಂದು ವಿಕೆಟ್ ಗಳಿಸಿದರು.

ಐಪಿಎಲ್‌ನಲ್ಲಿ 7500 ರನ್‌ಗಳ ಮೈಲುಗಲ್ಲು ತಲುಪಿದ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ 7500 ರನ್‌ಗಳ ಮೈಲುಗಲ್ಲನ್ನು ತಲುಪಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾದರು. ರಾಜಸ್ಥಾನ್ ರಾಯಲ್ಸ್ 34 ರನ್‌ ಗಳಿಸುತ್ತಿದ್ದಂತೆಯೇ ಬೃಹತ್ ದಾಖಲೆ ನಿರ್ಮಿಸಿದರು.

ಇದೇ ವೇಳೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಎಂಎಸ್ ಧೋನಿ ಅವರನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದ್ದಾರೆ. ಕೊಹ್ಲಿ ಪ್ರಸ್ತುತ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಹೊಂದಿದ್ದರೆ, ಎಂಎಸ್ ಧೋನಿ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ.

ಆರ್‌ಸಿಬಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಇದುವರೆಗಿನ ಆಡಿದ 242 ಪಂದ್ಯಗಳಲ್ಲಿ 37ರ ಸರಾಸರಿಯಲ್ಲಿ 113 ರನ್‌ಗಳ ಅತ್ಯುತ್ತಮ ಸ್ಕೋರ್‌ನೊಂದಿಗೆ, ಭಾರತೀಯ ಬ್ಯಾಟಿಂಗ್ ಮಾಂತ್ರಿಕ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...