2012ರ ಬಳಿಕ ಮೊದಲ ಬಾರಿಗೆ ರಣಜಿ ಆಡಲಿರುವ ವಿರಾಟ್ ಕೊಹ್ಲಿ

Date:

ಜನವರಿ 23ರಿಂದ ಆರಂಭವಾಗುವ ರಣಜಿ ಟ್ರೋಫಿಯ ಟೂರ್ನಿಯಲ್ಲಿ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ದೆಹಲಿ ತಂಡದಲ್ಲಿ ಆಡಲಿದ್ದಾರೆ. ದೆಹಲಿಯ 22 ಆಟಗಾರರ ತಾತ್ಕಾಲಿಕ ಪಟ್ಟಿಯಲ್ಲಿ ಕೊಹ್ಲಿ ಹೆಸರಿದೆ ಎಂದು ತಿಳಿದುಬಂದಿದೆ. ಆದರೆ, ಇತ್ತೀಚೆಗೆ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ವೇಳೆ ಗುತ್ತಿಗೆ ನೋವಿನಿಂದ ಬಳಲುತ್ತಿದ್ದ ಕೊಹ್ಲಿ, ರಣಜಿಯಲ್ಲಿ ಭಾಗವಹಿಸುವರೇ ಎಂಬ ಸಂದೇಹಗಳೂ ಇವೆ.

ತಾವು ಕುತ್ತಿಗೆ ನೋವು ಅನುಭವಿಸುತ್ತಿರುವ ಬಗ್ಗೆ ಕೊಹ್ಲಿ ‘ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್’ನ ​​(ಡಿಡಿಸಿಎ) ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅವರಿಗೆ ಅಲ್ಲಿನ ಫಿಸಿಯೋ ಚಿಕಿತ್ಸೆ ನೀಡಲಾಗಿದೆ. ಹೀಗಾಗಿ, ಅವರು ರಣಜಿ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿಲ್ಲ ಎಂದೂ ಹೇಳಲಾಗಿದೆ.

ರಣಜಿಯ ಮೊದಲ ಪಂದ್ಯವು ದೆಹಲಿ ಮತ್ತು ಸೌರಾಷ್ಟ್ರ ನಡುವೆ ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಅವರು ಆ ಪಂದ್ಯಕ್ಕಾಗಿ ರಾಜ್‌ಕೋಟ್‌ಗೆ ತೆರಳುವರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಹ್ಲಿ ಕೊನೆಯ ಬಾರಿಗೆ 2012ರಲ್ಲಿ ಉತ್ತರ ಪ್ರದೇಶ ತಂಡದ ವಿರುದ್ಧ ದೆಹಲಿ ತಂಡದಲ್ಲಿ ರೆಡ್-ಬಾಲ್ ಪಂದ್ಯವನ್ನು ಆಡಿದ್ದರು. ಅದಾದ ಬಳಿಕ, ಮತ್ತೆ ರಣಜಿಯಲ್ಲಿ ಕೊಹ್ಲಿ ಆಡಿರಲಿಲ್ಲ. ಇದೀಗ, ಮತ್ತೆ ರಣಜಿ ಪಂದ್ಯಗಳಲ್ಲಿ ಆಡಲು ಸಜ್ಜಾಗಿದ್ದಾರೆ.

ಅಲ್ಲದೆ, ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಕೂಡ ಸುಮಾರು ಏಳು ವರ್ಷಗಳ ನಂತರ ರಣಜಿ ಟ್ರೋಫಿ ಪಂದ್ಯದಲ್ಲಿ ಆಡಲಿದ್ದಾರೆ. ಅವರು ಕೂಡ ದೆಹಲಿ ತಂಡದಲ್ಲಿ ಇರಲಿದ್ದಾರೆ.

ಭಾರತೀಯ ತಂಡದಲ್ಲಿ ಆಡಲು ಕೇಂದ್ರೀಯವಾಗಿ ಒಪ್ಪಂದ ಮಾಡಿಕೊಂಡಿರುವ ಕ್ರಿಕೆಟಿಗರು ದೇಶೀಯ ಕ್ರಿಕೆಟ್‌ ‘ರಣಜಿ’ ಆಡುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿದೆ. ರಣಜಿಯಲ್ಲಿ ಆಡದಿದ್ದರೆ, ಅಂತಹವರ ವಿರುದ್ಧ ನಿರ್ಬಂಧಗಳನ್ನು ಹೇರಬಹುದು. ಅಲ್ಲದೆ, ಐಪಿಎಲ್‌ನಲ್ಲಿ ಆಡುವುದನ್ನೂ ನಿಷೇಧಿಸಬಹುದು ಎಂದು ಎಚ್ಚರಿಕೆಯನ್ನೂ ನೀಡಲಾಗಿದೆ.

ಹೀಗಾಗಿ, ಭಾರತೀಯ ತಂಡದ ಆಟಗಾರರು ರಣಜಿಯಲ್ಲಿ ಆಡಲಿದ್ದಾರೆ. ಮುಂಬೈ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಪಂಜಾಬ್‌ ತಂಡದಲ್ಲಿ ಶುಭಮನ್ ಗಿಲ್ ಸೇರಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...