ನೆಟ್ಟಿಗರ ಮನಗೆದ್ದ ವಿರಾಟ್ ಕೊಹ್ಲಿಯ ಪಾಕಿಸ್ತಾನದ ಮಹಿಳಾ ಕ್ರಿಕೆಟ್‌ ಅಭಿಮಾನಿ: ವಿಡಿಯೋ ವೈರಲ್

Date:

  • ‘ಕೊಹ್ಲಿ ಶತಕ ಸಿಡಿಸಬಹುದು ಎಂದು ಊಹಿಸಿದ್ದೆ, ಆದರೆ ಹೃದಯ ಒಡೆಯಿತು” ಎಂದ ಪಾಕ್ ಯುವತಿ
  • “ಪಾಕಿಸ್ತಾನದ ಬಗ್ಗೆ ಭಾರತದವ ಈ ರೀತಿ ಹೇಳಿದ್ದಿದ್ದರೆ, ಈಗ ದೇಶದ್ರೋಹಿಯಾಗಿರುತ್ತಿದ್ದ” ಎಂದ ನೆಟ್ಟಿಗ

ನಿನ್ನೆ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ನೋಡಲು ಶ್ರೀಲಂಕಾದ ಪಲ್ಲೆಕೆಲೆ ಮೈದಾನಕ್ಕೆ ಬಂದಿದ್ದ ವಿರಾಟ್ ಕೊಹ್ಲಿಯ ಪಾಕಿಸ್ತಾನದ ಮಹಿಳಾ ಕ್ರಿಕೆಟ್‌ ಅಭಿಮಾನಿಯೋವರು, ಸದ್ಯ ನೆಟ್ಟಿಗರ ಮನಗೆದ್ದಿದ್ದು, ಸುದ್ದಿಯಾಗಿದ್ದಾರೆ.

ಪಾಕಿಸ್ತಾನದ ಮಹಿಳಾ ಕ್ರಿಕೆಟ್‌ ಅಭಿಮಾನಿಯೊಬ್ಬಳು, ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮೇಲಿನ ತಮ್ಮ ಅಭಿಮಾನವನ್ನು ಅನಾವರಣ ಮಾಡಿದ್ದು, ಆಕೆ ಆಡಿರುವ ಮಾತುಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿವೆ.

ನಿನ್ನೆ ಮಳೆಬಾಧಿತ ಪಂದ್ಯದಲ್ಲಿ ಪಾಕಿಸ್ತಾನ ಎದುರು ವಿರಾಟ್ ಕೊಹ್ಲಿ ಶತಕ ಸಿಡಿಸಬಹುದು ಎನ್ನುವ ಆಸೆಯಲ್ಲಿ ಲಂಕಾಗೆ ಬಂದಿಳಿದಿದ್ದ ಯುವತಿ, ಆದರೆ ವಿರಾಟ್ ಕೊಹ್ಲಿ ಬೇಗನೇ ವಿಕೆಟ್ ಒಪ್ಪಿಸಿದ್ದು ಆಕೆಯ ಕನಸು ನುಚ್ಚುನೂರಾಗುವಂತೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂದ್ಯ ರದ್ದಾದ ಬಳಿಕ ಮಾಧ್ಯಮವೊಂದಕ್ಕೆ ಮಾತನಾಡುತ್ತಿದ್ದ ಆಕೆ, “ನಾನು ವಿರಾಟ್ ಕೊಹ್ಲಿ ಆಟವನ್ನು ನೋಡಲು ಇಲ್ಲಿಗೆ ಬಂದಿದ್ದೇನೆ. ಯಾಕೆಂದರೆ ನಾನು ಅವರ ದೊಡ್ಡ ಅಭಿಮಾನಿ. ನಾನು ಅವರು ಶತಕ ಸಿಡಿಸಬಹುದು ಎಂದು ಬಯಸಿದ್ದೇ, ಆದರೆ ನನ್ನ ಹೃದಯ ಒಡೆದು ಹೋಯಿತು” ಎಂದು ಹೇಳಿದ್ದಾಳೆ.

ಇನ್ನು ಇದೇ ವೇಳೆ, “ನಾನು ಪಾಕಿಸ್ತಾನವನ್ನು ಬೆಂಬಲಿಸುತ್ತೇನೆ ಹಾಗೂ ಭಾರತವನ್ನೂ ಬೆಂಬಲಿಸುತ್ತೇನೆ” ಎಂದು ಹೇಳಿದಾಗ ಆಕೆಯ ಬಲಬದಿಯಲ್ಲಿದ್ದ ವ್ಯಕ್ತಿ ಮಧ್ಯಪ್ರವೇಶಿಸಿದಾಗ, “ಚಾಚಾ, ನೆರೆಹೊರೆಯವರನ್ನು ಪ್ರೀತಿಸುವುದರಲ್ಲಿ ತಪ್ಪೇನು ಇಲ್ಲ ಅಲ್ವಾ?” ಎಂದಿದ್ದಾರೆ.

ಬಳಿಕ, “ಒಂದು ವೇಳೆ ವಿರಾಟ್ ಕೊಹ್ಲಿ ಹಾಗೂ ಬಾಬರ್ ಆಝಂ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಿ ಎಂದರೆ ಯಾರನ್ನು ಆಯ್ಕೆ ಮಾಡುತ್ತೀರಿ ಎನ್ನುವ ಪ್ರಶ್ನೆಗೆ ಪಾಕಿಸ್ತಾನದ ಮಹಿಳಾ ಅಭಿಮಾನಿ “ವಿರಾಟ್ ಕೊಹ್ಲಿ” ಎಂದು ಹೇಳಿಕೆ ನೀಡಿದ್ದು, ಸಾಕಷ್ಟು ವೈರಲ್ ಆಗಿದೆ.

ಈ ಯುವತಿ, ಒಂದು ಕೆನ್ನೆಯ ಮೇಲೆ ಪಾಕಿಸ್ತಾನ ಹಾಗೂ ಇನ್ನೊಂದು ಕೆನ್ನೆಯ ಬದಿಯಲ್ಲಿ ಭಾರತದ ಧ್ವಜವನ್ನು ಚಿತ್ರಿಸಿಕೊಂಡು ಮೈದಾನಕ್ಕೆ ಕ್ರಿಕೆಟ್ ಪಂದ್ಯ ವೀಕ್ಷಿಸಲು ಬಂದಿದ್ದನ್ನೂ ಇದೇ ವೇಳೆ ತೋರಿಸುವ ಮೂಲಕ ಪಂದ್ಯಾಕೂಟದ ಹೆಸರಿನಲ್ಲಿ ದ್ವೇಷ ಹರಡುವವರಿಗೆ ಮಾದರಿಯಾಗಿದ್ದಾಳೆ.

ನಿನ್ನೆಯ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಏಳು ಎಸೆತಗಳನ್ನು ಎದುರಿಸಿ ಕೇವಲ 4 ರನ್ ಗಳಿಸಿದ್ದ ವೇಳೆ, ಶಾಹೀನ್ ಶಾ ಅಫ್ರಿದಿಗೆ ವಿಕೆಟ್ ಒಪ್ಪಿಸಿದ್ದರು.

ಈಕೆಯ ವಿಡಿಯೋ ವೈರಲಾದ ಬಳಿಕ, ಹಲವು ಮಂದಿ ನೆಟ್ಟಿಗರು ಆಕೆಯ ಮಾತುಗಳಿಗೆ ಫಿದಾ ಆಗಿದ್ದಾರೆ.

“ಒಂದು ವೇಳೆ ಭಾರತದ ಅಭಿಮಾನಿ ಪಾಕಿಸ್ತಾನದ ಬಗ್ಗೆ ಈ ರೀತಿಯಾಗಿ ಮುಕ್ತವಾಗಿ ಹೇಳಿದ್ದಿದ್ದರೆ ಆತ ಈಗ ದೇಶದ್ರೋಹಿಯಾಗಿರುತ್ತಿದ್ದ” ಎಂದ ನೆಟ್ಟಿಗರೋರ್ವರು ವಿಡಿಯೋ ಹಂಚಿಕೊಂಡು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...