ಗಂಭೀರ್‌ ಜೊತೆಗೆ ಭಾರತ ತಂಡದ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

Date:

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಾಗಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.

ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಗಾಗಿ ತೆರಳಲಿದ್ದು, ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಅಲಭ್ಯರಾಗಲಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಗಾಗಿ ವಿವಿಎಸ್​ ಲಕ್ಷ್ಮಣ್ ಅವರನ್ನು ಕೋಚ್ ಆಗಿ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ.

ಅದರಂತೆ ನವೆಂಬರ್ 8 ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಮುಖ್ಯ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ವಿವಿಎಸ್​ ಲಕ್ಷ್ಮಣ್ ಅವರೊಂದಿಗೆ ಸಾಯಿರಾಜ್ ಬಹುತುಲೆ, ಹೃಷಿಕೇಶ್ ಕಾನಿಟ್ಕರ್ ಮತ್ತು ಸುಭದೀಪ್ ಘೋಷ್ ಅವರು ಕೋಚಿಂಗ್ ಸಿಬ್ಬಂದಿಯ ಭಾಗವಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚೆಂಡು ವಿರೂಪ ಪ್ರಕರಣ: ಡೇವಿಡ್ ವಾರ್ನರ್ ಮೇಲಿನ ನಿಷೇಧ ರದ್ದು

ಈ ಹಿಂದೆ ಕೂಡ ವಿವಿಎಸ್​ ಲಕ್ಷ್ಮಣ್ ಭಾರತ ತಂಡದ ತಾತ್ಕಾಲಿಕ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಂಡಿದ್ದರು. ರಾಹುಲ್ ದ್ರಾವಿಡ್ ಅವರ ಅನುಪಸ್ಥಿತಿಯ ವೇಳೆ ಲಕ್ಷ್ಮಣ್ ಅವರನ್ನು ಹಲವು ಸರಣಿಗಳಿಗೆ ಕೋಚ್ ಆಗಿ ನೇಮಿಸಲಾಗಿತ್ತು. ಇದೀಗ ಎನ್​ಸಿಎ ಮುಖ್ಯಸ್ಥನ ಹುದ್ದೆಯಲ್ಲಿ ಮುಂದುವರೆದಿರುವ ಲಕ್ಷ್ಮಣ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ವೇಳೆ ತಂಡದ ಕೋಚಿಂಗ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 4 ಪಂದ್ಯಗಳ ಟಿ20 ಸರಣಿಯು ನವೆಂಬರ್ 8 ರಿಂದ ಶುರುವಾಗಲಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರ ಭಾರತ ತಂಡವನ್ನು ಈಗಾಗಲೇ ಘೋಷಿಸಲಾಗಿದೆ. ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.

ಭಾರತ ಟಿ20 ತಂಡ:

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್, ರಮಣ್​ದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್.

ಸರಣಿಯ ವೇಳಾಪಟ್ಟಿ
1ನೇ ಟಿ20, ನವೆಂಬರ್ 8, 2024, ರಾತ್ರಿ 8:30, ಡರ್ಬನ್
2ನೇ ಟಿ20, ನವೆಂಬರ್ 10, 2024, ರಾತ್ರಿ 8:30, ರಾತ್ರಿ ಗ್ಕೆಬರ್ಹಾ
3ನೇ ಟಿ20, ನವೆಂಬರ್ 13, 2024, ರಾತ್ರಿ 8:30, ಸೆಂಚುರಿಯನ್
4ನೇ ಟಿ20, ನವೆಂಬರ್ 15, 2024, ರಾತ್ರಿ 8:30, ಜೋಹಾನ್ಸ್‌ಬರ್ಗ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...