ಎಲ್ಲ 12 ದೇಶಗಳ ವಿರುದ್ಧವೂ ಶತಕ ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ ವಿಂಡೀಸ್ ಬ್ಯಾಟರ್

Date:

ನ್ಯೂಜಿಲೆಂಡ್ ಕ್ರಿಕೆಟ್ ತಂಡದ ವಿರುದ್ಧ ಬುಧವಾರ ಮಳೆ ಬಾಧಿತ ಎರಡನೇ ಏಕದಿನ ಪಂದ್ಯದಲ್ಲಿ ಔಟಾಗದೆ 109 ರನ್ ಗಳಿಸಿದ ವೆಸ್ಟ್ಇಂಡೀಸ್ ತಂಡದ ನಾಯಕ ಶಾಯ್‌ ಹೋಪ್‌ ‘ಒನ್ ಮ್ಯಾನ್’ಶೋ ನೀಡಿದರು. ಹೋಪ್ ಅವರ ಪ್ರಯತ್ನ ವಿಂಡೀಸ್ ಗೆ ಗೆಲುವು ತಂದುಕೊಡಲಿಲ್ಲ. ಆತಿಥೇಯರು 248 ರನ್ ಗುರಿಯನ್ನು ಇನ್ನೂ ಮೂರು ಎಸೆತಗಳು ಬಾಕಿ ಇರುವಾಗಲೇ ಐದು ವಿಕೆಟ್‌ ಗಳ ಅಂತರದಿಂದ ಗೆದ್ದುಕೊಂಡಿದ್ದಾರೆ.

ಮಳೆಯಿಂದಾಗಿ 34 ಓವರ್ಗಳಿಗೆ ಕಡಿತಗೊಂಡಿರುವ ಪಂದ್ಯದಲ್ಲಿ ಹೋಪ್ ಅವರು 69 ಎಸೆತಗಳಲ್ಲಿ 13 ಬೌಂಡರಿ ಹಾಗೂ 4 ಸಿಕ್ಸರ್ಗಳ ಸಹಿತ ಔಟಾಗದೆ 109 ರನ್ ಗಳಿಸಿದರು. ಹೋಪ್ ಶತಕದ ಸಹಾಯದಿಂದ ವೆಸ್ಟ್ಇಂಡೀಸ್ 9 ವಿಕೆಟ್ ಗಳ ನಷ್ಟಕ್ಕೆ 247 ರನ್ ಗಳಿಸಿತು.

ತನ್ನ ಏಕಾಂಗಿ ಹೋರಾಟದ ವೇಳೆ ಹೋಪ್ ಅವರು ಹಲವು ದಾಖಲೆಗಳನ್ನು ಮುರಿದರು. ನ್ಯೂಜಿಲೆಂಡ್ ವಿರುದ್ಧ ತನ್ನ ಮೊದಲ ಶತಕವನ್ನು ಗಳಿಸಿರುವ ಹೋಪ್ ವೆಸ್ಟ್ಇಂಡೀಸ್‌ನ ಸಾರ್ವಕಾಲಿಕ ಶ್ರೇಷ್ಠ ಏಕದಿನ ಶತಕವೀರರ ಪಟ್ಟಿಯಲ್ಲಿ ಬ್ರಿಯಾನ್ ಲಾರಾ(19 ಶತಕ)ಅವರೊಂದಿಗೆ ಎರಡನೇ ಸ್ಥಾನ ಹಂಚಿಕೊಂಡರು. ಒಟ್ಟು 25 ಶತಕಗಳನ್ನು ಗಳಿಸಿರುವ ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕ್ರಿಕೆಟ್ | ದಕ್ಷಿಣ ಆಫ್ರಿಕಾದ ಭಾರತ ಪ್ರವಾಸ; ರೋಚಕತೆ, ದಾಖಲೆಗಳು ಮತ್ತು ಸವಾಲುಗಳು

ಹೋಪ್ ಅವರು ಎಲ್ಲ 12 ಟೆಸ್ಟ್ ಆಡುವ ದೇಶಗಳ ವಿರುದ್ಧ ಎಲ್ಲ ಮಾದರಿಯ ಕ್ರಿಕೆಟ್ನಲ್ಲಿ ಶತಕ ದಾಖಲಿಸಿರುವ ವಿಶ್ವದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿ ಅಪರೂಪದ ಸಾಧನೆ ಮಾಡಿದರು.

ಭಾರತದ ಮಾಜಿ ಬ್ಯಾಟರ್ ರಾಹುಲ್ ದ್ರಾವಿಡ್ ಆ ಕಾಲದಲ್ಲಿ ಎಲ್ಲ 10 ಟೆಸ್ಟ್ ಆಡುವ ದೇಶಗಳ ವಿರುದ್ಧ ಶತಕ ಗಳಿಸಿದ ಮೊದಲ ಆಟಗಾರನಾಗಿದ್ದರು. ದ್ರಾವಿಡ್ ನಿವೃತ್ತಿಯಾದ ನಂತರ 2017ರಲ್ಲಿ ಅಫ್ಘಾನಿಸ್ತಾನ ಹಾಗೂ ಐರ್ಲ್ಯಾಂಡ್ ತಂಡಗಳು ಟೆಸ್ಟ್ ಸ್ಥಾನಮಾನ ಪಡೆದಿದ್ದವು.

ಸಚಿನ್ ತೆಂಡುಲ್ಕರ್ ಕೂಡ ನಿವೃತ್ತಿಯಾಗುವ ವೇಳೆಗೆ ಆಡುತ್ತಿದ್ದ ಎಲ್ಲ 9 ತಂಡಗಳ ವಿರುದ್ಧ ಟೆಸ್ಟ್ ಶತಕ ಗಳಿಸಿದ್ದರು. ವಿರಾಟ್ ಕೊಹ್ಲಿ ಅವರು ಐರ್ಲ್ಯಾಂಡ್ ತಂಡದ ವಿರುದ್ಧ ಶತಕ ಗಳಿಸಿಲ್ಲ.

ಹೋಪ್ ಅವರು ಏಕದಿನ ಕ್ರಿಕೆಟ್‌ನಲ್ಲಿ 6,000 ರನ್ ಪೂರೈಸಿದ್ದು ಈ ಸಾಧನೆ ಮಾಡಿದ ವೆಸ್ಟ್ಇಂಡೀಸ್‌ನ ಏಳನೇ ಆಟಗಾರ ಎನಿಸಿಕೊಂಡಿದ್ದರು. ವಿವಿ ರಿಚರ್ಡ್ಸ್ ನಂತರ ಅತ್ಯಂತ ವೇಗವಾಗಿ (147 ಪಂದ್ಯಗಳು)ಈ ಸಾಧನೆ ಮಾಡಿದ ಕೆರಿಬಿಯನ್ ಕ್ರಿಕೆಟಿಗನೆಂಬ ಕೀರ್ತಿಗೆ ಭಾಜನರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...