ಭಾರತದ ಮಾರಕ ಬೌಲಿಂಗ್‌ಗೆ ತತ್ತರಿಸಿದ ವೆಸ್ಟ್ ಇಂಡೀಸ್‌, 162 ರನ್‌ಗೆ ಆಲೌಟ್

Date:

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ವೆಸ್ಟ್ ಇಂಡೀಸ್ ಕೇವಲ 162 ರನ್ ಗೆ ಆಲೌಟ್ ಆಗಿದೆ.‌

ಗುಜರಾತ್ ನ ಅಹ್ಮದಾಬಾದ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಪ್ರಥಮ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲೇ ಭಾರತೀಯ ಬೌಲರ್‌ಗಳು ಮೇಲುಗೈ ಸಾಧಿಸಿದ್ದಾರೆ. ಭಾರತ ಪರ ಮಾರಕ ಬೌಲಿಂಗ್ ದಾಳಿ ನಡೆಸಿದ ಮೊಹಮ್ಮದ್ ಸಿರಾಜ್ 4 ವಿಕೆಟ್ ಪಡೆದು ಮಿಂಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ಜಸ್ಟ್ರೀತ್ ಬುಮ್ರಾ 3, ಕುಲದೀಪ್ ಯಾದವ್ 2 ಹಾಗೂ ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದು ಗಮನ ಸೆಳೆದರು.

ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ವೆಸ್ಟ್ ಇಂಡೀಸ್ ದಾಂಡಿಗರು ಒಬ್ಬೊಬ್ಬರಾಗಿ ಫೆವಿಲಿಯನ್‌ ಹಾದಿ ಹಿಡಿದರು. ವೆಸ್ಟ್ ಇಂಡೀಸ್ ಅಂತಿಮವಾಗಿ 44.1 ಓವರ್‌ಗಳಲ್ಲಿ 162 ರನ್ ಗೆ ಆಲೌಟ್ ಆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೊದಲು ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ರೋಸ್ಟನ್ ಚೇಸ್ ಮೊದಲು ಬ್ಯಾಟಿಂಗ್‌ ಆಯ್ದುಕೊಂಡರು. ವಿಂಡೀಸ್ ಆರಂಭಿಕರು ನಿರಾಸೆ ಮೂಡಿಸಿದರು. ಜಾನ್ ಕ್ಯಾಂಪ್‌ಬೆಲ್ ಎಂಟು ಹಾಗೂ ತೇಜ್‌ನಾರಾಯಣ್ ಚಂದ್ರಪಾಲ್ ಶೂನ್ಯಕ್ಕೆ ಔಟ್ ಆದರು. ಅಲಿಕ್ ಅಥಾಂಜೆ 12 ಹಾಗೂ ಶಾಯಿ ಹೋಪ್ 26 ರನ್ ಗಳಿಸಿ ಪೆವಿಲಿನ್‌ಗೆ ಮರಳಿದರು.
ನಂತರ, ನಾಯಕ ರೋಸ್ಟನ್ ಚೇಸ್ 24 ಹಾಗೂ ಜಸ್ಟಿನ್ ಗ್ರೀಮ್ಸ್ 32 ರನ್ ಗಳಿಸಿ ಕೊಂಚ ಹೋರಾಟ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...