ಮೊದಲ ಟೆಸ್ಟ್ | ಸ್ಪಿನ್‌ ಮೋಡಿಗೆ ನಲುಗಿದ ವೆಸ್ಟ್‌ಇಂಡೀಸ್; ಟೀಮ್ ಇಂಡಿಯಾ ಮೇಲುಗೈ

Date:

  • ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ
  • ಮೊದಲ ದಿನವೇ 5 ವಿಕೆಟ್ ಕಿತ್ತು ಆರ್. ಅಶ್ವಿನ್ ದಾಖಲೆ

ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ, ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲ ದಿನವೇ ಹಿಡಿತ ಸಾಧಿಸಿದೆ.

ಡೊಮಿನಿಕಾದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಅಶ್ವಿನ್‌ ಸ್ಪಿನ್‌ ಸಹಿತ ಟೀಮ್ ಇಂಡಿಯಾದ ಸ್ಪಿನ್ ಮೋಡಿಗೆ ನಲುಗಿದ ವೆಸ್ಟ್‌ಇಂಡೀಸ್, 64.3 ಓವರ್‌ಗಳಲ್ಲಿ 150 ರನ್‌ಗಳಿಗೆ ಆಲೌಟ್ ಆಗಿದೆ.

ಟೀಂ ಇಂಡಿಯಾದ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಐದು ವಿಕೆಟ್ ಕಿತ್ತು ದಾಖಲೆ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿ ಪುನರ್ ಸ್ಥಾಪಿಸಲಾಗುವುದು: ಸಚಿವ ಶಿವಾನಂದ ಪಾಟೀಲ

ಭಾರತದ ಹಿಡಿತದಲ್ಲಿರುವ ಈ ಪಂದ್ಯದಲ್ಲಿ ಅಶ್ವಿನ್ 24.3 ಓವರ್‍‌ ಎಸೆದು, 60 ರನ್‌ಗೆ ಐದು ವಿಕೆಟ್ ಐದು ವಿಕೆಟ್ ಗಳಿಸಿದರೆ, ಸ್ಪಿನ್ನರ್ ರವೀಂದ್ರ ಜಡೇಜಾ ಮೂರು ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಕೂಡ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಭಾರತ ಬೌಲಿಂಗ್ ಎದುರು ರನ್‌ಗಳಿಸಲು ಪರದಾಡಿದ ಆತಿಥೇಯ ತಂಡ, ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್‌ಗಳಿಗೆ ಅಲೌಟ್ ಆಗಿದೆ.

ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿರುವ ಭಾರತ ವಿಕೆಟ್ ನಷ್ಟವಿಲ್ಲದೆ 80 ರನ್ ಗಳಿಸಿದೆ. ಟೆಸ್ಟ್‌ನಲ್ಲಿ ಪದಾರ್ಪಣೆ ಪಂದ್ಯ ಆಡುತ್ತಿರುವ ಯಶಸ್ವಿ ಜೈಸ್ವಾಲ್ ಔಟಾಗದೆ 40 ಮತ್ತು ನಾಯಕ ರೋಹಿತ್ ಶರ್ಮಾ 30 ರನ್‌ ಗಳಿಸಿದ್ದು, ಎರಡನೇ ದಿನದಾಟಕ್ಕೆ ಕ್ರೀಸ್‌ ಕಾಯ್ದುಕೊಂಡಿದ್ದಾರೆ.

ವೆಸ್ಟ್‌ಇಂಡೀಸ್ ಪರವಾಗಿ ಪದಾರ್ಪಣೆ ಪಂದ್ಯ ಆಡಿದ ಎಡಗೈ ಬ್ಯಾಟರ್ ಅಲಿಕ್ ಅಥನಾಝ್ 47 ರನ್‌ ಗಳಿಸಿದ್ದು, ಹೊರತುಪಡಿಸಿದರೆ ಯಾವುದೇ ಬ್ಯಾಟ್ಸ್ ಮನ್ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಅಥನಾಝ್ ಅಶ್ವಿನ್‌ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಪ್ರಯತ್ನಿಸಿ, ಶಾರ್ದೂಲ್ ಠಾಕೂರ್‍‌ಗೆ ಕ್ಯಾಚಿತ್ತು ನಿರ್ಗಮಿಸಿದರು. ಆ ಮೂಲಕ ಪದಾರ್ಪಣೆ ಪಂದ್ಯದಲ್ಲಿ ಅರ್ಧಶತಕ ದಾಖಲಿಸುವ ಅವಕಾಶದಿಂದ ವಂಚಿತರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...