ವಿರಾಟ್ ಕೊಹ್ಲಿ ಭಾರತ ತಂಡ ಮತ್ತು ಆರ್‌ಸಿಬಿ ನಾಯಕತ್ವ ತೊರೆದದ್ದೇಕೆ? ಇಲ್ಲಿದೆ ನೋಡಿ…

Date:

‘7-8 ವರ್ಷಗಳ ಕಾಲ ಭಾರತ ತಂಡವನ್ನು ಮುನ್ನಡೆಸಿದ್ದೆ. ಒಂಬತ್ತು ವರ್ಷಗಳ ಕಾಲ ಆರ್‌ಸಿಬಿ ತಂಡದ ನಾಯಕನಾಗಿದ್ದೆ. ಆದರೆ ಎಲ್ಲವನ್ನು ನಿಭಾಯಿಸುವುದು ಕಷ್ಟಕರವಾಯಿತು’ ಎಂದು ವಿರಾಟ್ ಕೊಹ್ಲಿ ಮನಬಿಚ್ಚಿ ಮಾತನಾಡಿದ್ದಾರೆ.

2021ರ ವಿಶ್ವಕಪ್ ಬಳಿಕ ಟಿ20 ನಾಯಕತ್ವವನ್ನು ವಿರಾಟ್ ಕೊಹ್ಲಿ ತ್ಯಜಿಸಿದ್ದರು. ಬಳಿಕ ಆರ್‌ಸಿಬಿ ಕ್ಯಾಪ್ಟನ್ ಗಿರಿಯನ್ನು ತೊರೆದಿದ್ದರು. ಅದಾದ ಒಂದು ವರ್ಷದ ಬಳಿಕ ಟೆಸ್ಟ್ ನಾಯಕತ್ವಕ್ಕೂ ರಾಜೀನಾಮೆ ನೀಡಿದ್ದರು. ವೃತ್ತಿಜೀವನದ ಒಂದು ಹಂತದಲ್ಲಿ ತುಂಬಾ ಹೊರೆ ಅನಿಸಿದ್ದರಿಂದ ಒತ್ತಡವನ್ನು ನಿಭಾಯಿಸುವುದು ತಮ್ಮ ಪಾಲಿಗೆ ತುಂಬಾ ಕಷ್ಟಕರವೆನಿಸಿತ್ತು ಎಂದು ಆರ್‌ಸಿಬಿಯ ‘ಬೋಲ್ಡ್ ಡೈರೀಸ್’ ಪಾಡ್‌ಕಾಸ್ಟ್‌ನಲ್ಲಿ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

‘ನಾನು ಆಡಿದ ಪ್ರತಿ ಪಂದ್ಯದಲ್ಲೂ ನಾಯಕ ಹಾಗೂ ಬ್ಯಾಟರ್ ದೃಷ್ಟಿಕೋನದಿಂದಲೂ ನನ್ನ ಮೇಲೆ ಅತೀವ ನಿರೀಕ್ಷೆಗಳಿದ್ದವು. ನನ್ನ ಕಡೆ ಹೆಚ್ಚಿನ ಗಮನ ಕೇಂದ್ರಿತವಾಗಿತ್ತು. ನಾಯಕತ್ವ ಇಲ್ಲದಿದ್ದರೆ ಅದು ಬ್ಯಾಟಿಂಗ್ ಮೇಲೆ ಆಗಿರುತ್ತಿತ್ತು. 24 ಗಂಟೆಯೂ ನನ್ನತ್ತ ಗಮನ ಸೆಳೆದಿತ್ತು. ಇದರಿಂದಾಗಿ ತುಂಬಾ ಕಠಿಣವೆನಿಸಿತ್ತು’ ಎಂದು ಅವರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘2022ರಲ್ಲಿ ನಾನು ಕ್ರಿಕೆಟ್‌ನಿಂದ ಒಂದು ತಿಂಗಳ ಬಿಡುವು ತೆಗೆದುಕೊಂಡೆ. ಈ ಹಂತದಲ್ಲಿ ಬ್ಯಾಟ್ ಅನ್ನು ಮುಟ್ಟಿಯೂ ನೋಡಿಲ್ಲ. ಆ ಸಂದರ್ಭದಲ್ಲಿ ಖುಷಿಯಾಗಿರಲು ಸಾಧ್ಯವಾಗುತ್ತಿರಲಿಲ್ಲ. ಅದಕ್ಕಾಗಿಯೇ ನಾಯಕತ್ವ ತೊರೆಯಲು ನಿರ್ಧರಿಸಿದೆ. ಸಂತೋಷವಾಗಿರಲು ಬಯಸಿದ್ದೆ’ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?: ಐಪಿಎಲ್ 2025 | ಓಡಿದ್ದ 2 ರನ್‌ ಹಾಗೂ ಆ ಒಂದು ನಿರ್ಧಾರ ಚೆನ್ನೈ ಸೋಲಿಗೆ ಕಾರಣವಾಯಿತೆ?

‘ನನ್ನ ಆಟವನ್ನು ಯಾರೂ ನಿರ್ಣಯಿಸಬಾರದು. ಮೈದಾನಕ್ಕೆ ಬಂದು ನನ್ನ ಸಹಜ ಆಟವನ್ನು ಆಡಿ ಹೋಗಲು ಬಯಸಿದ್ದೆ’ ಎಂದು ಹೇಳಿದ್ದಾರೆ.

ತಮ್ಮ ವೃತ್ತಿ ಜೀವನದ ಆರಂಭಿಕ ಕಾಲದಲ್ಲಿ ಅಂದಿನ ಕೋಚ್ ಗ್ಯಾರಿ ಕರ್ಸ್ಟನ್ ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿ ನೀಡಿರುವ ಬೆಂಬಲ ಹಾಗೂ ತಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ವಿರಾಟ್ ಕೊಹ್ಲಿ ಸ್ಮರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...