ವುಮೆನ್ಸ್ ಪ್ರೀಮಿಯರ್‌ ಲೀಗ್‌‌ | ಆರ್‌ಸಿಬಿ ಆಟಗಾರ್ತಿ ಎಲ್ಲಿಸ್ ಪೆರ್ರಿ ಹೊಸ ಇತಿಹಾಸ ಸೃಷ್ಟಿ

Date:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿ ಎಲ್ಲಿಸ್ ಪೆರ್ರಿ ವುಮೆನ್ಸ್ ಪ್ರೀಮಿಯರ್‌ ಲೀಗ್‌‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪೆರ್ರಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ.

43 ಎಸೆತಗಳನ್ನು ಎದುರಿಸಿದ ಎಲ್ಲಿಸ್ ಪೆರ್ರಿ ಎರಡು ಸಿಕ್ಸ್ ಮತ್ತು 11 ಫೋರ್ ಗಳೊಂದಿಗೆ 81 ರನ್ ಚಚ್ಚಿದರು. ಈ ಮೂಲಕ ಪೆರ್ರಿ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 700 ಗಡಿ ದಾಟುವ ಮೂಲಕ ಹೆಚ್ಚು ರನ್‌ ಮಾಡಿರುವ ಸಾಧನೆಗೆ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲದೆ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 700+ ರನ್ಸ್ ಹಾಗೂ 10+ ವಿಕೆಟ್ ಪಡೆದ ಏಕೈಕ ಆಟಗಾರ್ತಿಯೂ ಎನಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಈವರೆಗೆ 20 ಪಂದ್ಯಗಳನ್ನಾಡಿರುವ ಎಲ್ಲಿಸ್ ಪೆರ್ರಿ 6 ಅರ್ಧಶತಕಗಳೊಂದಿಗೆ ಒಟ್ಟು 745 ರನ್ ಬಾರಿಸಿದ್ದಾರೆ. ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ದಾಖಲೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಹೆಸರಿನಲ್ಲಿದೆ. ಡೆಲ್ಲಿ ಪರ 21 ಇನಿಂಗ್ಸ್ ಆಡಿರುವ ಲ್ಯಾನಿಂಗ್ 7 ಅರ್ಧಶತಕಗಳೊಂದಿಗೆ ಈವರೆಗೆ 777 ರನ್ ಕಲೆಹಾಕಿದ್ದಾರೆ. ಎಲ್ಲಿಸ್ ಪೆರ್ರಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...