ಮಹಿಳಾ ವಿಶ್ವಕಪ್ | ಭಾರತ vs ನ್ಯೂಜಿಲೆಂಡ್‌: ಮಂಧಾನ, ರಾವಲ್ ಭರ್ಜರಿ ಶತಕ; 340 ರನ್‌ಗಳಿಸಿದ ಟೀಮ್ ಇಂಡಿಯಾ

Date:

ಮಹಿಳಾ ವಿಶ್ವಕಪ್‌ (ಓಡಿಐ) ಟೂರ್ನಿಯ ಭಾರತ ಮತ್ತು ನ್ಯೂಜಿಲೆಂಟ್‌ ತಂಡಗಳ ನಡುವಿನ ಪಂದ್ಯವು ಮುಂಬೈನಲ್ಲಿ ನಡೆಯುತ್ತಿದೆ. ಟಾಸ್‌ ಸೋತು ಮೊದಲು ಬ್ಯಾಂಟಿಂಗ್‌ ಮಾಡಿದ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದೆ. ಉಪನಾಯಕಿ ಸ್ಮೃತಿ ಮಂಧಾನ ಮತ್ತು ಅವರ ಆರಂಭಿಕ ಜೊತೆಗಾರ್ತಿ ಪ್ರತಿಕಾ ರಾವಲ್ ಅವರು ಅದ್ಭುತ ಶತಕಗಳ ನೆರವಿನೊಂದಿಗೆ 3 ವಿಕೆಟ್‌ಗಳ ನಷ್ಟಕ್ಕೆ 340 ರನ್‌ ಗಳಿಸಿದೆ.

ಪಂದ್ಯವು ನವಿ ಮುಂಬೈನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದರಿಂದ, ಪ್ರತಿ ತಂಡದ ಬ್ಯಾಟಿಂಗ್‌ಅನ್ನು 49 ಓವರ್‌ಗಳಿಗೆ ಇಳಿಸಲಾಗಿದೆ.

ಆರಂಭಿಕ ಆಟಗಾರರಾಗಿ ಮೈದಾನಕ್ಕೆ ಇಳಿದ ಮಂಧಾನ ಮತ್ತು ರಾವಲ್ ಇಬ್ಬರು ಅತ್ಯುತ್ತಮ ಜೋಡಿ ಆಟ ಪ್ರದರ್ಶಿಸಿದರು. ಇಬ್ಬರೂ ಸೇರಿ 212 ರನ್‌ಗಳನ್ನು ಕಲೆ ಹಾಕುವ ಮೂಲಕ ಸತತ ಮೂರು ಸೋಲುಗಳನ್ನು ಕಂಡಿದ್ದ ಭಾರತ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟಿದ್ದಾರೆ. ಗೆಲುವಿನ ಭರವಸೆ ಹುಟ್ಟುಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಶಿಕ್ಷಣ, ನಿರುದ್ಯೋಗ – ಬಿಹಾರಿ ಯುವಜನರು ಬಯಸುತ್ತಿರುವುದೇನು?

ಮಂಧಾನ 95 ಎಸೆಗಳಿಗೆ 109 ರನ್ ಗಳಿಸಿದರೆ, ರಾವಲ್ 134 ಬಾಲ್‌ಗಳನ್ನು ಎದುರಿಸಿ 122 ರನ್‌ ಗಳಿಸಿದರು. 3ನೇ ಕ್ರಮಾಂಕದಲ್ಲಿ ಅಂಗಳಕ್ಕೆ ಇಳಿದ ಜೆಮಿಮಾ ರೊಡ್ರಿಗಸ್ 55 ಎಸೆತಗಳಿಗೆ 76 ರನ್‌ಗಳಿಸಿ, ಅಜೇಯರಾಗಿ ಉಳಿದರು. ಹರ್ಮನ್ ಪ್ರೀತ್ ಕೌರ್ 11 ಬಾಲ್‌ಗಳಿಗೆ 10 ರನ್‌ ಗಳಿಸಿ ಔಟ್‌ ಆದರೆ, ರಿಚಾ ಘೋಷ್‌ 1 ಬಾಲ್‌ಗೆ 4 ರನ್‌ ಸಿಡಿಸಿ ಅಜೇಯರಾಗಿ ಉಳಿದರು.

ಇದು ಮಹಿಳಾ ವಿಶ್ವಕಪ್‌ನಲ್ಲಿ ಭಾರತದ ಅತ್ಯಧಿಕ ಮೊತ್ತವಾಗಿದೆ. ಭಾರತ ತಂಡ ನೀಡಿರುವ ಬೃಹತ್ ಮೊತ್ತವನ್ನು ನ್ಯೂಜಿಲೆಂಡ್‌ ತಂಡ ಬೆನ್ನತ್ತಲು ಸಿದ್ದವಾಗಿದ್ದು, ಬ್ಯಾಟಿಂಗ್‌ ಆರಂಭಿಸಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...