ವಿಶ್ವಕಪ್ | ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಸುಲಭ ಜಯ

Date:

  • ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಗೆಲುವಿನ ಓಟ ಮುಂದುವರಿಸಿದ ಟೀಮ್ ಇಂಡಿಯಾ
  • ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ ಅರ್ಧಶತಕ

ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ವಿಶ್ವಕಪ್‌ ಕೂಟದ 12ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಟೀಮ್ ಇಂಡಿಯಾ ಏಳು ವಿಕೆಟ್‌ಗಳಿಂದ ಸೋಲಿಸಿದೆ. ಆ ಮೂಲಕ ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಟೀಮ್ ಇಂಡಿಯಾ ಗೆಲುವಿನ ಓಟವನ್ನು ಮುಂದುವರಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಬಾಬರ್ ಆಝಂ ಪಡೆ, ಮಧ್ಯಮ ಕ್ರಮಾಂಕದಲ್ಲಿ ದಿಢೀರ್ ಕುಸಿತ ಕಂಡ ಪರಿಣಾಮ ಕೇವಲ 42.5 ಓವರ್‌ಗಳಲ್ಲಿ ಕೇವಲ 191 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿತ್ತು.

ಪಾಕ್ ನೀಡಿದ್ದ ಈ ಸುಲಭ ಗುರಿಯನ್ನು ಬೆನ್ನಟ್ಟಿದ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ, ಕೇವಲ 30.3 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೀಮ್ ಇಂಡಿಯಾ ಪರ ನಾಯಕನ ಆಟವಾಡಿದ ರೋಹಿತ್ ಶರ್ಮಾ 62 ಎಸೆತಗಳನ್ನು ಎದುರಿಸಿ ಆರು ಬೌಂಡರಿ ಹಾಗೂ ಆರು ಸಿಕ್ಸ್‌ ಅನ್ನು ಒಳಗೊಂಡು 86 ರನ್‌ ಗಳಿಸಿ, ಶಾಹೀನ್ ಶಾ ಅಫ್ರಿದಿ ಬೌಲಿಂಗ್‌ನಲ್ಲಿ ಇಫ್ತಿಕಾರ್‌ಗೆ ಕ್ಯಾಚಿತ್ತು ಔಟಾದರು. ಆ ಮೂಲಕ 14 ರನ್‌ಗಳಿಂದ ಶತಕ ಗಳಿಸುವ ಅವಕಾಶ ಕಳೆದುಕೊಂಡರು.

ಟೀಮ್ ಇಂಡಿಯಾ ಪರ ಮೊದಲ ವಿಶ್ವಕಪ್ ಪಂದ್ಯವನ್ನಾಡಿದ ಆರಂಭಿಕ ಆಟಗಾರ ಶುಭಮನ್‌ ಗಿಲ್ 11 ಎಸೆತಗಳನ್ನು ಎದುರಿಸಿ 4 ಬೌಂಡರಿಯುಳ್ಳ 16 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ 18 ಎಸೆತಗಳಲ್ಲಿ 16 ರನ್ ಗಳಿಸಿ ನಿರ್ಗಮಿಸಿದರು.

ಕೊನೆಯಲ್ಲಿ ಶ್ರೇಯಸ್ ಅಯ್ಯರ್ 53*(3 ಬೌಂಡರಿ, 2 ಸಿಕ್ಸ್)  ಹಾಗೂ ಕೆ ಎಲ್ ರಾಹುಲ್ 19 ರನ್ ಗಳಿಸಿ, ಔಟಾಗದೆ ಉಳಿದರು.

ಪಾಕ್ ಪರ ಬೌಲಿಂಗ್‌ನಲ್ಲಿ ಶಾಹೀನ್ ಶಾ ಅಫ್ರಿದಿ ಎರಡು ವಿಕೆಟ್ ಪಡೆದರೆ, ಹಸನ್ ಅಲಿ ಒಂದು ವಿಕೆಟ್ ಪಡೆದರು.

ಟೀಮ್ ಇಂಡಿಯಾ ಬೌಲಿಂಗ್‌ನಲ್ಲಿ ಏಳು ಓವರ್ ಎಸೆದು ಕೇವಲ 19 ರನ್ ನೀಡಿ, ಪ್ರಮುಖ ಎರಡು ವಿಕೆಟ್ ಪಡೆದಿದ್ದ ಜಸ್‌ಪ್ರೀತ್ ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಗೆಲುವಿನ ಓಟ ಮುಂದುವರಿಸಿದ ಟೀಮ್ ಇಂಡಿಯಾ
ಕಳೆದ 31 ವರ್ಷಗಳಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಭಾರತದ ವಿರುದ್ಧ ಈವರೆಗೆ ಒಂದೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಈ ಪಂದ್ಯಕ್ಕೂ ಮೊದಲು ಏಳು ಬಾರಿ ಮುಖಾಮುಖಿಯಾದಾಗಲೂ ಭಾರತವೇ ಗೆದ್ದುಕೊಂಡಿತ್ತು. ಇಂದಿನ ಪಂದ್ಯದಲ್ಲೂ ಟೀಮ್ ಇಂಡಿಯಾ ಗೆದ್ದ ಪರಿಣಾಮ, ಪಾಕ್ ವಿರುದ್ಧ 8-0 ಅಂತರದೊಂದಿಗೆ ವಿಶ್ವಕಪ್ ಗೆಲುವು ಮುಂದುವರಿಸಿದೆ.

300 ಸಿಕ್ಸರ್‌ಗಳ ಸರದಾರ ‘ಹಿಟ್ ಮ್ಯಾನ್’
ಹಿಟ್ ಮ್ಯಾನ್ ಎಂದೇ ಗುರುತಿಸಲ್ಪಡುವ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ, ಪಾಕ್ ವಿರುದ್ಧದ ಇಂದಿನ ಪಂದ್ಯದಲ್ಲಿ ಒಟ್ಟು ಆರು ಸಿಕ್ಸ್ ಬಾರಿಸಿದ್ದಾರೆ. 4ನೇ ಸಿಕ್ಸ್ ಬಾರಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ 300 ಸಿಕ್ಸ್‌ ದಾಟಿರುವ ಆಟಗಾರನಾಗಿ ಹೊಸ ದಾಖಲೆ ಬರೆದುಕೊಂಡಿದ್ದಾರೆ.

351 ಸಿಕ್ಸ್ ಬಾರಿಸಿರುವ ಪಾಕಿಸ್ತಾನದ ನಿವೃತ್ತ ಕ್ರಿಕೆಟಿಗ ಶಾಹೀದ್ ಅಫ್ರೀದಿ ಮೊದಲ ಸ್ಥಾನದಲ್ಲಿದ್ದರೆ, ವೆಸ್ಟ್‌ಇಂಡೀಸ್‌ನ ದೈತ್ಯ ಆಟಗಾರ ಕ್ರಿಸ್ ಗೇಲ್ 331 ಸಿಕ್ಸ್ ಬಾರಿಸಿ ಎರಡನೇ ಸ್ದಾನದಲ್ಲಿದ್ದಾರೆ. ಒಟ್ಟು 302 ಸಿಕ್ಸ್‌ನೊಂದಿಗೆ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. ಸನತ್ ಜಯಸೂರ್ಯ (ಶ್ರೀಲಂಕಾ-ಸಿಕ್ಸರ್‌ಗಳು 270) ಹಾಗೂ ಎಂ ಎಸ್ ಧೋನಿ (ಭಾರತ-ಸಿಕ್ಸರ್‌ಗಳು 229) ಕ್ರಮವಾಗಿ ನಾಲ್ಕನೇ ಹಾಗೂ ಐದನೇ ಸ್ಥಾನದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...