ವಿಶ್ವಕಪ್ ಫೈನಲ್ | ಆರಂಭದಲ್ಲೇ 3 ವಿಕೆಟ್ ಕಿತ್ತು ಆಸೀಸ್‌ಗೆ ಒತ್ತಡ ಹೇರಿದ ಟೀಮ್ ಇಂಡಿಯಾ

Date:

ಅಹಮದಾಬಾದ್‌ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿರುವ 241 ರನ್‌ಗಳ ಸವಾಲನ್ನು ಬೆನ್ನತ್ತಿರುವ ಆಸೀಸ್‌ಗೆ ಬೌಲರ್‌ಗಳು ಆರಂಭದಲ್ಲೇ ಪ್ರಮುಖ ಮೂರು ವಿಕೆಟ್‌ಗಳನ್ನು ಕೀಳುವ ಮೂಲಕ ಒತ್ತಡ ಹೇರುವಲ್ಲಿ ಯಶಸ್ವಿಯಾಗಿದ್ದಾರೆ.

ಬುಮ್ರಾ ಎಸೆದ ಮೊದಲ ಓವರ್‌ನಲ್ಲೇ ಆಸೀಸ್‌ನ ಆರಂಭಿಕ ಬ್ಯಾಟರ್‌ಗಳು 15 ರನ್‌ಗಳನ್ನು ಬಾಚುವ ಮೂಲಕ ಸ್ಫೋಟಕ ಆರಂಭದ ಮುನ್ಸೂಚನೆ ನೀಡಿದರು. ಆದರೆ ಇದಕ್ಕೆ 2ನೇ ಓವರ್ ಎಸೆದ ಸೆಮಿಫೈನಲ್‌ ಪಂದ್ಯದ ಮೊಹಮ್ಮದ್ ಶಮಿ ಅವಕಾಶ ನೀಡಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊಹಮ್ಮದ್ ಶಮಿ ಎಸೆದ 2ನೇ ಓವರ್​ನ 2ನೇ ಎಸೆತದಲ್ಲಿ ಸ್ಲಿಪ್​ನಲ್ಲಿದ್ದ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡುವ ಮೂಲಕ ಡೇವಿಡ್ ವಾರ್ನರ್ 7 ರನ್ ಬಾರಿಸಿ ಔಟಾದರೆ, ಜಸ್​ಪ್ರೀತ್ ಬುಮ್ರಾ ಎಸೆದ 5ನೇ ಓವರ್​ನ 3ನೇ ಎಸೆತದಲ್ಲಿ ವಿಕೆಟ್ ಕೀಪರ್​ ಕೆಎಲ್ ರಾಹುಲ್​ಗೆ ಕ್ಯಾಚ್ ನೀಡಿ 15 ಎಸೆತಗಳಲ್ಲಿ 15 ರನ್ ಬಾರಿಸಿದ್ದ ಮಿಚೆಲ್ ಮಾರ್ಷ್​ ಔಟಾದರು.

ಆ ಬಳಿಕ ಜಸ್​ಪ್ರೀತ್ ಬುಮ್ರಾ ಎಸೆದ 7ನೇ ಓವರ್​ನ 4ನೇ ಎಸೆತದಲ್ಲಿ ಆಕರ್ಷಕ ಸ್ಟ್ರೈಡ್ ಡ್ರೈವ್ ಫೋರ್ ಬಾರಿಸಿದ ಸ್ಟೀವ್ ಸ್ಮಿತ್, ಕೊನೆಯ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಬಲೆಗೆ ಬಿದ್ದು, 4 ರನ್ ಗಳಿಸಿದ್ದ ಸ್ಟೀವ್ ಸ್ಮಿತ್ ನಿರ್ಗಮಿಸಿದರು. ಆ ಮೂಲಕ ಟೀಮ್ ಇಂಡಿಯಾಗೆ ಜಸ್​ಪ್ರೀತ್ ಬುಮ್ರಾ ಮೂರನೇ ಯಶಸ್ಸು ತಂದುಕೊಟ್ಟರು.

ಸ್ಟೀವ್ ಸ್ಮಿತ್ ಎಲ್‌ಬಿಡಬ್ಲ್ಯೂ ನಿಜವಾಗಿಯೂ ಔಟ್ ಅಲ್ಲ ಎನ್ನಲಾಗಿದೆ. ರೀವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ಅದನ್ನು ಬಳಸಿಕೊಳ್ಳದೇ, ನೇರವಾಗಿ ಪೆವಿಲಿಯನ್ ಕಡೆಗೆ ತೆರಳಿದರು.

ಸದ್ಯ 16 ಓವರ್‌ಗಳು ಮುಕ್ತಾಯವಾಗಿದ್ದು, ಆಸ್ಟ್ರೇಲಿಯಾ 3 ವಿಕೆಟ್ ಕಳೆದುಕೊಂಡು 87 ರನ್ ದಾಖಲಿಸಿದೆ. ಟ್ರಾವಿಸ್ ಹೆಡ್ ಹಾಗೂ ಲಾಬೂಶೈನ್ ಕ್ರೀಸ್‌ನಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...