ಆರ್‌ಸಿಬಿಯಲ್ಲಿ ಹೆಚ್ಚುವರಿ ಆಟಗಾರನಾಗಿದ್ದ ಫಿನ್ ಅಲೆನ್‌ರಿಂದ ವಿಶ್ವ ದಾಖಲೆ

Date:

2021ರಲ್ಲಿ ಆರ್​ಸಿಬಿ ತಂಡದ ಹೆಚ್ಚುವರಿ ಆಟಗಾರನಾಗಿದ್ದ ನ್ಯೂಜಿಲೆಂಡ್ ಆಟಗಾರ ಫಿನ್ ಅಲೆನ್ ಅವರು ಅಚ್ಚರಿಯ ವಿಶ್ವ ದಾಖಲೆ ಮಾಡಿದ್ದಾರೆ.

ಮೇಜರ್ ಲೀಗ್ ಕ್ರಿಕೆಟ್​ನಲ್ಲಿ (ಎಂಎಲ್​ಸಿ) 51 ಬಾಲಿಗೆ 151 ರನ್ ಭಾರಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ 296.07 ಎಂಬುದು ವಿಶೇಷ.

ಜೂನ್ 13ರಂದು ಸಾನ್ ಫ್ರಾನ್ಸಿಸ್ಕೋ ಮತ್ತು ವಾಷಿಂಗ್ಟನ್ ಫ್ರೀಡಂ ತಂಡದ ಮಧ್ಯೆ ಪಂದ್ಯ ನಡೆದಿದೆ. ಎಂಎಲ್​ಸಿ ಲೀಗ್​ನಲ್ಲಿ ಸಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ ಪರವಾಗಿ ಫಿನ್ ಅಲೆನ್ ಅವರು ಆಡುತ್ತಿದ್ದಾರೆ. ಅಲೆನ್ ಬಾರಿಸಿದ 151 ರನ್​ಗಳಲ್ಲಿ 5 ಫೋರ್ ಹಾಗೂ 19 ಸಿಕ್ಸ್​‌ ಒಳಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೂಲಕ ಟಿ-20 ಇನ್ನಿಂಗ್ಸ್​​ ಒಂದರಲ್ಲಿ ಅತಿ ಹೆಚ್ಚು ಸಿಕ್ಸ್ ಬಾರಿಸಿದ ಆಟಗಾರ ಎಂಬ ಖ್ಯಾತಿಗೂ ಫಿನ್ ಅಲೆನ್ ಭಾಜನರಾಗಿದ್ದಾರೆ. ಇದಕ್ಕೂ ಮೊದಲು ಸಾಹಿಲ್ ಚೌಹಾಣ್ ಅವರು ಒಂದೇ ಇನ್ನಿಂಗ್ಸ್​ನಲ್ಲಿ 18 ಸಿಕ್ಸ್ ಬಾರಿಸಿದ್ದರು.

ಅಲೆನ್ ಆಡಿದ ಅದ್ಭುತ ಇನ್ನಿಂಗ್ಸ್​ನಿಂದ 20 ಓವರ್​ಗಳಲ್ಲಿ ತಂಡ 269 ರನ್ ಕಲೆ ಹಾಕಲು ಶಕ್ಯವಾಯಿತು. ಈ ಬೃಹತ್ ಮೊತ್ತ ಬೆನ್ನತ್ತಿದ ವಾಷಿಂಗ್ಟನ್ ಫ್ರೀಡಂ ತಂಡ 146 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಸಾನ್ ಫ್ರಾನ್ಸಿಸ್ಕೋ ತಂಡ 123 ರನ್​ಗಳ ಭರ್ಜರಿ ಗೆಲುವು ಕಂಡರು.

2025ರಲ್ಲಿ ಯಾರೂ ಖರೀದಿ ಮಾಡಿರಲಿಲ್ಲ

2021ರ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಆಟಗಾರ ಜೋಶ್ ಫಿಲಿಪ್ಪೆ ಅವರು ಅಲಭ್ಯವಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಫಿನ್ ಆಲೆನ್ ಅವರನ್ನು ಆರ್​ಸಿಬಿ ಪಡೆದುಕೊಂಡಿತು. ಆದರೆ, ಯಾವುದೇ ಪಂದ್ಯವನ್ನು ಆಡಿಸಿರಲಿಲ್ಲ. ಆರ್‌ಸಿಬಿಯಲ್ಲಿ ಬೆಂಚ್ ಕಾದಿದ್ದ ಫಿನ್ ಅಲೆನ್ ಆಟ ಈಗ ಕ್ರಿಕೆಟ್‌ ಲೋಕದ ಗಮನ ಸೆಳೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...