‘ಕೊಹ್ಲಿ ಜೀವನದಲ್ಲೇ ಅತ್ಯಂತ ಕೆಟ್ಟ ಶಾಟ್’; ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆಗಿದ್ದೇನು?

Date:

ಭಾರತ ಮತ್ತು ನ್ಯೂಜಿಲೆಂಡ್‌ ಕ್ರಿಕೆಟ್ ತಂಡಗಳ ನಡುವೆ ಟೆಸ್ಟ್‌ ಪಂದ್ಯಾವಳಿ ನಡೆಯುತ್ತಿದೆ. ಬೆಂಗಳೂರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪ್ರವಾಸಿ ತಂಡ ನ್ಯೂಜಿಲೆಂಡ್‌ ಗೆದ್ದು ಬೀಗಿದೆ. ಎರಡನೇ ಪಂದ್ಯ ಪುಣೆಯಲ್ಲಿ ನಡೆಯುತ್ತಿದ್ದು, ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಟೀಮ್ ಇಂಡಿಯಾದ ಸ್ಟಾರ್‌ ಆಟಗಾರ, ಬ್ಯಾಟರ್ ವಿರಾಟ್‌ ಕೊಹ್ಲಿ ಕೇವಲ 1 ರನ್‌ಗೆ ಔಟ್‌ ಆಗಿದ್ದು, ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಭಾರತದ ತಂಡ ಮಾಜಿ ಬ್ಯಾಟರ್‌ ಸಂಜಯ್ ಮಾಂಜ್ರೇಕರ್, ‘ಇದು ಕೊಹ್ಲಿ ಜೀವನದಲ್ಲೇ ಅತ್ಯಂತ ಕೆಟ್ಟ ಶಾಟ್’ ಎಂದು ಹೇಳಿದ್ದಾರೆ.

ಮೊದಲ ಪಂದ್ಯ ಸೋತಿದ್ದ ಟೀಮ್ ಇಂಡಿಯಾ, ಎರಡನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುತ್ತದೆ. ಈ ಪಂದ್ಯವನ್ನು ಗೆಲ್ಲುತ್ತದೆ. ತಂಡದ ಬಹುನಿರೀಕ್ಷಿತ ಬ್ಯಾಟರ್‌ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡುತ್ತಾರೆ ಎಂಬ ನಿರೀಕ್ಷೆ ಕ್ರಿಕೆಟ್ ಪ್ರೇಮಿಗಳಲ್ಲಿತ್ತು.

ಆದರೆ, ಈ ನಿರೀಕ್ಷೆಯನ್ನು ಇಬ್ಬರು ಆಟಗಾರರೂ ಹುಸಿಗೊಳಿಸಿದ್ದಾರೆ. ಪಂದ್ಯದಲ್ಲಿ ಖಾತೆ ತೆರೆಯುವ ಮುನ್ನವೇ, ಅಂದರೆ ಒಂದೂ ರನ್ ಗಳಿಸದೆ ರೋಹಿತ್ ಶರ್ಮಾ ಔಟ್‌ ಆದರೆ, ವಿರಾಟ್‌ ಕೊಹ್ಲಿ 1 ರನ್‌ಗೆ ವಿಕೆಟ್‌ ಒಪ್ಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂಟು ಎಸೆತಗಳನ್ನು ಎದುರಿಸಿದ ಕೊಹ್ಲಿ 1 ರನ್‌ ಗಳಿಸಿದ್ದರು. ಸ್ಯಾಂಟ್ನರ್ ಮಾಡಿದ ಫುಲ್‌ ಟಾಸ್ ಬೌಲಿಂಗ್ ಎದುರಿಸಿದ ಕೊಹ್ಲಿ ಕ್ಲೀನ್ ಬೌಲ್ಡ್ ಆದರು.

ಉತ್ತಮ ಶಾಟ್ ಹೊಡೆಯಬಹುದಾದ ಫುಲ್‌ ಟಾಸ್‌ ಬಾಲ್‌ಗೆ ಕೊಹ್ಲಿ ವಿಕೆಟ್‌ ಒಪ್ಪಿಸಿದ್ದು, ಕ್ರೀಡಾಂಗಣದಲ್ಲಿ ನೆರೆದಿದ್ದವರನ್ನು ಮೂಕರನ್ನಾಗಿಸಿತು. ಕೊಹ್ಲಿಯ ಶಾಟ್‌ ಬಗ್ಗೆ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಸಂಜಯ್ ಮಾಂಜ್ರೇಕರ್, “ಕೊಹ್ಲಿ ಅವರು ತಮ್ಮ ಜೀವಮಾನದ ಅತ್ಯಂತ ಕೆಟ್ಟ ‘ಶಾಟ್’ ಹೊಡೆಯಲು ಯತ್ನಿಸಿದರು ಎಂಬುದು ಅವರಿಗೂ ತಿಳಿದಿದೆ. ಅವರು ಹೀಗೆ ವಿಕೆಟ್ ಒಪ್ಪಿಸಿದ್ದು ಬೇಸರದ ಸಂಗತಿ. ತಂಡ ಸಂಕಷ್ಟದಲ್ಲಿದ್ದ ಸಮಯದಲ್ಲಿ ಅವರು ಅದ್ಭುತ ಮತ್ತು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದವರು’’ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...