ಡಬ್ಲ್ಯೂಪಿಎಲ್‌ 2025 | ರಿಚಾ ಘೋಷ್ ಅಬ್ಬರ: ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಶುಭಾರಂಭ

Date:

ಮಹಿಳಾ ಪ್ರೀಮಿಯರ್ ಲೀಗ್ 2025ರ ಉದ್ಘಾಟನಾ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದಿದ್ದು, ರಿಚಾ ಘೋಷ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಶುಭಾರಂಭಗೈದಿದೆ.

ಡಬ್ಲ್ಯೂಪಿಎಲ್‌ 2025ರ ಮೊದಲ ಪಂದ್ಯದಲ್ಲಿ ಟಾಸ್ ಸೋತಿದ್ದರೂ ಮೊದಲು ಬ್ಯಾಟಿಂಗ್ ನಡೆಸಿದ ಗುಜರಾತ್, 201 ರನ್‌ಗಳ ಬೃಹತ್ ಸ್ಕೋರ್ ಗಳಿಸಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಆರ್‌ಸಿಬಿ ವನಿತೆಯರ ತಂಡ, 6 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದ ಬೀಗಿದೆ. ರಿಚಾ ಘೋಷ್ ಬಿರುಸಿನ ಅರ್ಧಶತಕ ಸಿಡಿಸುವ ಮೂಲಕ ಆರ್‌ಸಿಬಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಗುಜರಾತ್ ಜೈಂಟ್ಸ್ ಮೊದಲು ಸ್ಫೋಟಕ ಬ್ಯಾಟಿಂಗ್ ನಡೆಸಿ 4 ವಿಕೆಟ್ ನಷ್ಟಕ್ಕೆ 201 ರನ್‌ಗಳ ಬೃಹತ್ ಸ್ಕೋರ್ ಗಳಿಸಿತ್ತು. ಗುಜರಾತ್ ನೀಡಿದ್ದ ಬೃಹತ್ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ, ಎಲಿಸಾ ಪೆರಿ ಹಾಗೂ ಮತ್ತು ರಿಚಾ ಘೋಷ್ ಅವರ ಅರ್ಧಶತಕದ ನೆರವಿನಿಂದ 18.3 ಓವರ್‌ಗಳಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡು 9 ಎಸೆತಗಳು ಬಾಕಿ ಇರುವಂತೆಯೇ ಗುರಿ ಮುಟ್ಟುವ ಮೂಲಕ 6 ವಿಕೆಟ್‌ಗಳ ಜಯ ಸಾಧಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್ ಪರ ನಾಯಕಿ ಆಶ್ಲೇ ಗಾರ್ಡ್ನರ್ 37 ಎಸೆತಗಳಲ್ಲಿ 3 ಬೌಂಡರಿ ಮತ್ತು 8 ಸಿಕ್ಸರ್‌ಗಳೊಂದಿಗೆ 213.51 ಸ್ಟ್ರೈಕ್ ರೇಟ್‌ನಲ್ಲಿ ಅಜೇಯ 79 ರನ್ ಗಳಿಸಿದರು. ಅವರಲ್ಲದೆ, ಬೆತ್ ಮೂನಿ ಕೂಡ ಅರ್ಧಶತಕ ಗಳಿಸಿದರು. ಮೂನಿ 42 ಎಸೆತಗಳಲ್ಲಿ 8 ಬೌಂಡರಿಗಳ ಸಹಾಯದಿಂದ 52 ರನ್ ಗಳಿಸಿದರು.

ಕೊನೆಯಲ್ಲಿ ಡಿಯಾಂಡ್ರಾ ಡಾಟಿನ್ 3 ಬೌಂಡರಿ ಮತ್ತು 1 ಸಿಕ್ಸರ್‌ನೊಂದಿಗೆ 25 ರನ್‌ಗಳ ಕೊಡುಗೆ ನೀಡಿದರು. ಲಾರಾ ವೋಲ್ವಾರ್ಡ್ 6 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರೆ, ದಯಾಲನ್ ಹೇಮಲತಾ 4 ರನ್ ಗಳಿಸಿ ಔಟಾದರು.

ಆರ್‌ಸಿಬಿ ಪರ ರೇಣುಕಾ ಸಿಂಗ್ 25 ರನ್‌ಗಳಿಗೆ 2 ವಿಕೆಟ್ ಪಡೆದರೆ, ಕನಿಕಾ ಅಹುಜಾ 19 ರನ್‌ಗಳಿಗೆ 1 ವಿಕೆಟ್ ಪಡೆದರು. ಪೆರಿ-ರಿಚಾ ಅಬ್ಬರ ಆರ್‌ಸಿಬಿ ಪರ ಸ್ಮೃತಿ ಮಂಧಾನ ಮತ್ತು ಡೇನಿಯಲ್ ವ್ಯಾಟ್-ಹಾಡ್ಜ್ ಇನ್ನಿಂಗ್ಸ್ ಆರಂಭಿಸಿದರು. ಆದರೆ ಗುಜರಾತ್ ನಾಯಕಿ ಆಶ್ಲೇ ಗಾರ್ಡ್ನರ್ ಬ್ಯಾಟಿಂಗ್ ಜೊತೆಗೆ ಬೌಲಿಂಗ್‌ನಲ್ಲಿಯೂ ಅದ್ಭುತ ಪ್ರದರ್ಶನ ನೀಡಿದರು.

ಆರ್‌ಸಿಬಿ ಇನ್ನಿಂಗ್ಸ್‌ನ ಎರಡನೇ ಓವರ್‌ನಲ್ಲಿ ಅವರು 2 ವಿಕೆಟ್‌ಗಳನ್ನು ಪಡೆದು ಆರಂಭಿಕ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಕಳುಹಿಸಿದರು. ಗಾರ್ಡ್ನರ್ ಮೊದಲು ಸ್ಮೃತಿ (9) ಮತ್ತು ನಂತರ ಹಾಡ್ಜ್ (4) ಔಟ್ ಮಾಡಿದರು. ಈ ಹಂತದಲ್ಲಿ ಆರ್‌ಸಿಬಿ 14 ರನ್‌ಗಳಿಗೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿತ್ತು.

ಸಂಕಷ್ಟದಲ್ಲಿದ ಆರ್‌ಸಿಬಿಗೆ ನೆರವಾದ ಎಲ್ಲಿಸ್ ಪೆರಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅವರು 34 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 57 ರನ್‌ಗಳ ಅರ್ಧಶತಕ ಗಳಿಸಿದರೆ, ರಾಘವಿ ಬಿಸ್ಟ್ 25 ರನ್‌ಗಳ ಕೊಡುಗೆ ನೀಡಿ ತಂಡದ ಸ್ಕೋರ್ ಅನ್ನು 100 ರನ್‌ಗಳಿಗೆ ಕೊಂಡೊಯ್ದರು.

ಆರ್‌ಸಿಬಿ ತಂಡವು 109 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತ್ತು. ಎಲಿಸಾ ಅವರು ಔಟಾಗುತ್ತಿದ್ದಂತೆ ತಂಡದಲ್ಲಿ ಸೋಲಿನ ಛಾಯೆ ಕಂಡಿತ್ತು. ಆದರೆ, ಅದನ್ನು ದೂರ ಮಾಡುವಲ್ಲಿ ರಿಚಾ ಯಶಸ್ವಿಯಾದರು. ತಮ್ಮ ಭರ್ಜರಿ ಬ್ಯಾಟಿಂಗ್ ಮೂಲಕ ಗುಜರಾತ್ ಬೌಲರ್‌ಗಳನ್ನು ಕಂಗೆಡಿಸಿದರು. ಅವರಿಗೆ ಕನಿಕಾ ಅಹುಜಾ (ಔಟಾಗದೇ 30;13 ಎಸೆತ) ಜೊತೆ ನೀಡಿದರು. 237ರ ಸ್ಟ್ರೈಕ್‌ರೇಟ್‌ನಲ್ಲಿ ರನ್ ಗಳಿಸಿದ ರಿಚಾ ಘೋಷ್, 201 ರನ್‌ಗಳ ಗುರಿಯನ್ನು ಬೆನ್ನಟ್ಟಿ ಆರ್‌ಸಿಬಿ ಪರ ರಿಚಾ ಫಿನಿಷರ್ ಪಾತ್ರ ನಿರ್ವಹಿಸಿದರು. ಆ ಮೂಲಕ ಮಹಿಳಾ ಪ್ರೀಮಿಯರ್ ಲೀಗ್‌ನ ಇತಿಹಾಸದಲ್ಲಿ ಗರಿಷ್ಢ ಮೊತ್ತದ ಗುರಿಯನ್ನು ತಲುಪಿದ ಕೀರ್ತಿಗೆ ಆರ್‌ಸಿಬಿ ಪಾತ್ರವಾಗಿದೆ.

27 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್‌ಗಳ ನೆರವಿನಿಂದ ಅಜೇಯ 64 ರನ್ ಬಾರಿಸಿ ಆರ್‌ಸಿಬಿ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ ಘೋಷ್, ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತುಗೆ ಭಾಜನರಾದರು. ಗುಜರಾತ್ ಪರ ಅರ್ಧಶತಕ ಗಳಿಸಿ ಬ್ಯಾಟಿಂಗ್‌ನಲ್ಲೂ ಮಿಂಚಿದ್ದ ಆಶ್ಲೇ ಗಾರ್ಡ್ನರ್, ಬೌಲಿಂಗ್‌ ಮಾಡಿ 2 ವಿಕೆಟ್ ಪಡೆದರು. ಸಯಾಲಿ ಹಾಗೂ ದೊಟ್ಟಿನ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...