WPL ಫೈನಲ್ | ಹೆಣ್ಮಕ್ಳೇ ಸ್ಟ್ರಾಂಗು ಗುರೂ…ಅಂತೂ ಈ ಸಲ ಕಪ್ ನಮ್ದೆ!

Date:

ವಿಶ್ವದ ಕ್ರಿಕೆಟ್ ಆಸಕ್ತರ ನೆಚ್ಚಿನ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್‌ನಲ್ಲಿ ಅಭಿಮಾನಿಗಳ ಫೇವರೀಟ್ ತಂಡ ಆರ್‌ಸಿಬಿ. ಕಳೆದ 16 ವರ್ಷಗಳಿಂದ ನಡೆಯುತ್ತಿರುವ ಈ ಲೀಗ್‌ನಲ್ಲಿ ಈವರೆಗೆ ಆರ್‌ಸಿಬಿ ಚಾಂಪಿಯನ್ ಆಗಿಲ್ಲ. ಪ್ರತಿಬಾರಿಯೂ ಈ ಸಲ ಕಪ್ ನಮ್ದೇ ಅನ್ನುವುದು ಟ್ರೆಂಡ್ ಆಗುತ್ತಿತ್ತು.

ರಾಯಲ್ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ಪುರುಷರ ತಂಡ ಈವರೆಗೆ ಪೂರೈಸಲಾಗದ ಅಭಿಮಾನಿಗಳ ಆಸೆಯನ್ನು ಮಹಿಳಾ ತಂಡ ಎರಡನೇ ವರ್ಷದಲ್ಲೇ ಪೂರೈಸಿದೆ. ಅಭಿಮಾನಿಗಳ ಮನ ಗೆಲ್ಲುವಲ್ಲಿ ಕೊನೆಗೂ ಸಫಲವಾಗಿದೆ. ಹೌದು. ಈ ಸಲ ಕಪ್ ನಮ್ದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್(WPL 2024) ಎರಡನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಸ್ಮೃತಿ ಮಂದಾನ ನೇತೃತ್ವದ ಆರ್‌ಸಿಬಿ ತಂಡವು, ಡೆಲ್ಲಿ ತಂಡವನ್ನು ಸೋಲಿಸುವ ಮೂಲಕ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿದೆ.

ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ, ಮೊದಲು ಬ್ಯಾಟಿಂಗ್ ಆಯ್ದುಕೊಂಡಿತ್ತು. ಆರ್​ಸಿಬಿ ಆರಂಭದಲ್ಲಿ ಬೌಲಿಂಗ್‌ನಲ್ಲಿ ವಿಫಲವಾಯಿತಾದರೂ, ಎಂಟನೇ ಓವರ್ ಎಸೆದ ಆರ್‌ಸಿಬಿ ಬೌಲರ್ ಸೋಫಿ ಮೋಲಿನೆಕ್ಸ್‌, 4 ಎಸೆತಗಳಲ್ಲಿ ಮೂರು ವಿಕೆಟ್ ಕಿತ್ತ ಬಳಿಕ ಡೆಲ್ಲಿ 113 ರನ್‌ಗಳಿಗೆ ಆಲೌಟ್‌ ಆಗಿತ್ತು. 64 ರನ್‌ ವೇಳೆ ಶೂನ್ಯ ವಿಕೆಟ್ ಕಳೆದುಕೊಂಡಿದ್ದ ಡೆಲ್ಲಿ ತಂಡ, 18.3 ಓವರ್‌ಗಳಲ್ಲಿ ಆಲೌಟ್ ಆಗಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ, ಕೇವಲ ಎರಡು ವಿಕೆಟ್ ಕಳೆದುಕೊಂಡು 19.3 ಓವರ್‌ಗಳಲ್ಲಿ ಗುರಿ ಮುಟ್ಟಿತು. ಮೊದಲ ಬಾರಿಗೆ ಫೈನಲ್ ಪ್ರವೇಶಿಸಿ, ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ.

ಆರ್‌ಸಿಬಿ ಪರವಾಗಿ ಬ್ಯಾಟಿಂಗ್‌ನಲ್ಲಿ ನಾಯಕಿ ಸ್ಮೃತಿ ಮಂದಾನ 39 ಎಸೆತಗಳಲ್ಲಿ 31 ರನ್ ಗಳಿಸಿ, ಮಿನ್ನು ಮನಿ ಬೌಲಿಂಗ್‌ನಲ್ಲಿ ಕ್ಯಾಚಿತ್ತು ಔಟಾದರು. ಸೋಫಿ ಡಿವೈನ್ 27 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಭರ್ಜರಿ ಸಿಕ್ಸ್‌ನ ನೆರವಿನಿಂದ 32 ರನ್‌ ಗಳಿಸಿ, ಶಿಖಾ ಪಾಂಡೆ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು.

ಇದನ್ನು ಓದಿದ್ದೀರಾ? ಗುಜರಾತ್ | ಹಾಸ್ಟೆಲ್‌ನಲ್ಲಿ ನಮಾಝ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪಿನಿಂದ ಹಲ್ಲೆ; ನೋಡುತ್ತಾ ನಿಂತ ಪೊಲೀಸರು!

ಕೊನೆಯಲ್ಲಿ ಎಲಿಸಾ ಪೆರ್ರಿ 35 ಎಸೆತಗಳಲ್ಲಿ 37 ರನ್ ಗಳಿಸಿದರೆ, ರಿಚಾ ಘೋಷ್ 14 ಎಸೆತಗಳಲ್ಲಿ 17 ರನ್ ಗಳಿಸಿ, ಔಟಾಗದೆ ಉಳಿದರು. ಚಾಂಪಿಯನ್ ಆಗುವ ಮೂಲಕ ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳ ಕನಸು ನನಸು ಮಾಡಿದರು. ಆ ಮೂಲಕ ಮಹಿಳಾ ತಂಡವು ಆರ್‌ಸಿಬಿಗೆ ಪ್ರಶಸ್ತಿಯ ಬರ ನೀಗಿಸಿದೆ. ಡೆಲ್ಲಿ ತಂಡ ಎರಡು ಬಾರಿ ಫೈನಲ್ ಪ್ರವೇಶಿಸಿದರೂ ಕೂಡ, ಚಾಂಪಿಯನ್ ಆಗುವಲ್ಲಿ ವಿಫಲವಾಗಿದೆ. 2023ರಲ್ಲಿ ನಡೆದಿದ್ದ ಫೈನಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಡೆಲ್ಲಿ ತಂಡವನ್ನು ಸೋಲಿಸಿ, ಚಾಂಪಿಯನ್ ಆಗಿತ್ತು.

ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್‌ಸಿಬಿ

ಪಾಯಿಂಟ್ಸ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ನೇರವಾಗಿ ಫೈನಲ್ ಪ್ರವೇಶಿಸಿತ್ತು. ಇತ್ತ ಎಲಿಮಿನೇಟರ್​ ಪಂಡ್ಯ ಆಡಿದ್ದ ಬೆಂಗಳೂರು ತಂಡ ರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ, ಮೊದಲ ಬಾರಿಗೆ ಫೈನಲ್ ಪ್ರವೇಶಿಸಿತ್ತು.

ಮಾ.22ರಿಂದ ಪುರುಷರ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದ್ದು, ಆರ್‌ಸಿಬಿ ತಂಡವು ಚೆನ್ನೈ ತಂಡವನ್ನು ಎದುರಿಸಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...