ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಗೆದ್ದ ಆಸ್ಟ್ರೇಲಿಯಾ ; ಭಾರತಕ್ಕೆ ಹೀನಾಯ ಸೋಲು

Date:

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡವನ್ನು 209 ರನ್‌ಗಳ ಅಂತರದಲ್ಲಿ ಮಣಿಸಿದ ಆಸ್ಟ್ರೇಲಿಯಾ, ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಲಂಡನ್‌ನ ಓವಲ್‌‌ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತದ ಗೆಲುವಿಗೆ ಆಸೀಸ್ ಪಡೆ  444 ರನ್‌ಗಳ ಕಠಿಣ ಗುರಿಯನ್ನು ಮುಂದಿಟ್ಟಿತ್ತು. ಆದರೆ ಅಂತಿಮ ದಿನವಾದ ಭಾನುವಾರ 234 ರನ್‌ಗಳಿಸುವಷ್ಟರಲ್ಲಿ ರೋಹಿತ್‌ ಪಡೆ ಆಲೌಟ್‌ ಆಯಿತು.

ಈ ಬಾರಿಯ ಡಬ್ಲ್ಯೂಟಿಸಿ ಗೆಲುವಿನೊಂದಿಗೆ, ಆಸ್ಟ್ರೇಲಿಯಾ ತಂಡವು ಎಲ್ಲಾ ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಮೊದಲ ತಂಡವೆಂಬ ಖ್ಯಾತಿಯನ್ನು ತನ್ನದಾಗಿಸಿಕೊಂಡಿದೆ. ಮತ್ತೊಂದೆಡೆ, 2014ರ ಬಳಿಕ, ಐಸಿಸಿ ಆಯೋಜಿಸುವ ಟೂರ್ನಿಯ ನಾಲ್ಕನೇ ಫೈನಲ್‌ನಲ್ಲೂ ಭಾರತ ಪ್ರಶಸ್ತಿಯಿಂದ ದೂರ ಉಳಿದಿದೆ. ಕಳೆದ ಬಾರಿಯೂ ಡಬ್ಲ್ಯೂಟಿಸಿ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಟೀಮ್‌ ಇಂಡಿಯಾ ಮುಗ್ಗರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

444 ರನ್‌ ಟಾರ್ಗೆಟ್‌-234 ರನ್‌ಗಳಿಗೆ ಆಲೌಟ್‌!

8 ವಿಕೆಟ್‌ ನಷ್ಟದಲ್ಲಿ 270 ರನ್‌ಗಳಿಸಿದ್ದ ವೇಳೆ ಶನಿವಾರ ಆಸೀಸ್‌, ಇನ್ನಿಂಗ್ಸ್‌ ಡಿಕ್ಲೇರ್‌ ಘೋಷಿಸಿತ್ತು. ಆ ಮೂಲಕ ಟೀಮ್‌ ಇಂಡಿಯಾ ಗೆಲುವಿಗೆ 444 ರನ್‌ಗಳ ಕಠಿಣ ಗುರಿ ನಿಗದಿಪಡಿಸಿತ್ತು.

ಫೈನಲ್‌ ಪಂದ್ಯದ ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತ, 3 ವಿಕೆಟ್‌ ನಷ್ಟದಲ್ಲಿ 164 ರನ್‌ಗಳಿಸಿತ್ತು. ಅಂತಿಮ ದಿನದಲ್ಲಿ ರೋಹಿತ್‌ ಪಡೆ ಗೆಲುವಿಗೆ, 7 ವಿಕೆಟ್‌ಗಳ ನೆರವಿನಿಂದ 280 ರನ್‌ ಗಳಿಸಬೇಕಾಗಿತ್ತು.

44 ರನ್‌ಗಳಿಂದ ಭಾನುವಾರ ಬ್ಯಾಟಿಂಗ್‌ ಆರಂಭಿಸಿದ್ದ ವಿರಾಟ್‌ ಕೊಹ್ಲಿ49 ರನ್‌ ಮತ್ತು 20 ರನ್‌ಗಳಿಸಿದ್ದ ಅಜಿಂಕ್ಯಾ ರಹಾನೆ  46 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಇವರಿಬ್ಬರು ನಿರ್ಗಮಿಸುತ್ತಲೇ ಭಾರತದ ಪತನ ಆರಂಭವಾಗಿತ್ತು. ಎಸ್‌ ಭರತ್‌ 23 ರನ್‌ಗಳಿಸಿ ತುಸು ಪ್ರತಿರೋಧ ತೋರಿದರು.

ರವೀಂದ್ರ ಜಡೇಜಾ ಶೂನ್ಯ ಸುತ್ತಿದರೆ, ಉಮೇಶ್‌ ಯಾದವ್‌ ಮತ್ತು ಸಿರಾಜ್‌ ತಲಾ ಒಂದು ರನ್‌ ಗಳಿಸಲಷ್ಟೇ ಶಕ್ತರಾದರು. ಮುಹಮ್ಮದ್‌ ಶಮಿ 13 ರನ್‌ ಗಳಿಸಿ ಅಜೇಯರಾಗುಳಿದರು.

ಟೀಮ್‌ ಇಂಡಿಯಾದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಯಾವುದೇ ಬ್ಯಾಟರ್‌ಗಳು ಅರ್ಧ ಶತಕದ ಗಡಿಯನ್ನೂ ದಾಟಲಿಲ್ಲ. 49 ರನ್‌ಗಳಿಸಿದ ಕೊಹ್ಲಿಯವರದ್ದೇ ಸರ್ವಾಧಿಕ ಗಳಿಕೆ.

ವಿಜೇತ ತಂಡದ ಪರ ಸ್ಪಿನ್ನರ್‌ ನಾಥನ್‌ ಲಿಯಾನ್‌ 4 ಮತ್ತು ಸ್ಕಾಟ್‌ ಬೊಲಾಂಡ್‌ 3 ವಿಕೆಟ್‌ ಪಡೆದರು. ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಟ್ರಾವಿಡ್‌ ಹೆಡ್‌ ಪಡೆದುಕೊಂಡರು. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...