ಆಸ್ಟ್ರೇಲಿಯಾದಲ್ಲಿ ಹೊಸ ಇತಿಹಾಸ ಬರೆದ ರಾಹುಲ್ – ಜೈಸ್ವಾಲ್

Date:

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕದ ಜೊತೆಯಾಟವಾಡುವ ಮೂಲಕ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. 

ಪರ್ತ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಮೂರನೇ ದಿನವಾದ ಇಂದು ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದೆ. ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಕೆ ಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್​ಗೆ 201 ರನ್​ಗಳ ಜೊತೆಯಾಟವಾಡಿದ್ದಾರೆ.ಟೀ ವಿರಾಮದ ವೇಳೆಗೆ ಭಾರತ 82 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 267 ರನ್‌ ಗಳಿಸಿದೆ.

ಇದಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆರಂಭಿಕ ಜೋಡಿಯ ದಾಖಲೆ ಸುನಿಲ್ ಗವಾಸ್ಕರ್ ಹಾಗೂ ಕೆ ಶ್ರೀಕಾಂತ್ ಹೆಸರಿನಲ್ಲಿತ್ತು. 1986 ರಲ್ಲಿ ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಈ ಜೋಡಿಯು ಮೊದಲ ವಿಕೆಟ್​ಗೆ 191 ರನ್ ಕಲೆಹಾಕಿ ಇತಿಹಾಸ ನಿರ್ಮಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ್ವಿಶತಕದ ಜೊತೆಯಾಟವಾಡುವ ಮೂಲಕ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದರು. ಇದರೊಂದಿಗೆ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ದ್ವಿಶತಕದ ಜೊತೆಯಾಟವಾಡಿದ ಭಾರತದ ಮೊದಲ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿದಾಯ | ರಾಫಾ… ರಾಫಾ… ರಾಫಾ… ಅಭಿಮಾನಿಗಳ ಕೂಗಿಗೆ ಕಣ್ಣೀರಾದ ನಡಾಲ್

ಇದಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆರಂಭಿಕ ಜೋಡಿಯ ದಾಖಲೆ ಸುನಿಲ್ ಗವಾಸ್ಕರ್ ಹಾಗೂ ಕೆ ಶ್ರೀಕಾಂತ್ ಹೆಸರಿನಲ್ಲಿತ್ತು. 1986 ರಲ್ಲಿ ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಈ ಜೋಡಿಯು ಮೊದಲ ವಿಕೆಟ್​ಗೆ 191 ರನ್ ಕಲೆಹಾಕಿ ಇತಿಹಾಸ ನಿರ್ಮಿಸಿದ್ದರು.

ಇದೀಗ 38 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಟೀಮ್ ಇಂಡಿಯಾದ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ.

ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 150 ರನ್​ಗಳಿಗೆ ಆಲೌಟ್ ಆದರೆ, ಆಸ್ಟ್ರೇಲಿಯಾ 104 ರನ್​ಗಳಿಗೆ ಸರ್ವಪತನ ಕಂಡಿತು. 46 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಕೆಎಲ್ ರಾಹುಲ್ (77) ವಿಕೆಟ್ ಕಳೆದುಕೊಂಡು 81 ಓವರ್‌ಗಳಿಗೆ 267 ರನ್​ ಕಲೆಹಾಕಿದೆ.

ಯಶಸ್ವಿ ಜೈಸ್ವಾಲ್ ಅಜೇಯ 141 ಹಾಗೂ ದೇವದತ್‌ ಪಡೀಕಲ್‌ ಅಜೇಯ 17 ರನ್‌ ಪೇರಿಸಿ ಆಟವಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...