ವಿಶ್ವಕಪ್ ಫೈನಲ್ ಸೋಲು | ನಿಮ್ಮ ತಪ್ಪನ್ನು ಕೂಡ ಒಪ್ಪಿಕೊಳ್ಳಿ ಎಂದ ವಾಸೀಂ ಅಕ್ರಂ

Date:

“ಏಕದಿನ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಸೋಲಿನಲ್ಲಿ ಮಾಧ್ಯಮಗಳು, ಸೋಷಿಯಲ್ ಮೀಡಿಯಾ ಹಾಗೂ ಅಭಿಮಾನಿಗಳ ಪಾತ್ರವೂ ಇದೆ. ಅದನ್ನು ನೀವು ಒಪ್ಪಲೇಬೇಕು” ಎಂದು ಪಾಕಿಸ್ತಾನದ ಮಾಜಿ ಆಟಗಾರ ವಾಸೀಂ ಅಕ್ರಂ ಹೇಳಿಕೆ ನೀಡಿದ್ದಾರೆ.

ಅಹಮದಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಏಕದಿನ ವಿಶ್ವಕಪ್ 2023 ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಆರು ವಿಕೆಟ್‌ಗಳ ಸೋಲು ಅನುಭವಿಸಿ, ಚಾಂಪಿಯನ್ ಪಟ್ಟ ಗಳಿಸುವಲ್ಲಿ ಎಡವಿತ್ತು.

ಈ ಬಗ್ಗೆ ಸ್ಟಾರ್ ಸ್ಪೋರ್ಟ್ಸ್‌ ಸಂಸ್ಥೆ ಆಯೋಜಿಸಿದ್ದ ‘ದಿ ಫೈನಲ್ ಟೇಕ್’ ಸಂವಾದದ ವೇಳೆ ಮಾತನಾಡಿದ ವಾಸೀಂ ಅಕ್ರಂ, ಆತಿಥೇಯ ರಾಷ್ಟ್ರವು ಫೈನಲ್ ಪಂದ್ಯವನ್ನು ಆಡುವ ಮೊದಲೇ ಭಾರತದ ಮಾಧ್ಯಮಗಳು, ಸಾಮಾಜಿಕ ಮಾಧ್ಯಮ ಮತ್ತು ಅಭಿಮಾನಿಗಳು ಟೀಮ್ ಇಂಡಿಯಾ ಚಾಂಪಿಯನ್ ಎಂಬಂತೆ ಬಿಂಬಿಸಿದ್ದವು. ಇದು ರೋಹಿತ್ ಶರ್ಮಾ ನೇತೃತ್ವದ ತಂಡದ ಮೇಲೂ ಪರಿಣಾಮ ಬೀರಿದೆ. ‘ಮೆನ್ ಇನ್ ಬ್ಲೂ’ ಪಂದ್ಯಾವಳಿಯುದ್ದಕ್ಕೂ ಅತ್ಯುತ್ತಮವಾಗಿ ಆಡಿದ್ದಾರೆ. ವಿಶ್ವಕಪ್ ಅನ್ನು ಎತ್ತಿ ಹಿಡಿಯಲು ಸಾಧ್ಯವಾಗದಿರುವುದು ಬಹಳ ನೋವಿನ ಸಂಗತಿ. ಅದನ್ನು ನುಂಗಿಕೊಳ್ಳಲು ಕಷ್ಟವಿದೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಟೀಮ್ ಇಂಡಿಯಾವು ಪಂದ್ಯಾವಳಿಯುದ್ದಕ್ಕೂ ಉತ್ತಮವಾಗಿ ಆಡಿತ್ತು. ಆದರೆ ಫೈನಲ್‌ನ ಸೋಲನ್ನು ಮೀರಿ ಮುಂದುವರಿಯುವುದು ಕಠಿಣವಾದುದು ಎಂದು ನಾನು ಅರ್ಥಮಾಡಿಕೊಳ್ಳಬಲ್ಲೆ. ಲೀಗ್ ಸಹಿತ ಒಟ್ಟು 10 ಪಂದ್ಯಗಳನ್ನು ಗೆದ್ದಿದ್ದಾಗ ಟೀಮ್ ಇಂಡಿಯಾ ಸ್ಥಿರವಾಗಿತ್ತು. ಆದರೆ ಸುದ್ದಿ ಚಾನೆಲ್‌ಗಳು, ಸಾಮಾಜಿಕ ಮಾಧ್ಯಮ, ಅಭಿಮಾನಿಗಳು ಫೈನಲ್ ಪಂದ್ಯಕ್ಕೂ ಮುನ್ನವೇ ಭಾರತವನ್ನೇ ವಿಶ್ವಕಪ್ ವಿಜೇತರನ್ನಾಗಿ ಮಾಡಿದ್ದರು. ನಿಮ್ಮ ತಪ್ಪನ್ನು ಕೂಡ ನೀವು ಒಪ್ಪಿಕೊಳ್ಳಬೇಕು. ಟೀಮ್ ಇಂಡಿಯಾ ಚೆನ್ನಾಗಿ ಆಡುತ್ತಿದ್ದರಿಂದ ಜನರ ಭರವಸೆ ಕೂಡ ಹೆಚ್ಚಾಗಿತ್ತು ಅನ್ನುವುದನ್ನು ಕೂಡ ನಾನು ಒಪ್ಪುತ್ತೇನೆ. ಆದರೆ ಅದೊಂದು ಕೆಟ್ಟ ಘಳಿಗೆ. ಆಸ್ಟ್ರೇಲಿಯಾ ಉತ್ತಮವಾಗಿ ಆಡಿದ್ದರಿಂದ ಚಾಂಪಿಯನ್ ಆಯಿತು” ಎಂದು ಅಕ್ರಮ್ ಹೇಳಿದರು.

“1999ರ ವಿಶ್ವಕಪ್ ಫೈನಲ್‌ನಲ್ಲಿ ಪಾಕಿಸ್ತಾನ ಸೋತಿತ್ತು. ಅದಾಗಿ 30 ವರ್ಷಗಳೇ ಕಳೆದಿವೆ. ಆದರೆ ಈ ಬಗ್ಗೆ  ನನ್ನಲ್ಲಿ ಈಗಲೂ ಕೂಡ ಜನ ಪ್ರಶ್ನಿಸುತ್ತಲೇ ಇದ್ದಾರೆ. ಭಾರತ ಮತ್ತು ಪಾಕಿಸ್ತಾನದ ಅಭಿಮಾನಿಗಳಿಗೆ ಆನೆಯ ನೆನಪಿನ ಶಕ್ತಿ ಇದೆ. ಅವತ್ತು ಟಾಸ್ ಗೆದ್ದ ನಂತರ ನಾನು ಏಕೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರಿ ಎಂದು ಈಗಲೂ ನನ್ನನ್ನು ಕೇಳುತ್ತಾರೆ. ಮುಂದಿನ ಆರು ತಿಂಗಳಲ್ಲಿ ಮತ್ತೊಂದು ವಿಶ್ವಕಪ್ ಬರಲಿರುವುದರಿಂದ ಅಭಿಮಾನಿಗಳು ಟೀಮ್ ಇಂಡಿಯಾದ ಸೋಲನ್ನು ಮರೆತು ಒಂದು ರಾಷ್ಟ್ರವಾಗಿ ಮುಂದುವರಿಯಬೇಕು” ಎಂದು ಅಕ್ರಮ್ ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...