ರಾಜ್ಯದಾದ್ಯಂತ ವಾಣಿಜ್ಯ ಉದ್ದೇಶಗಳಿಗಾಗಿ ಅಕ್ರಮವಾಗಿ ಬಳಸಲಾಗುತ್ತಿದ್ದ 316 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಈ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ಗೃಹಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆ ಚುರುಕುಗೊಳಿಸಿರುವ ಇಲಾಖೆ, ಅತ್ಯಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿದೆ.
ರಾಜ್ಯದಾದ್ಯಂತ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 316 ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬೆಂಗಳೂರಿನ ಚಿಕ್ಕಜಾಲದಲ್ಲಿ 209, ಬೆಂಗಳೂರಿನ ಪೀಣ್ಯದಲ್ಲಿ 45, ದಾವಣಗೆರೆಯಲ್ಲಿ 46, ಯಾದಗಿರಿಯಲ್ಲಿ 13, ಶಿವಮೊಗ್ಗದಲ್ಲಿ 3 ಇದರ ಜೊತೆಗೆ, ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ರೀಫಿಲ್ಲಿಂಗ್ ಮಾಡುತ್ತಿದ್ದ ಗ್ಯಾಸ್ ಏಜೆನ್ಸಿ ಅಂಗಡಿಯೊಂದರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿದ್ದೀರಾ? ನೆತನ್ಯಾಹು ಬದುಕಿದ್ದಾರಾ? ಇರಾನ್ ರಣಕಹಳೆಗೆ ತತ್ತರಿಸಿದ ಇಸ್ರೇಲ್
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಒಟ್ಟು ವಾಣಿಜ್ಯ ಸಿಲಿಂಡರ್‌ಗಳಲ್ಲಿ ಶೇಕಡಾ 20ರಷ್ಟನ್ನು ಅಗತ್ಯ ಸೇವೆಗಳಿಗೆ ಮೀಸಲಿಡಲಾಗಿದೆ. ಆಸ್ಪತ್ರೆಗಳು, ಶಾಲೆಗಳು, ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು, ಕ್ಯಾಂಟೀನ್‌ಗಳು, ಪ್ರಸಾದ ವಿತರಣೆಗಾಗಿ ಪ್ರಮುಖ ದೇವಾಲಯಗಳು, ಸರ್ಕಾರಿ ಕಚೇರಿಗಳು, ವೃದ್ದಾಶ್ರಮಗಳು ಮತ್ತು ಪ್ರಮುಖ ಖಾಸಗಿ ವಲಯದ ಕಚೇರಿಗಳಿಗೆ ಇವುಗಳನ್ನು ಆದ್ಯತೆಯ ಮೇರೆಗೆ ವಿತರಿಸಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಒಟ್ಟು 3,86,363 ಗೃಹಬಳಕೆ ಸಿಲಿಂಡರ್‌ಗಳನ್ನು (14.2 ಕೆ.ಜಿ) ಮತ್ತು 6,371 ವಾಣಿಜ್ಯ ಸಿಲಿಂಡರ್‌ಗಳನ್ನು ವಿತರಿಸಲಾಗಿದೆ. ಗೃಹಬಳಕೆಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಲಾಖೆ ಅಭಯ ನೀಡಿದೆ.
ಇಂದು ರಾಜ್ಯದಾದ್ಯಂತ ಒಟ್ಟು 3,86,363 ಗೃಹಬಳಕೆ ಸಿಲಿಂಡರ್‌ಗಳನ್ನು(14.2ಕೆಜಿ) ಮತ್ತು 6,371 ವಾಣಿಜ್ಯ ಸಿಲಿಂಡರ್‌ಗಳನ್ನು ವಿತರಿಸಲಾಗಿದೆ. ಗೃಹಬಳಕೆಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಸಾರ್ವಜನಿಕರಿಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಲಾಖೆ ಭರವಸೆ ನೀಡಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿಯಲ್ಲಿ ತಿಳಿಸಿದೆ.





