ಶೇ.95ರಷ್ಟು ಖಾಸಗಿ ನೀರಿನ ಟ್ಯಾಂಕರ್ ನೋಂದಣಿ ಕಾರ್ಯ ಪೂರ್ಣ: ಜಲಮಂಡಳಿ ಅಧ್ಯಕ್ಷ

Date:

  • ಕೊಳಚೆ ಪ್ರದೇಶದ ಭಾಗಗಳಿಗೆ ಸಮರ್ಪಕ ನೀರು ಪೂರೈಸುವಂತೆ ಸೂಚನೆ
  • ನೋಂದಣಿ ಆಗದ ಖಾಸಗಿ ನೀರಿನ ಟ್ಯಾಂಕರ್‌ಗಳ ಮೇಲೆ ಕಾನೂನು ಕ್ರಮ

“ಬೆಂಗಳೂರಿನಲ್ಲಿ ಖಾಸಗಿ ನೀರಿನ ಟ್ಯಾಂಕರ್‌ಗಳ ನೋಂದಣಿ ಕಾರ್ಯ ಮುಗಿದಿದ್ದು, ಶೇ.95 ರಷ್ಟು ಖಾಸಗಿ ನೀರಿನ ಟ್ಯಾಂಕರ್‌ಗಳನ್ನ ಈಗಾಗಲೇ ನೋಂದಾಯಿಸಲಾಗಿದೆ. ನೋಂದಣಿ ಆಗದೆ ಇರುವಂತಹ ಖಾಸಗಿ ನೀರಿನ ಟ್ಯಾಂಕರ್‌ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಮಾರ್ಚ್‌ 17ರಂದು ಬೆಂಗಳೂರಿನ ಕೊಳಚೆ ಪ್ರದೇಶಗಳಾದ ಭಾಶ್ಯಾಂ ಪಾರ್ಕ್, ದೀನ ಬಂಧು ನಗರ, ಶ್ರೀ ರಾಮ ನಗರಿ ಸೇರಿದಂತೆ ಜನಸಂದ್ರತೆಯ ಪ್ರದೇಶಗಳಿಗೆ ಭೇಟಿ ನೀಡಿ ನಾಗರಿಕರೊಂದಿಗೆ ನೀರಿನ ವಿತರಣೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಮುಂದುವರೆದು ಮಾತನಾಡಿದ ಅವರು, “ಕಾವೇರಿ ನೀರಿನ ಸಂಪರ್ಕ ಇರುವಂತಹ ಪ್ರದೇಶಗಳಲ್ಲಿ ಈಗಾಗಲೇ ಸಮರ್ಪಕವಾದ ವಿತರಣೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನಗರದ ಎಲ್ಲ ಭಾಗದಲ್ಲಿ ಟ್ಯಾಂಕ್‌ಗಳನ್ನು ಅಳವಡಿಸುವ ಮೂಲಕ ಉಚಿತವಾಗಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರು ಪೂರೈಸುವ ಖಾಸಗಿ ಟ್ಯಾಂಕರ್‌ಗಳ ನೋಂದಣಿ ಪ್ರಕ್ರಿಯೆಯ ಗಡುವು ದಿನಾಂಕ ಮಾರ್ಚ್ 15ಕ್ಕೆ ಮುಗಿದಿದೆ. ಶೇ.95 ರಷ್ಟು ನೀರಿನ ಖಾಸಗಿ ಟ್ಯಾಂಕರ್‌ಗಳನ್ನ ನೋಂದಾಯಿಸಲಾಗಿದೆ. ಕೆಲವೆಡೆ ಟ್ರ್ಯಾಕ್ಟರ್ ಮಾರ್ಪಾಡಿಸಿ ನೀರಿನ ಟ್ಯಾಂಕರ್‌ಗಳಾಗಿ ಪರಿವರ್ತಿಸಲಾಗಿದೆ. ಇವುಗಳ ಮೇಲೆಯೂ ನಿಗಾ ಇಡಲಾಗುವುದು. ನೋಂದಣಿಗೆ ಗಡುವು ನೀಡಿದ ಸಮಯದಲ್ಲಿ ನೋಂದಣಿ ಮಾಡದೆ ಇರುವಂತಹ ಖಾಸಗಿ ನೀರಿನ ಟ್ಯಾಂಕರ್‌ಗಳ ಮಾಲೀಕರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ನೀರಿನ ಸಮಸ್ಯೆ | ಪರ್ಯಾಯ ಮಾರ್ಗ ಹುಡುಕದೆ ಕಾಲಹರಣ ಮಾಡುತ್ತಿರುವ ರಾಜ್ಯ ಸರ್ಕಾರ: ಆರ್ ಅಶೋಕ್ ಟೀಕೆ

“ನಗರದ ಹೊರಭಾಗದಲ್ಲಿ ಇರುವಂತಹ ಗ್ರಾಮಗಳಿಗೆ ಇನ್ನು ಕಾವೇರಿ ನೀರಿನ ಸಂಪರ್ಕ ನೀಡಲಾಗಿಲ್ಲ. ಈ ಭಾಗದಲ್ಲಿ ಅಂತರ್ಜಲದ ಮೇಲೆ ಹೆಚ್ಚಿನ ಅವಲಂಬನೆ ಇದೆ. ಈ ಪ್ರದೇಶದಲ್ಲಿ ಬಿಬಿಎಂಪಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ನಗರದ ಹೊರಭಾಗದ ಗ್ರಾಮಗಳಿಗೂ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ದಿನದ 24 ಗಂಟೆಗಳ ಕಾಲ ನಗರದ ಕುಡಿಯುವ ನೀರು ಸರಬರಾಜು ಸಮರ್ಪಕವಾಗಿ ನಡೆಯುವಂತೆ ಮಂಡಳಿ ವತಿಯಿಂದ ನಿಗಾ ವಹಿಸಲಾಗುತ್ತಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...