‌ಕಲಬುರಗಿ | ತಲೆ ಮೇಲೆ ಶಾಲಾ ವಾಹನ ಹರಿದು 3 ವರ್ಷದ ಬಾಲಕಿ ಸಾವು

Date:

ತಲೆ ಮೇಲೆ ಶಾಲಾ ವಾಹನ ಹರಿದು ಮೂರು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.

ರಾಜಶೇಖರ್ ಎಂಬುವರ ಪುತ್ರಿ ಖುಷಿ ಬನ್ನಟ್ಟಿ (3) ಮೃತ ಬಾಲಕಿ. ಶಾಲಾ ವಾಹನದಲ್ಲಿ ಅಣ್ಣ ಬಂದಿದ್ದ ವೇಳೆ ಆತನನ್ನು ಕರೆಯಲು ತಂದೆಯ ಹಿಂದೆ ಖುಷಿ ಹೋಗಿದ್ದಳು. ಆದರೆ, ತಂದೆ ಈಕೆ ಬಂದಿರುವುದನ್ನು ಗಮನಿಸಿರಲಿಲ್ಲ. ಅಣ್ಣ ಬಸ್‌ನಿಂದ ಇಳಿದ ಬಳಿಕ ಶಾಲಾ ವಾಹನದ ಚಾಲಕ ಬಸ್ ಹಿಂದೆ ತಿರುಗಿಸಿದ್ದಾನೆ. ಈ ವೇಳೆ ಚಾಲಕ ವಾಹನ ಹಿಂದಕ್ಕೆ ತಿರುಗಿಸಿಕೊಳ್ಳುವಾಗ ಹಿಂಬದಿಯಿದ್ದ ಬಾಲಕಿ ಮೇಲೆ ಹರಿಸಿದ್ದಾನೆ. ಬಾಲಕಿ ಹಿಂದಿನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆʼ ಎಂದು ಎನ್ನಲಾಗಿದೆ.

ಇತ್ತೀಚೆಗಷ್ಟೇ ರಾಯಚೂರು ಜಿಲ್ಲೆಯಲ್ಲಿ ನಡೆದ ಶಾಲಾ ವಾಹನದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ನಾಲ್ವರ ವಿದ್ಯಾರ್ಥಿಗಳಿಗೆ ಕಾಲು ತುಂಡಾಗಿತ್ತು. ಹಲವಾರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು. ರಾಯಚೂರು ಘಟನೆ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ದುರಂತ ನಡೆದು ಹೋಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ | ಗೌಪ್ಯ ವಿಚಾರಣೆ ನಡೆಸುವುದಿಲ್ಲ: ಹೈಕೋರ್ಟ್

ಈ ದುರ್ಘಟನೆಗೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಬಾಲಕಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...